Homeಕರ್ನಾಟಕಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಚಿಂತನೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಹಿಂದಿನ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದ ಕಾರಣ ಎಸ್‍ಸಿ ಎಸ್‍ಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಹೆಚ್ಚು ಅನುದಾನ ಖರ್ಚು ಮಾಡಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ರಾಜ್ಯದ ಒಟ್ಟು ಜನಸಂಖ್ಯೆಯ ಶೇ.17.1ರಷ್ಟು ಎಸ್ಸಿ ಹಾಗೂ ಶೇ.7 ರಷ್ಟು ಎಸ್ಟಿ ವರ್ಗಕ್ಕೆ ಸೇರಿದವರಿದ್ದಾರೆ. 2011ರ ಜನಗಣತಿ ಪ್ರಕಾರ, ಶೇ.24.1 ರಷ್ಟು ಎಸ್ಸಿ ಹಾಗೂ ಎಸ್ಟಿ ವರ್ಗದ ಜನಸಂಖ್ಯೆಯಿದೆ. ಈ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ, ಎಸ್ಟಿ ವರ್ಗಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡುವ ಬಗ್ಗೆ ಕಾನೂನು ತಂದ ಮೊದಲ ರಾಜ್ಯ ಕರ್ನಾಟಕ ಎಂದು ಅವರು ಹೇಳಿದರು.

ಯಾವುದೇ ಸರಕಾರಗಳು ಬಂದರೂ ಈ ಕಾನೂನನ್ನು ಬದಲಾಯಿಸಲು ಸಾಧ್ಯವಿಲ್ಲ.  2013 ರಿಂದ 2018ರವರೆಗೆ ನಮ್ಮ ಸರಕಾರ ಒಟ್ಟು 88 ಸಾವಿರ ಕೋಟಿ ರೂ.ಗಳನ್ನು ಎಸ್ಸಿ,ಎಸ್ಟಿ ಸಮುದಾಯಕ್ಕೆ ಮೀಸಲಿಡಲಾಗಿತ್ತು. ಈ ಪ್ರಮಾಣದ ಜನಸಂಖ್ಯೆಗೆ ಈ ಅನುದಾನ ರಾಜ್ಯಾಂಗ ಬದ್ಧವಾಗಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

 

ಇದನ್ನು ಓದಿ: ಕೇರಳ: ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಪೋಟ; ಓರ್ವ ಮೃತ್ಯು, ಹಲವರಿಗೆ ಗಂಭೀರ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...