Homeಕರ್ನಾಟಕಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ : ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

- Advertisement -
- Advertisement -

ಮುಡಾ ಪ್ರಕರಣ ಸಂಬಂಧ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 29ಕ್ಕೆ ನಿಗದಿ ಮಾಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು.

“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದ್ದು,ಈ ಮೂಲಕ ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಲಾಗಿದೆ. ಸಚಿವ ಸಂಪುಟದ ಸಲಹೆಯನ್ನು ರಾಜ್ಯಪಾಲರು ನಿರಾಕರಿಸಿದ್ದಾರೆ. ಯಾವ ಕಾರಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅಂಶವನ್ನೇ ಅವರು ಇನ್ನೂ ವಿವರಿಸಿಲ್ಲ. ಹಾಗಾಗಿ, ಈ ಅನುಮತಿ ರಾಜಕೀಯ ದುರುದ್ಧೇಶಗಳಿಂದ ಕೂಡಿರುವುದಾಗಿ ಪರಿಗಣಿಸಬೇಕು” ಎಂದು ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದ್ದಾರೆ.

“ನಿವೇಶನಗಳ ಬದಲಿ ಹಂಚಿಕೆ ಮಾಡಿರುವ ಪ್ರಕ್ರಿಯೆ ಈ ಬಿಜೆಪಿಯ ಅಧಿಕಾರವದಿಯಲ್ಲಿ ಅವಧಿಯಲ್ಲಿ ನಡೆದಿದೆ. ಸಿದ್ದರಾಮಯ್ಯ ವಿರುದ್ದ ಯಾವುದೇ ದಾಖಲೆಗಳು ಕಂಡು ಬಂದಿಲ್ಲ ಅಲ್ಲದೆ, ಭಾರತೀಯ ನಾಗರಿಕ ನ್ಯಾಯ ಸಂಹಿತೆಯ ಸೆಕ್ಷನ್ 218ರ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಆದರೆ, ಈ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕಾದಲ್ಲಿ ನಿರ್ದಿಷ್ಟ ಅಪರಾಧವನ್ನು ಒಳಗೊಂಡಿರಬೇಕು. ಅಲ್ಲದೆ, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಅದು ನಡೆದಿರಬೇಕು ” ಎಂದು ಹೇಳಿದ್ದಾರೆ.

ವಕೀಲ ಟಿಜೆ ಅಬ್ರಾಹಂ ದೂರು ಸಲ್ಲಿಸಿದ ದಿನವೇ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸುಮಾರು 12 ಅರ್ಜಿಗಳು ಬಾಕಿಯಿವೆ. ಅವೆಲ್ಲನ್ನು ಬಿಟ್ಟು ದೂರು ಕೊಟ್ಟ ತಕ್ಷಣದಲ್ಲಿ ನೋಟಿಸಿ ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಉದ್ದೇಶವಾಗಿದೆ” ಎಂದು ವಿವರಿಸಿದ್ದಾರೆ.

ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ಸಿದ್ದರಾಮಯ್ಯ ವಿರುದ್ದ ಕ್ರಮ ಕೈಗೊಳ್ಳಲು ಅನುಮತಿ ನಿರಾಕರಿಸಿದ ಸಚಿವ ಸಂಪುಟದ ನಿರ್ಧಾರವು, ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ರಿಟ್‌ ಅರ್ಜಿಯನ್ನೇ ಹೋಲುತ್ತದೆ. ಆದ್ದರಿಂದ ಅದು ಪಕ್ಷಪಾತಿ ನಿರ್ಧಾರ ಆಗುವ ಆತಂಕವಿದೆ ಎಂದಿದ್ದಾರೆ.

ರಾಜ್ಯಪಾಲರು ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದರೂ, ಮುಖ್ಯಮಂತ್ರಿಯ ಸಂದರ್ಭದಲ್ಲಿ ಅಥವಾ ರಾಜ್ಯಪಾಲರು ಸ್ವತಃ ಅನುಮತಿ ನೀಡಬೇಕಾದ ಸಂದರ್ಭಗಳಲ್ಲಿ ವಿನಾಯಿತಿ ನೀಡಬಹುದು ಎಂದು ವಾದಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್‌ 29ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಇದರ ಜೊತೆಗೆ ಆ.29ರ ವರೆಗೂ ಕೆಳ ನ್ಯಾಯಾಲಯಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವುದೇ ತೀರ್ಪು ನೀಡುವಂತಿಲ್ಲ ಎಂದು ಹೇಳಿದೆ.

ಇದನ್ನೂ ಓದಿ : ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ : ಸಾಮಾಜಿಕ ಕಾರ್ಯಕರ್ತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...