Homeಕರ್ನಾಟಕಚಲುವರಾಯಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪತ್ರ ನಕಲಿ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಲುವರಾಯಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಪತ್ರ ನಕಲಿ- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಮಂದಿ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆಂದು ನಿನ್ನೆ ವೈರಲ್ ಆದ ಪತ್ರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದು, ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿ ಎಂದು ಬಯಲಾಗಿದೆ ಎಂದು ಹೇಳಿದ್ದಾರೆ.

ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡು ಬಂದಲ್ಲಿ ತನಿಖೆ ನಡೆಸುತ್ತೇವೆ  ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಬಿಜೆಪಿ ನಾಯಕರೇ, ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”? ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಇದಲ್ಲದೆ ಪತ್ರ ಅಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿದ ಸಿಎಂ, ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಪತ್ರವನ್ನು ಅಧಿಕಾರಿಗಳು ಬರೆದಿಲ್ಲ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಮಾಡಿ ಸತ್ಯ ಬಯಲಿಗೆಳೆಯಲು ಸೂಚಿಸಲಾಗಿದೆ ಎಂದರು.

ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಏಳು ಮಂದಿ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆಂದು ನಿನ್ನೆ ಪತ್ರವೊಂದು ವೈರಲ್ ಆಗಿತ್ತು.

ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಪತ್ರದಲ್ಲಿ ಮಂಡ್ಯ, ಮಳ್ಳವಳ್ಳಿ, ಕೆ ಆರ್ ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕೃಷಿ ಸಹಾಯಕ ಅಧಿಕಾರಿಗಳು ಸಹಿ ಹಾಕಿದ್ದಾರೆ ಎನ್ನಲಾಗಿತ್ತು.

ಪತ್ರ ವೈರಲ್ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಚಲುವರಾಯಸ್ವಾಮಿ, ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂದು ಅವರು ಹೇಳಿದ್ದಾರೆ. ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಏನೇನೋ ಹುಡುಕುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು.

ಇದನ್ನು ಓದಿ: ಲಂಚಕ್ಕೆ ಆಮಿಷ ಆರೋಪ: ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಅಧಿಕಾರಿಗಳು

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...