Homeಕರ್ನಾಟಕಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ

ಬಿ.ಕೆ ಹರಿಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕರಾವಳಿಯ ಪರಿಸ್ಥಿತಿಗಳ ಬಗ್ಗೆ ಚರ್ಚೆ

- Advertisement -
- Advertisement -

ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಅವರ ಮನೆಗೆ ಗುರುವಾರ (ಮೇ.29) ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿಯ ಪ್ರಸ್ತುತ ಪರಿಸ್ಥಿತಿಯ ಕುರಿತು ಗಂಭೀರ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ಯಾವುದೇ ಕಾರಣಕ್ಕೂ ದ್ವೇಷ ಇರಬಾರದು ಎಂಬ ಬಗ್ಗೆಯೂ ಬಿ.ಕೆ ಹರಿಪ್ರಸಾದ್ ಅವರ ಜೊತೆ ಚರ್ಚಿಸಿದೆ ಎಂದು ಹೇಳಿದರು.

ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ಡಿಸಿ, ಸಿಇಒಗಳೊಂದಿಗೆ ಎರಡು ದಿನ ಸಭೆ

ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ನಡೆಯಲಿರುವ ಡಿಸಿ ಹಾಗೂ ಸಿಇಒಗಳ ಸಭೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಕೀಯ ಉದ್ದೇಶದ ಭೇಟಿಯಲ್ಲ: ಬಿ.ಕೆ ಹರಿಪ್ರಸಾದ್ 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನನ್ನ ನಿವಾಸಕ್ಕೆ ಸೌಹಾರ್ದಿತ ಭೇಟಿ ನೀಡಿದರು. ಮಂಗಳೂರು ಮತ್ತು ಕರಾವಳಿ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಧ್ರುವೀಕರಣದ ಕುರಿತು ಗಂಭೀರ ಚರ್ಚೆ ನಡೆಯಿತು. ಶಾಂತಿ, ಬಾಂಧವ್ಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಕಾಪಾಡುವ ಅಗತ್ಯದ ಬಗ್ಗೆ ಒತ್ತಡ ನೀಡಲಾಯಿತು. ಈ ಭೇಟಿಗೆ ರಾಜಕೀಯ ಉದ್ದೇಶ ಇದೆ ಎಂಬ ಊಹಾಪೋಹಗಳು ಸಂಪೂರ್ಣ ನಿರಾಧಾರ ಎಂದು ಬಿ.ಕೆ ಹರಿಪ್ರಸಾದ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ. 
https://naanugauri.com/threats-to-witnesses-in-journalist-gauri-lankesh-murder-case/
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This government is totally failed in handling communal clashes in Manglore. Siddaramaiah showing soft corner to BJP/Rss/and othe fake Hinduthwa organisations.
    Home Ministers can’t handle his portfolio. I am being Being a stanch supporter congress really fed up with Governments failure.
    Of party

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...