Homeಕರ್ನಾಟಕಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಮೃತರ ಕುಟುಂಬಕ್ಕೆ ತಲಾ...

ಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ

- Advertisement -
- Advertisement -

ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಮಂದಿ ಸಾವನ್ನಪ್ಪಿದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಅ.24) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ.

ವರದಿಗಳ ಪ್ರಕಾರ, ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಕಾರ್ಮಿಕ ಇಲಾಖೆಯಿಂದ ತಲಾ 3 ಲಕ್ಷ ರೂ., ಬಿಬಿಎಂಪಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಮೃತರ ಕುಟುಂಬಸ್ಥರಿಗೆ ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನು ಸಂಪೂರ್ಣವಾಗಿ ಇಲಾಖೆಗಳಿಂದಲೇ ಭರಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ನಿಯಮಬಾಹಿರವಾಗಿ, ಸೂಕ್ತ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ಕಟ್ಟಡ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ಕೆಲಸ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಇಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತರಾದ ತುಷಾರ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.

“ಮುಂದೆ ಇಂತಹ ದುರ್ಘಟನೆಗಳು ನಡೆಯದ ರೀತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ” ಎಂದು ಹೇಳಿದ್ದಾರೆ.

ದುರ್ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಸಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : “ಪೇಜಾವರ ಶ್ರೀ ಜಾತ್ಯತೀತತೆ ಬಗ್ಗೆ ಮಾತಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ” : ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...