77ನೇ ಸ್ವಾತಂತ್ರೋತ್ಸವದ ಹಿನ್ನೆಲೆ ಬೆಂಗಳೂರಿನ ಮಾನಿಕ್ ಷಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು.
ಧ್ವಜಾರೋಹಣ ಬಳಿಕ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ಗ್ಯಾರಂಟಿ ಯೋಜನೆಗಳ ಬಗ್ಗೆ ಭಾಷಣದಲ್ಲಿ ಪ್ರಸ್ತಾಪಸಿದ್ದಾರೆ.ಸಂಪತ್ತಿನ ಸಂಗ್ರಹ ಮತ್ತು ಹಂಚಿಕೆ ಹಾಗೂ ಮರುಹಂಚಿಕೆಗಳಲ್ಲಿ ಸಾಮಾಜಿಕ ನ್ಯಾಯವನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಶಾಂತಿಯುತ ಸಮಾಜವಿದ್ದರೆ ಮಾತ್ರ ಅಭಿವೃದ್ಧಿ ಸಾಧಿಸಲು ಸಾಧ್ಯ ಎಂದು ನಮ್ಮ ಜನರಿಗೆ ಅರ್ಥವಾಗಿರುವುದರಿಂದ ದುಷ್ಟರ ಆಟಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದನ್ನು ಕರ್ನಾಟಕದ ಜನರೇ ಸಾಬೀತು ಮಾಡಿದ್ದಾರೆ.
ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕೆ ಹೋರಾಡಿದವರಿಗೆ ನೆನಪಿಸಿಕೊಂಡಿದ್ದಾರೆ.ಸ್ವಾತಂತ್ರ್ಯ ಮನುಷ್ಯನ ಜೀವನಕ್ಕೂ ಮಿಗಿಲು, ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರ ತ್ಯಾಗ, ಬಲಿದಾನ ನೆನೆಯಬೇಕು. ದೇಶದ ಸಂಪತ್ತು ಬಂಡವಾಳ ಶಾಹಿಗಳ ಬಳಿ ಕ್ರೋಡೀಕರಣವಾಗುತ್ತಿದೆ. ನಾವು ಸಂಪತ್ತಿನ ಮರು ಹಂಚಿಕೆ ಮೂಲಕ ಸಾಮಾಜಿಕ ನ್ಯಾಯ ನೀಡುತ್ತೇವೆ ಎಂದು ಹೇಳಿದ್ದಾರೆ. ಬೆಲೆಯೇರಿಕೆ, ನಿರುದ್ಯೋಗ ಜಾತಿ, ಧರ್ಮದ ಕಾರಣಕ್ಕೆ ತಾರತಮ್ಯ ದಿಂದ ಜನರು ಸಂಕಷ್ಟದಲ್ಲಿದ್ದರು. ಇದನ್ನು ಸರಕಾರ ಗಂಭೀರವಾಗಿ ಪರಿಗಣಸಿದೆ ಎಂದು ಸಿಎಂ ಭಾಷಣದಲ್ಲಿ ಹೇಳಿದ್ದಾರೆ.
ಗ್ಯಾರೆಂಟಿ ಯೋಜನೆ ಬಗ್ಗೆ ಉಲ್ಲೇಖಿಸಿದ ಸಿಎಂ, ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಶಕ್ತಿಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಬಗ್ಗೆ ರಾಷ್ಟ್ರಿಯ, ಅಂತರಾಷ್ಟ್ರೀಯ ಮಾದ್ಯಮಗಳು ಪ್ರಶಂಸೆ ವ್ಯಕ್ತಪಡಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 2 ಕೋಟಿ ಗ್ರಾಹಕರಿಗೆ ಯೋಜನೆಯ ಸಹಾಯ ಸಿಗಲಿದೆ. ಇದಕ್ಕೆ ವಾರ್ಷಿಕ 13,900,10ಕೋಟಿ ಮೀಸಲಿಟ್ಟಿದ್ದೇವೆ. ಅನ್ನ ಭಾಗ್ಯದ ಮೂಲಕ ಪ್ರತಿ ಫಲಾನುಭವಿಗೆ 5 ಕೆಜಿ ಹೆಚ್ಚುವರಿ ಆಹಾರ ಧಾನ್ಯ ನೀಡಲು ಕ್ರಮ ಕೈಗೊಳ್ಳುತ್ತಿದ್ದೇವೆ. ಗೃಹ ಲಕ್ಷ್ಮಿ ಮೂಲಕ ಜನರಿಗೆ 2000ರೂ. ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ. ಯುವ ನಿಧಿ ಮೂಲಕ ಯುವ ಸಮುದಾಯಕ್ಕೆ ಆಸರೆಯಾಗಲಿರುವುದು ಎಂದು ಸಿದ್ದಾರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಕಾನುನು ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಲಾಗುವುದು, ಸಾಮಾಜಿಕ ಮಾದ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರು, ಅನೈತಿಕ ಪೊಲೀಸ್ ಗಿರಿಯನ್ನು ಸರಕಾರ ಕ್ಷಮಿಸುವುದಿಲ್ಲ. ನಿರೋಧ್ಯೋಗ ನಿವಾರಣೆಗೆ ಸ್ಪಷ್ಟ ಯೋಜನೆ ರೂಪಿಸುತ್ತೇವೆ. ಡ್ರಗ್ಸ್ ವಿರುದ್ಧ ಯುವಜನರಿಗೆ ಸಮಾಲೋಚನೆ ಮಾಡುತ್ತೇವೆ.ವರ್ಷಕ್ಕೆ 50,000 ಕೋಟಿಯನ್ನು ನೇರವಾಗಿ ಜನರಿಗೆ ಗ್ಯಾರೆಂಟಿ ಯೋಜನೆ ಮೂಲಕ ತಲುಪಿಸಲು ಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ ಹಿನ್ನೆಲೆ ಮಾನಿಕ್ ಷಾ ಪೆರೇಡ್ ಗ್ರೌಂಡ್ ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಆಗಮಿಸುವ ಹಿನ್ನಲೆ ಪೊಲೀಸರು ಮೈದಾನದ ಸುತ್ತ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸರು ಎರಡು ರೀತಿಯಲ್ಲಿ ಅಗತ್ಯ ತಯಾರಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ: 77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ



Hi this is Mohammed Ikram from swiggy
I m working as delivered Boy.