Homeಕರ್ನಾಟಕವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಗೈರಾದ ಸಿಎಂ ಸಿದ್ದರಾಮಯ್ಯ

ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಗೈರಾದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಿಂದ ಸಿಎಂ ಸಿದ್ದರಾಮಯ್ಯನವರು ದೂರ ಉಳಿದಿದ್ದಾರೆ.

ಇಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ವಿಶ್ವವಾಣಿ ಪ್ರಕಟಿಸಿರುವ ಆರು ಪುಸ್ತಕಗಳು ಬಿಡುಗಡೆಯಾದವು. ಈ ಪುಸ್ತಕಗಳ ಲೋಕಾರ್ಪಣೆಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಬಹಳಷ್ಟು ಜನರು “ವಿಶ್ವೇಶ್ವರ ಭಟ್ ಪತ್ರಕರ್ತರಾಗಿ ಕೆಲಸ ಮಾಡುವುದಕ್ಕಿಂತಲೂ ಮಹಿಳೆಯರನ್ನು ಹೀಗಳೆಯುತ್ತಾ, ಸಾವುಗಳನ್ನು ಸಂಭ್ರಮಿಸುತ್ತಾ ವಿಕೃತತೆ ಮೆರೆದಿದ್ದಾರೆ. ತಮ್ಮ ಲೇಖನದಲ್ಲಿ ರಾಷ್ಟ್ರಪತಿ ಮುರ್ಮುರವರ ಬಣ್ಣವನ್ನು ಹೀಯಾಳಿಸಿ ಜನಾಂಗೀಯತೆ ಮೆರೆದಿದ್ದಾರೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಕೊಲೆಯನ್ನು ಸಮರ್ಥಿಸಿದ್ದಾರೆ. ಅಂತಹ ವ್ಯಕ್ತಿಯ ಪುಸ್ತಕಗಳನ್ನು ಜಾತ್ಯಾತೀತರೆನಿಸಿಕೊಂಡ ಸಿದ್ದರಾಮಯ್ಯನವರು ಬಿಡುಗಡೆ ಮಾಡುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದರು.

ಖ್ಯಾತ ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ಸಾವಿರಾರು ಜನರು ಸಿದ್ದರಾಮಯ್ಯನವರು ಆ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಬಾರದೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಇಂದಿನ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿರುವ ಫೋಟೊಗಳನ್ನು ಸಿಎಂ ಆಫ್ ಕರ್ನಾಟಕ ಟ್ವಿಟರ್ ಅಕೌಂಟ್‌ನಿಂದ ಹಂಚಿಕೊಳ್ಳಲಾಗಿತ್ತು. ಆನಂತರ ರಾಜ್ಯದ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಸಿಎಂ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು.

ಸಿಎಂ ಭಾಗವಹಿಸದಿರುವ ಬಗ್ಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಪ್ರಸ್ತಾವನೆಯಲ್ಲಿ ಮಾತನಾಡಿರುವ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, “ಅನಿವಾರ್ಯ ಕಾರಣಗಳಿಂದ ಈ ಕಾರ್ಯಕ್ರಮಕ್ಕೆ ಬರಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರ ‘ಅನಿವಾರ್ಯತೆ’ ಏನು ಎನ್ನುವುದು ಇಲ್ಲಿರುವ ಎಲ್ಲರಿಗೂ ಅರ್ಥವಾಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯನವರು ಭಾಗವಹಿಸದಿದ್ದರೂ ವೇದಿಕೆಯ ಬ್ಯಾನರ್‌ನಲ್ಲಿ ಅವರ ದೊಡ್ಡದಾದ ಭಾವಚಿತ್ರ ಮತ್ತು ಪುಸ್ತಕ ಬಿಡುಗಡೆ ಅವರಿಂದಲೇ ಎಂದು ಬರೆದಿರುವುದು ಕಂಡುಬಂದಿದೆ.

ಈ ಹಿಂದೆ ಸಿದ್ದರಾಮಯ್ಯನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಕ್ಲಬ್‌ಹೌಸ್‌ನಲ್ಲಿ ವಿಶ್ವವಾಣಿಯ ಕ್ಲಬ್‌ನಲ್ಲಿ ಒಮ್ಮೆ ಮಾತನಾಡಿದ್ದರು. ಆಗ ಅಂತಹ ವಿರೋಧ ಕಂಡುಬಂದಿರಲಿಲ್ಲ. ಆದರೆ ಅವರು ಸಿಎಂ ಆದ ನಂತರ ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗಬಾರದೆಂದು ದೊಡ್ದ ಒತ್ತಾಯ ಕೇಳಿಬಂದಿತ್ತು.

ಇದನ್ನೂ ಓದಿ: ವಿಶ್ವೇಶ್ವರ ಭಟ್ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ: ತೀವ್ರ ಆಕ್ರೋಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...