Homeಕರ್ನಾಟಕಬ್ರೇಕ್ ಫಾಸ್ಟ್ ಮೀಟಿಂಗ್ : ನಗು ನಗುತ್ತಾ ಫೋಟೋಗೆ ಪೋಸ್ ಕೊಟ್ಟ ಸಿಎಂ-ಡಿಸಿಎಂ

ಬ್ರೇಕ್ ಫಾಸ್ಟ್ ಮೀಟಿಂಗ್ : ನಗು ನಗುತ್ತಾ ಫೋಟೋಗೆ ಪೋಸ್ ಕೊಟ್ಟ ಸಿಎಂ-ಡಿಸಿಎಂ

- Advertisement -
- Advertisement -

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮಹತ್ವದ ಘಟ್ಟಕ್ಕೆ ತಲುಪಿದೆ. ಹೈಕಮಾಂಡ್ ಸೂಚನೆ ಹಿನ್ನೆಲೆ ಇಂದು (ನ.29 ಶನಿವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ ಫಾಸ್ಟ್ ಮೀಟಿಂಗ್ ನಡೆದಿದೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ್ದು, ಇಬ್ಬರು ಜೊತೆಯಾಗಿ ಬೆಳಗ್ಗಿನ ಉಪಹಾರ ಸವಿದಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ನಗುಮುಖದೊಂದಿಗೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಈ ಮೂಲಕ ನಮ್ಮ ನಡುವೆ ಯಾವುದೇ ಕಿತ್ತಾಟ ಇಲ್ಲ ಎಂಬ ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ.

ನಿನ್ನೆ (ನ.28 ) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದ ಸಿಎಂ ಸಿದ್ದರಾಮಯ್ಯ, “ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ” ಎಂದಿದ್ದರು.

“ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್‌ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...