Homeಕರ್ನಾಟಕಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿದ ಹೈಕೋರ್ಟ್

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿದ ಹೈಕೋರ್ಟ್

- Advertisement -
- Advertisement -

ಆಪಾದಿತ ಮುಡಾ ಹಗರಣ ಪ್ರಕರಣದಲ್ಲಿ ತನ್ನ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31ಕ್ಕೆ ಮುಂದೂಡಿದೆ.

ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಆ.28) ನಡೆಯಿತು. ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದ ಸಿಂಘ್ವಿ, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿಲ್ಲ. ಇದು ಮುಡಾ ಹಗರಣವೇ ಅಲ್ಲ. ಸಾಮಾನ್ಯವಾಗಿ ನಡೆದಿರುವ ಪ್ರಕ್ರಿಯೆ ಎಂದು ವಾದಿಸಿದರು.

ಪೊಲೀಸ್ ಅಧಿಕಾರಿ ಅನುಮತಿಯಿಲ್ಲದೆ ತನಿಖೆ ಮಾಡುವಂತಿಲ್ಲ. ಪಿಸಿ ಕಾಯ್ದೆ 17ಎ ಅಡಿ ಪೂರ್ವಾನುಮತಿ ಬೇಕು. 17ಎ ಪಾಲನೆಯಾಗದಿದ್ದರೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಎರಡೂ ಅಂಶಗಳನ್ನು ರಾಜ್ಯಪಾಲರು ಪಾಲಿಸಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಆ.31ರ ಬೆಳಿಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಆದೇಶಿಸಿದೆ.

ಸಿದ್ದರಾಮಯ್ಯ ಅವರ ರಿಟ್ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್ ಇಬ್ಬರು ಪ್ರತಿವಾದಿಗಳೂ ಇದುವರೆಗೆ ಆಕ್ಷೇಪಣೆ ಸಲ್ಲಿಸಿಲ್ಲ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆಗೆ ಎಸ್‌ಐಟಿ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...