Homeಕರ್ನಾಟಕಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ...

ಮಂಡ್ಯದಲ್ಲಿ ಕೆಲ ಶಕ್ತಿಗಳು ವಿಷ ಬಿತ್ತಲು ಪ್ರಯತ್ನಿಸಿತು, ಸಕ್ಕರೆ ನಾಡಿನ ಜನರು ಅದಕ್ಕೆ ಅವಕಾಶ ಕೊಡಲಿಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಸೇರಿಕೊಂಡು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ನಿರಂತರವಾಗಿ ಪ್ರಯತ್ನಿಸಿದವು. ಆದರೆ, ಸಕ್ಕರೆ ಮತ್ತು ಸಿಹಿ ಬೆಳೆಯುವ ಮಂಡ್ಯದ ಜನರು ವಿಷಹಾಕಲು ಬಂದವರನ್ನು ಒಳಗೆ ಬಿಟ್ಟುಕೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇತಿಹಾಸದಲ್ಲಿ ಮತ್ತೊಮ್ಮೆ ತಾವು ಸಿಹಿ ನೀಡುವವರೆ ಹೊರತು ವಿಷ ನೀಡುವವರಲ್ಲ ಎಂದು ಸಾಬೀತು ಮಾಡಿದ್ದಾರೆ. ಮಂಡ್ಯದ ಜನರನ್ನು ನಾಡಿನ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಾವು ಕರ್ನಾಟಕಕ್ಕೆ ಬಂದುದೊಗಿರುವ ಕಂಟಕಗಳೇನು? ಎಂದು ಪ್ರಶ್ನಿಸಿಕೊಳ್ಳಬೇಕಿದೆ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದಿಂದ 4.5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರ ಸಂಗ್ರಹಿಸುತ್ತಿದೆ. ಆದರೆ, ನಮಗೆ 55-59 ಸಾವಿರ ಕೋಟಿ ರೂ. ಮಾತ್ರ ನಮಗೆ ವಾಪಸ್ ಬರುತ್ತಿದೆ. ಇದರಿಂದ ನಾಡಿನ ಸಮಗ್ರ ಅಭಿವೃದ್ದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ದುಡಿಯುವ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸಿ ಶ್ರೀಮಂತ ಕಾರ್ಪೋರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಇಳಿಸಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಜನರ ಕೊಳ್ಳುವ ಶಕ್ತಿ ಕಡಿಮೆಯಾಯಿತು. ಆದ್ದರಿಂದಲೇ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಎರಡನೇ ಕಂಟಕ ರಾಷ್ಟ್ರ ಭಾಷೆಯ ಹೆಸರಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಮೂಲಕ ಕನ್ನಡ ಮುಂತಾದ ದೇಶ ಭಾಷೆಗಳನ್ನು ದಮನಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವುಗೆಲ್ಲರೂ ಪ್ರತಿಭಟಿಸದೆ ಹೋದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಿಕೊಳ್ಳುತ್ತವೆ ಎಂದು ತಿಳಿಸಿದರು.

ಮೂರನೆಯದಾಗಿ ಬಹುತ್ವವನ್ನು ಸಾರುವ ನಮ್ಮ ಸಂವಿಧಾನದ ಮೇಲೆ ಕಳೆದ ಕೆಲವು ವರ್ಷಗಳಿಂದ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಈ ಆಕ್ರಮಣದ ವಿರುದ್ದ ಹೋರಾಡಬೇಕಾದದು ನಮ್ಮೆಲ್ಲರ ಜವಾಬ್ದಾರಿ ಎಂದು ತಮ್ಮ ಗಮನಕ್ಕೆ ತರ ಬಯಸುತ್ತೇನೆ ಎಂದು ಹೇಳಿದರು.

ಈ ಸಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು?, ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.

ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದು ಹೇಳಿದರು.

ಇಂಗ್ಲಿಷ್‌ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.

ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್‌, ಹಾರ್ಟ್‌ ಮತ್ತು ಹ್ಯಾಂಡ್‌ ಎಂಬ 3-ಎಚ್‌ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಹೇಳಿದರು.

ಸಕ್ಕರೆ ಸೀಮೆ ಮಂಡ್ಯದಲ್ಲಿ ನಡೆಯುತ್ತಿರುವ ಸಮೇಳನಕ್ಕೆ ದೇಶ, ವಿದೇಶಗಳಿಂದಲೂ ಸಾಹಿತ್ಯಾಭಿಮಾನಿಗಳು ಬಂದಿದ್ದಾರೆ. ಜಿಲ್ಲೆಯಲ್ಲಿ ಕಾವೇರಿ, ಹೇಮಾವತಿ, ಶಿಂಷಾ, ಲೋಕಪಾವನಿ ಮುಂತಾದ ಜೀವನದಿಗಳು ಹರಿಯುತ್ತವೆ. ಸದಾಕಾಲ ಕನ್ನಡ ಸಾಹಿತ್ಯ ಪರಂಪರೆಯನ್ನು ಮೆರೆಸಿರುವ ಮಂಡ್ಯ ಅಪ್ಪಟ ಕನ್ನಡದ ನೆಲ. ಭತ್ತದ ಕಣಜ. ಸಕ್ಕರೆನಾಡು. ಯಾವುದೇ ಭಾಷಿಗರು ಬಂದರೂ ಒಂದು ತಿಂಗಳಲ್ಲಿ ಕನ್ನಡ ಕಲಿಸುವ ದಿಟ್ಟತನ ಹಾಗೂ ಭಾಷಾಭಿಮಾನ ಮಂಡ್ಯದ ಜನರದು ಎಂದು ಹೊಗಳಿದರು.

ಇದನ್ನೂ ಓದಿ : ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...