ಆಪಾದಿತ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ನ.6) ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಗೆ ವಿಚಾರಣೆಗೆ ತೆರಳಿದ್ದು, ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದು ಬಂದಿದೆ.
ಮುಡಾದಿಂದ 50:50 ಅನುಪಾತದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿ 14 ನಿವೇಶನ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಡಿಸೆಂಬರ್ ಅಂತ್ಯದ ಒಳಗೆ ವರದಿ ಸಲ್ಲಿಸುವಂತೆ ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ.
ಲೋಕಾಯುಕ್ತ ಪೊಲೀಸರು ಅಕ್ಟೋಬರ್ 25ರಂದು ಪ್ರಕರಣದ ಆರೋಪಿಯಾಗಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರನ್ನು ವಿಚಾರಣೆ ನಡೆಸಿದ್ದರು. ಇಂದು ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದರು.
ಇದನ್ನೂ ಓದಿ : ಬೀದರ್ | ಜಾತ್ರೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ ಆರೋಪ : 69 ಮಂದಿಯ ಬಂಧನ


