Homeಕರ್ನಾಟಕಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ...

ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಕೊನೆಗೂ ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ”ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳಲ್ಲಿ ಪ್ರಮುಖವಾದವು ಐದು ಗ್ಯಾರಂಟಿ ಯೋಜನೆಗಳು. ಆ ಐದರಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ದತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

”2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಹಿಂದಿನ ನಮ್ಮ ಸರ್ಕಾರ ಈಡೇರಿಸಿದ್ದು, ಅದರ ಬಗೆಗಿನ ವಿವರವಾದ ಅಧಿಕೃತ ಮಾಹಿತಿಯನ್ನು ರಾಜ್ಯದ ಜನರ ಮುಂದಿಟ್ಟಿದ್ದೇವೆ. ಈ ನಮ್ಮ ಬದ್ದತೆ ಕೂಡಾ ನಿಮಗೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆʼʼ ಎಂದು ಹೇಳಿದ್ಧಾರೆ.

”2014 ಮತ್ತು 2018ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ ಬಿಡುಗಡೆಗೊಳಿಸಿರುವ ಎರಡು ಪ್ರಣಾಳಿಕೆಗಳು ನನ್ನ ಮುಂದಿದೆ. ಮೂರನೇ ಬಾರಿ ಪ್ರಧಾನ ಮಂತ್ರಿಯಾಗಲು ಹೊರಟಿರುವ ನರೇಂದ್ರ ಮೋದಿಯವರೇ, ದಯವಿಟ್ಟು ಈ ಎರಡು ಪ್ರಣಾಳಿಕೆಗಳಲ್ಲಿನ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಲೆಕ್ಕವನ್ನು ನಮಗಲ್ಲವಾದರೂ ದೇಶದ ಜನತೆಗೆ ಕೊಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್ ಚೌಧರಿ ವಾಗ್ದಾಳಿ

”ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನೇತೃತ್ವದ ಕೆಂದ್ರ ಸರ್ಕಾರವು ಬಹಳಷ್ಟು ಮೀನಮೇಷ ಎಣಿಸಿದ ನಂತರ ಅಂತಿಮವಾಗಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ರೂ.200 ಕಡಿಮೆ ಮಾಡಿ ಘೋಷಣೆ ಮಾಡಿದೆ. ಆದರೆ, ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ ಎನ್ನುವುದು ನಿಚ್ಚಳಗೊಂಡಿದೆ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಎಂದು ನಿಮ್ಮದೇ ಮಂತ್ರಿಮಂಡಲದ ಸಚಿವರು ಹೇಳುವ ಮೂಲಕ ಅದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

”ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಅನಿಲ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ” ಎಂದು ಅವರು ಟೀಕಿಸಿದ್ದಾರೆ.

”ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅವರ ಪಕ್ಷದಲ್ಲಿ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು” ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...