Homeಕರ್ನಾಟಕಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆ ಪ್ರಕರಣ: ರಾಜಕೀಯ ಸಂಬಂಧ ಕಲ್ಪಿಸುವುದು ಸರಿಯಲ್ಲ; ಸಿಎಂ ಸಿದ್ದರಾಮಯ್ಯ

ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆ ಪ್ರಕರಣ: ರಾಜಕೀಯ ಸಂಬಂಧ ಕಲ್ಪಿಸುವುದು ಸರಿಯಲ್ಲ; ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಗುತ್ತಿಗೆದಾರನ ಮನೆಯಲ್ಲಿ ಹಣ ಪತ್ತೆಯಾಗಿರುವ ಬಗ್ಗೆ ಬಿಜೆಪಿ ಮಾಡುತ್ತಿರುವ ಆರೋಪ ರಾಜಕೀಯ ಪ್ರೇರಿತ ಮತ್ತು ಆಧಾರ ರಹಿತವಾದದ್ದು, ಅದಕ್ಕೆ ರಾಜಕೀಯ ಸಂಬಂಧ ಕಲ್ಪಿಸುವುದು ಸರಿಯಲ್ಲ, ಬಿಜೆಪಿಯವರು ಏನೇ ಪ್ರತಿಭಟನೆ ಮಾಡಿದರೂ ಜನರು ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾದ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆದಾಯ ತೆರಿಗೆ ಇಲಾಖೆ ತಮ್ಮ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾದರೆ ಅದಕ್ಕೆ ರಾಜಕೀಯ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರಕರಣದ ಬಗ್ಗೆ ರಾಜ್ಯ ಸರಕಾರದಿಂದ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್‌ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಸಿಎಂ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಇಂದಿರಾ ಕ್ಯಾಂಟೀನ್, ಕ್ಷೀರಭಾಗ್ಯ ಯೋಜನೆಗಳು ಎಲ್ಲ ಜಾತಿ ಧರ್ಮದ ಜನರಿಗೂ ತಲುಪುತ್ತಿದೆ. ಅವಕಾಶ ವಂಚಿತರಿಗೆ ನ್ಯಾಯ ಒದಗಿಸುವ ಯೋಜನೆಗಳಾಗಿವೆ ಎಂದು ಹೇಳಿದ್ದಾರೆ.

ಹಿಂದುಳಿದ, ದಲಿತರು, ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು. ಶಕ್ತಿ ಯೋಜನೆಯಡಿ 70 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆಗೆ ಚುರುಕುಗೊಂಡು ರಾಜ್ಯದ ಜಿಡಿಪಿ ಹೆಚ್ಚಾಗುತ್ತಿದೆ ಎಂದು ಹೇಳಿದ್ದಾರೆ.

ಐಟಿ ದಾಳಿ ವೇಳೆ ಗುತ್ತಿಗೆದಾರನ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆಯಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ,  ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್‌ಗೆ ಮೊದಲನೇ ಹಂತದಲ್ಲಿ 1000 ಕೋಟಿ ರೂ.ಗಳ ಟಾರ್ಗೆಟ್ ನೀಡಿದೆ. ಆದರೆ ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ ಎಂದು ರಾಜ್ಯ ಬಿಜೆಪಿ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಆರೋಪಿಸಿತ್ತು.

ಇದನ್ನು ಓದಿ: ನಾವೇ ಒರಿಜಿನಲ್‌ ಜೆಡಿಎಸ್, NDA ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಸಿಎಂ ಇಬ್ರಾಹೀಂ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...