Homeಕರ್ನಾಟಕಸಿದ್ದರಾಮಯ್ಯ ಪೋಟೋ ತಿರುಚಿ ಪೋಸ್ಟ್: ಪ್ರಕರಣ ದಾಖಲು

ಸಿದ್ದರಾಮಯ್ಯ ಪೋಟೋ ತಿರುಚಿ ಪೋಸ್ಟ್: ಪ್ರಕರಣ ದಾಖಲು

- Advertisement -
- Advertisement -

ಮಹಿಷಾಸುರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರ ಎಡಿಟ್‌ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಕಾನೂನು ಘಟಕದ ಸೂರ್ಯ ಮುಕುಂದರಾಜ್ ಅವರು ನೀಡಿರುವ ದೂರು ಆಧರಿಸಿ ಸೀನಾ ಹಿಂದೂಸ್ತಾನಿ ಪೇಜ್‌ ಅಡ್ಮಿನ್ ಹಾಗೂ ಇತರರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಹಿಷಾ ದಸರಾ ಆಚರಣೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಜೊತೆಗೆ ಮಹಿಷಾಸುರ ಪೋಟೋಗೆ ಸಿದ್ದರಾಮಯ್ಯ ಅವರ ಚಿತ್ರವನ್ನು ಎಡಿಟ್‌ ಮಾಡಿ ಸೇರಿಸಲಾಗಿದೆ. ಈ ಮೂಲಕ ಮಹಿಷಾಸುರ ಪ್ರತಿಮೆಯನ್ನು ವಿರೂಪಗೊಳಿಸಿ ಜನರ ಧಾರ್ಮಿಕ ನಂಬಿಕೆಗೆ ಧಕ್ಕೆ ತರಲಾಗಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿ ಸಮಾಜದ ಶಾಂತಿಗೆ ಧಕ್ಕೆ ತರಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪೊಲೀಸ್‌ ಮೂಲಗಳ ಪ್ರಕಾರ, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೇಜ್‌ನ ಅಡ್ಮಿನ್ ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದಾರೆ. ಫೇಸ್‌ಬುಕ್‌ ಕಂಪನಿಯವರಿಗೂ ಈ ಬಗ್ಗೆ ಇ–ಮೇಲ್ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ನಾನು ಮಾನಸಿಕವಾಗಿ ಜೆಡಿಎಸ್‌ನ ಒಳಗೆ ಇದ್ದೇನೆ, ಜೆಡಿಎಸ್‌ ರಾಜ್ಯಾಧ್ಯಕ್ಷನಾಗಿದ್ದೇನೆ: ಸಿಎಂ ಇಬ್ರಾಹೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read