Homeಕರ್ನಾಟಕನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -
- Advertisement -

ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ. ತ್ವರಿತ ವಿಚಾರಣೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಪ್ರತ್ಯೇಕ ವಿಚಾರಣೆ ಮಾಡಿ ಅಪರಾಧಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ:

ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿಯವರು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. ನನ್ನ ಅವಧಿಯಲ್ಲಿ ಅನೇಕ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ರಾಜಕೀಯದ ಬಗ್ಗೆ ಇಲ್ಲಿ ಮಾತನಾಡುವುದು ಸೂಕ್ತವಲ್ಲ. ನೊಂದ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಲು ಬಂದಿದ್ದೇನೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು, ಅವರೊಂದಿಗೆ ನಾವು ಇರುತ್ತೇವೆ. ನೇಹಾ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಅಗತ್ಯ ಬಿದ್ದರೆ ರಕ್ಷಣೆ ಒದಗಿಸುತ್ತೇವೆ :

ಆರೋಪಿ ಫಯಾಝ್‌ಗೆ ಕುಮ್ಮಕ್ಕು ಕೊಟ್ಟವರ ಬಂಧನವಾಗಬೇಕು. ಜೀವ ಬೆದರಿಕೆ ಇರುವುದರಿಂದ ನಮಗೆ ರಕ್ಷಣೆ ನೀಡಬೇಬೇಕು ಎಂಬ ನೇಹಾ ಕುಟುಂಬಸ್ಥರ ಬೇಡಿಕೆ ಬಗ್ಗೆ ಮಾತನಾಡಿದ ಸಿಎಂ, ಅಗತ್ಯ ಬಿದ್ದರೆ ರಕ್ಷಣೆ ಕೊಡುತ್ತೇವೆ. ಎಲ್ಲಾ ದೃಷ್ಟಿಯಿಂದಲೂ ತನಿಖೆ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಹೇಳಿದರು.

ತನಿಖೆ ಮಾಡಿ ಅಪರಾಧ ಪಟ್ಟಿ ಹಾಕಿದ ನಂತರ ವಿಚಾರಣೆ ಮಾಡಲಾಗುತ್ತದೆ. ಕಾಲೇಜು ಕ್ಯಾಂಪಸ್‌ನಲ್ಲಿಯೂ ಭದ್ರತೆ ಬಗ್ಗೆ ನೇಹಾ ತಂದೆ ಹೇಳಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ನೇಹಾ ತಂದೆ ನಿರಂಜನ್ ಮಾತನಾಡಿ, ನೇಹಾ ಕೊಲೆ ನಾವು ಊಹಿಸದ ರೀತಿಯಲ್ಲಿ ನಡೆದಿದ್ದು, ಎಲ್ಲಾ ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿದ್ದಾರೆ, ಹೋರಾಟ ಮಾಡಿದ್ದಾರೆ. ಈ ಹೋರಾಟದಿಂದ ನಮಗೂ ಶಕ್ತಿ ಬಂದಿದೆ. ರಾಜ್ಯದ ಎಲ್ಲೆಡೆಯಿಂದ ಬೆಂಬಲ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಕೆ.ಪಾಟೀಲ್, ಉಸ್ತುವಾರಿ ಸಚಿವ ಸಂತೋಷ್ ಲಾಡ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಆಸೂಟಿ ಸೇರಿದಂತೆ ಅನೇಕ ಮುಖಂಡರು ನಮ್ಮ ಜೊತೆ ನಿಂತಿದ್ದಾರೆ ಎಂದರು.

ನೇಹಾ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ವಿವಿಧ ಸಂಘ ಸಂಸ್ಥೆಗಳ ವರದಿಗಳು ಹಾಗೂ ನಮ್ಮ ಬೇಡಿಕೆಗಳನ್ನು ಪರಿಶೀಲಿಸಿ, ನಾಲ್ಕನೇ ದಿನಕ್ಕೆ ತುರ್ತಾಗಿ ತನಿಖೆಗೆ ಆದೇಶವನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಬೇಕೆಂಬ ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾನೂನು ಸಚಿವರು ಎಲ್ಲರೂ ಕೂಡಿ ನಡೆಸಿಕೊಟ್ಟಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರು ನನ್ನನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರ ಪಡೆದಿದ್ದಾರೆ. 90 ದಿನದೊಳಗೆ ಅಥವಾ ಗರಿಷ್ಠ 120 ದಿನದೊಳಗೆ ನ್ಯಾಯ ಒದಗಿಸುವುದಾಗಿ, ಅದರಲ್ಲಿಯೂ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ನನ್ನ ಮಗಳಿಗೆ ನ್ಯಾಯ ಒದಗಿಸಬೇಕು ಎಂದು ಸಿಎಂ, ಡಿಸಿಎಂ ಹಾಗೂ ಇನ್ನಿತರ ಪ್ರಮುಖ ನಾಯಕರನ್ನು ಕೋರುವುದಾಗಿ ನೇಹಾ ತಂದೆ ನಿರಂಜನ್ ತಿಳಿಸಿದರು. ನನ್ನ ಮನೆಗೆ ನಾಯಕರು, ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಕ್ಕೆ ಧನ್ಯವಾದಗಳು ಎಂದರು.

ಇದನ್ನೂ ಓದಿ : ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...