Homeಕರ್ನಾಟಕಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ

ಮತೀಯ ದ್ವೇಷ ಬಿತ್ತಲು ಸುಳ್ಳು ಹೇಳುವ ಮಟ್ಟಕ್ಕೆ ಪ್ರಧಾನಿ ಇಳಿಯಬಾರದಿತ್ತು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು’’ ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಹೇಳಿರುವುದು ಅತ್ಯಂತ ವಿಷಾದನೀಯವಾದುದು. ಮತೀಯ ದ್ವೇಷ ಹುಟ್ಟಿಸಬೇಕೆಂಬ ಏಕೈಕ ದುರುದ್ದೇಶದಿಂದ ಈ ರೀತಿಯ ಸುಳ್ಳುಗಳನ್ನು ಹೇಳುವ ಮಟ್ಟಕ್ಕೆ ದೇಶದ ಪ್ರಧಾನಿ ಇಳಿಯಬಾರದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾಷಣ ಮತ್ತು ಬರವಣಿಗೆಗಳ ಹನ್ನೆರಡು ಸಂಪುಟಗಳನ್ನು ಮಹಾರಾಷ್ಟ್ರ ಸರ್ಕಾರ ವರ್ಷಗಳ ಹಿಂದೆಯೇ ಪ್ರಕಟ ಮಾಡಿದೆ. ಅವುಗಳ ಕನ್ನಡ ಅನುವಾದವನ್ನು ನಮ್ಮ ಸರ್ಕಾರವೇ ಮುದ್ರಿಸಿದೆ. ಅಲ್ಲೆಲ್ಲಾದರೂ ಧರ್ಮಾಧಾರಿತ ಮೀಸಲಾತಿ ಬೇಡ ಇಲ್ಲವೇ ಬೇಕು ಎನ್ನುವ ಅಂಬೇಡ್ಕರ್ ಅವರ ಅಭಿಪ್ರಾಯದ ಉಲ್ಲೇಖ ಇದ್ದರೆ ಅದನ್ನು ಪ್ರಧಾನಿ ಮೋದಿಯವರು ದೇಶದ ಜನರ ಮುಂದಿಡಬೇಕು, ಇಲ್ಲವಾದರೆ ಇಂತಹದ್ದೊಂದು ಸುಳ್ಳನ್ನು ಹೇಳಿರುವುದಕ್ಕಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಮೀಸಲಾತಿ ಖಂಡಿತ ಧರ್ಮಾಧಾರಿತವಾದುದ್ದಲ್ಲ ಎನ್ನುವ ಸರಳವಾದ ಸತ್ಯವನ್ನು ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳದೆ ಹೋಗಿರುವುದು ದುರಂತವೇ ಸರಿ. ಮುಸ್ಲಿಮರಿಗೆ ಅವರೊಳಗಿನ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿಯುವಿಕೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡಲಾಗಿದೆಯೇ ಹೊರತು ಅದು ಧರ್ಮಾಧರಿತವಾದುದ್ದಲ್ಲ. ಇದನ್ನು ನಾನು ಹಲವು ಬಾರಿ ವಿಧಾನಮಂಡಲದ ಒಳಗೆ ಮತ್ತು ಹೊರಗೆ ಹೇಳಿದ್ದೇನೆ ಎಂದಿದ್ದಾರೆ.

ಬಿಜೆಪಿಯ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದ ನಾಯಕರು ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರೇ ಬಹಿರಂಗವಾಗಿ ಮುಸ್ಲಿಂ ಮೀಸಲಾತಿಯನ್ನು ಬೆಂಬಲಿಸುತ್ತಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಪ್ರಾಯ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ ಎಂದು ಸಿಎಂ ಕೇಳಿದ್ದಾರೆ.

ಮುಸ್ಲಿಮರಲ್ಲಿನ ಹಿಂದುಳಿಯುವಿಕೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ತಿಳಿದುಕೊಳ್ಳಲು ಬಯಸುವುದಾದರೆ ಈ ಬಗ್ಗೆಯೇ ಅಧ್ಯಯನ ಮಾಡಿರುವ ಸಾಚಾರ್ ಸಮಿತಿಯ ವರದಿಯನ್ನು ಪರಿಶೀಲಿಸುವ ಕಷ್ಟ ತೆಗೆದುಕೊಳ್ಳಬೇಕು. ಆ ವರದಿಯ ಪ್ರಕಾರ ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರಗಳಲ್ಲಿ ಮುಸ್ಲಿಮರ ಪ್ರಾತಿನಿಧ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಕಡಿಮೆ ಇದೆ ಎಂದು ಹೇಳಿದ್ದಾರೆ.

ಮುಸ್ಲಿಂ ಸಮುದಾಯದ ಹಿತರಕ್ಷಣೆಗಾಗಿಯೇ ತಲಾಖ್ ನಿಷೇಧ ಮಾಡಿದ್ದೇವೆ, ವಕ್ಪ್ ಕಾಯ್ದೆಗೆ ತಿದ್ದುಪಡಿ ಮಾಡಿದ್ದೇವೆ ಎಂದು ಒಂದೆಡೆ ತಮ್ಮನ್ನು ಮುಸ್ಲಿಂ ಸಮುದಾಯದ ಸುಧಾರಕರಂತೆ ತಮ್ಮನ್ನು ಬಿಂಬಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು, ಇನ್ನೊಂದೆಡೆ ಬಜರಂಗದಳದ ಕಾರ್ಯಕರ್ತನಂತೆ ಕೋಮುದ್ವೇಷವನ್ನು ಉಗುಳುತ್ತಿರುವುದು ಅವರು ಕೂತಿರುವ ಕುರ್ಚಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದಿದ್ದಾರೆ.

ವಕ್ಪ್ ಬೋರ್ಡಿನಲ್ಲಿ ಮುಸ್ಲಿಮೇತರರನ್ನು ಕಡ್ಡಾಯವಾಗಿ ಸದಸ್ಯರನ್ನಾಗಿ ಮಾಡುವ ತಿದ್ದುಪಡಿ ಕೋಮುದ್ವೇಷದಿಂದ ಕೂಡಿರುವುದು ಮೇಲ್ನೋಟದಲ್ಲಿಯೇ ಸಾಬೀತಾಗುತ್ತದೆ. ಇದೇ ಮಾನದಂಡವನ್ನು ಮುಂದಿನ ದಿನಗಳಲ್ಲಿ ಹಿಂದೂ ಮಠ-ಮಂದಿರಗಳಿಗೂ ವಿಸ್ತರಿಸಬೇಕೆಂಬ ಬೇಡಿಕೆ ಹುಟ್ಟಿಕೊಂಡರೆ ಸಮಾಜದಲ್ಲಿ ಅನವಶ್ಯಕವಾಗಿ ಧರ್ಮ-ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುವುದಿಲ್ಲವೇ? ದೇಶದ ಪ್ರಧಾನಿಯಾದವರು ಇಂತಹ ಸಂಘರ್ಷಗಳನ್ನು ನಿಯಂತ್ರಿಸಲು ಪ್ರಯತ್ನಿಸಬೇಕೇ ಹೊರತು ಹುಟ್ಟು ಹಾಕುವುದಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ದಲಿತರ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡಲಾಗಿದೆ ಎನ್ನುವ ಇನ್ನೊಂದು ಸುಳ್ಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂತಹ ಆಧಾರ-ತಲೆಬುಡ ಇಲ್ಲದ ಆರೋಪಗಳನ್ನು ಮಾಡುವಾಗ ಪ್ರಧಾನಿಯವರು ಕನಿಷ‍್ಠ ವಾಸ್ತವಾಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನವನ್ನಾದರೂ ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗಿದೆಯೇ ಹೊರತು ಕಡಿಮೆ ಮಾಡಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ಶಿಫಾರಸಿನ ಆಧಾರದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ ಮೂರರಿಂದ ಏಳಕ್ಕೆ ಹೆಚ್ಚಿಸಲಾಗಿದೆ. ಹೀಗಿರುವಾಗ ಅವರಿಂದ ಕಿತ್ತುಕೊಳ್ಳುವುದೇನು ಬಂತು? ಇಂತಹ ಮೂಲಭೂತ ಮಾಹಿತಿಯೂ ಇಲ್ಲದ ಪ್ರಧಾನಿ ಮೋದಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ತಮ್ಮ ಘನತೆಯನ್ನು ತಾವೇ ಹಾಳುಗೆಡಹುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ಧಾರೆ.

ಮುಡಾ ಪ್ರಕರಣ| ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...