Homeಮುಖಪುಟಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

ಸಿಎಂ ಯಡಿಯೂರಪ್ಪ ಸತ್ಯದ ಪರ ನಿಂತಿದ್ದಾರೆ: ಎಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ನನ್ನ ಪುತ್ರ ನಿಖಿಲ್‌ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ರಾಜ್ಯ ರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.”

ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್‌ ವಿವಾಹವನ್ನು ಲಾಕ್‌ಡೌನ್‌ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಂದು ಅವರು ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಿಖಿಲ್-ರೇವತಿ ಮದುವೆಯಲ್ಲಿ ಸಾಮಾಜಿಕ ಅಂತರವೆಲ್ಲಿ? ಲಾಕ್‌ಡೌನ್‌ ನಡುವೆಯೂ ಮದುವೆಗೆ ಪರ-ವಿರೋಧ


ನಿಖಿಲ್‌ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.

“ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ”

ಎಂಬ ಬಸವಣ್ಣನವರ ವಚನವನ್ನು ಕುಮಾರಸ್ವಾಮಿಯವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಎಚ್.ಡಿ.ಕುಮಾರಸ್ವಾಮಿಯವರು ತಮ್ಮ ಮಗ ನಿಖಿಲ್‌ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಕೃಷ್ಣಪ್ಪನವರ ಅಣ್ಣನ ಮಗಳು ರೇವತಿಯವರ ವಿವಾಹವನ್ನು ಶುಕ್ರವಾರದಂತು ಸರಳ ರೀತಿಯಲ್ಲಿ ನಡೆಸಿದ್ದರು. ಆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌ರವರು ಮಾತ್ರ ಮದುವೆ ಆಕ್ಷೇಪ ವ್ಯಕ್ತಪಡಿಸಿದ್ದರು. “ವಿವಾಹದ ಸಮಯದಲ್ಲಿ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಮಾಜಿ ಮುಖ್ಯಮಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಇದರಲ್ಲಿ ಎರಡು ಮಾತಿಲ್ಲ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದರು.

ಆದರೆ ನಿನ್ನೆ ಯಡಿಯೂರಪ್ಪನವರು “ಈ ವಿವಾಹ ವಿಚಾರವನ್ನು ದೊಡ್ಡ ಸಮಸ್ಯೆಯನ್ನಾಗಿ ಚರ್ಚಿಸುವ ಅಗತ್ಯವಿಲ್ಲ. ಅವರ ಕುಟುಂಬ ದೊಡ್ಡದಾಗಿದ್ದರೂ ಅವರು ಮದುವೆಯನ್ನು ಮಿತಿಯಲ್ಲಿ ನಡೆಸಿದರು. ಅವರಿಗೆ ನನ್ನ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದ್ದರು.


ಇದನ್ನೂ ಓದಿ: ಎಚ್‌.ಡಿ ಕುಮಾರಸ್ವಾಮಿ ಕುಟುಂಬದ ವಿವಾಹ ವಿಚಾರ ದೊಡ್ಡದು ಮಾಡಬೇಡಿ: ಸಿಎಂ ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಿಎಂ ಸುಳ್ಳಿನ ಪರ ನಿಂತಿದ್ದಾರೆ. ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ ರೆಂಬುದು ಇದೇ ಜಗತ್ತಿಗೆ ಗೊತ್ತಿದೆ.
    ಬಸವಣ್ಣ ನಾ ವಚನ heli, ಅದಕ್ಕೆ ಅವಮಾನ ಮಾಡ್ಬೇಡಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....