Homeಮುಖಪುಟಜಲ ವಿವಾದ: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ

ಜಲ ವಿವಾದ: ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ

- Advertisement -
- Advertisement -

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಈ ಕುರಿತು ಪರಿಸ್ಥಿತಿ ನೋಡಿಕೊಂಡು ಸುಪ್ರೀಂಕೋರ್ಟ್ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೀರು ಹಂಚಿಕೆಗೆ ಸಂಬಂಧಿಸಿ ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿ ಕರ್ನಾಟಕ ಇಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಜೊತೆಗೆ  ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂಬ ಎರಡು ಬೇಡಿಕೆಗಳನ್ನು ಮರು ಪರಿಶೀಲನಾ ಅರ್ಜಿಯಲ್ಲಿ ತಿಳಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಅ.15ರವರೆಗೆ ತಮಿಳುನಾಡಿಗೆ 3000 ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಪ್ರತಿಭಟನೆ, ಬಂದ್‌ಗಳು ನಡೆದಿದೆ. ಎರಡು ವಾರಗಳ ಹಿಂದೆ, ಸಿಡಬ್ಲ್ಯುಆರ್‌ಸಿ ನೆರೆಯ ರಾಜ್ಯಕ್ಕೆ 5000 ಕ್ಯುಸೆಕ್‌ಗಳನ್ನು ಬಿಡುವಂತೆ ಕರ್ನಾಟಕವನ್ನು ಕೇಳಿತ್ತು ಅದನ್ನು ಮಂಗಳವಾರ 3000 ಕ್ಯೂಸೆಕ್‌ಗೆ ಇಳಿಸಿ ಆದೇಶಿಸಿತ್ತು.

ಇದನ್ನು ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...