Homeಮುಖಪುಟಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್:...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

- Advertisement -
- Advertisement -

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ‘ಸಿಎಂಆರ್‌ಎಲ್-ಎಕ್ಸಾಲಾಜಿಕ್’ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ ಮುಹಮ್ಮದ್ ರಿಯಾಜ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಅಕ್ಟೋಬರ್ 21, 2026) ಅತ್ಯಂತ ಮಹತ್ವದ ರಿಲೀಫ್ ನೀಡಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ವಿಜಯನ್ ಕುಟುಂಬಸ್ಥರು ಅರ್ಹರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿರುವುದಾಗಿ ಕಾನೂನು ಸುದ್ದಿ ಸಂಸ್ಥೆ ‘ಲೈವ್ ಲಾ’ ವರದಿ ಮಾಡಿದೆ.

ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರಿದ್ದ ವಿಶೇಷ ಪೀಠವು, ಅರ್ಜಿದಾರರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕಿಲ್ಲ (Locus Standi) ಎಂದು ಹೈಕೋರ್ಟ್‌ ವಿಭಾಗೀಯ ಪೀಠ ನೀಡಿದ್ದ ಆದೇಶವನ್ನು ವಜಾಗೊಳಿಸಿದೆ. ಅಲ್ಲದೆ, ಅರ್ಜಿದಾರರು ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ತಮ್ಮ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲು ಅನುಕೂಲವಾಗುವಂತೆ ಕೇರಳ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿರುವ ಎಫ್‌ಐಆರ್ ಆಧಾರಿತ ತನಿಖೆಗೆ 7 ದಿನಗಳ ಕಾಲ ಕಟ್ಟುನಿಟ್ಟಿನ ತಡೆಯಾಜ್ಞೆ (Stay) ನೀಡಿ ಆದೇಶಿಸಿದೆ ಎಂದು ವರದಿಯಾಗಿದೆ.

ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ಆದೇಶ:

ಕೇರಳದ ಸಾಫ್ಟ್‌ವೇರ್ ಕಂಪನಿಯಾದ ‘ಎಕ್ಸಾಲಾಜಿಕ್ ಸಲ್ಯೂಷನ್ಸ್’ (ಪಿಣರಾಯಿ ವಿಜಯನ್ ಪುತ್ರಿ ವೀಣಾ ಅವರಿಗೆ ಸೇರಿದ್ದು) ಮತ್ತು ಮೈನಿಂಗ್ ಕಂಪನಿಯಾದ ಸಿಎಂಆರ್‌ಎಲ್ (Cochin Minerals and Rutile Ltd) ನಡುವೆ ಯಾವುದೇ ಸೇವೆ ನೀಡದೆ ಕಾನೂನುಬಾಹಿರವಾಗಿ ಮಾಸಿಕ ಹಣ ಪಾವತಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ED) ನೀಡಿದ ಮಾಹಿತಿಯ ಆಧಾರದ ಮೇಲೆ, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠವು ಪಿಣರಾಯಿ ವಿಜಯನ್, ಅವರ ಪುತ್ರಿ ಮತ್ತು ಅಳಿಯನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆಗೆ ನಿರ್ದೇಶಿಸಿತ್ತು.

ಈ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ವಿಜಯನ್ ಮತ್ತು ಕುಟುಂಬಸ್ಥರು ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿದ್ದರು. ಆದರೆ, ಮೂಲ ಅರ್ಜಿಯಲ್ಲಿ ಇವರನ್ನು ಸಾಕ್ಷಿಯಾಗಿ ಅಥವಾ ಪಾರ್ಟಿಯಾಗಿ ಸೇರಿಸಿರಲಿಲ್ಲ ಎಂಬ ತಾಂತ್ರಿಕ ಕಾರಣ ನೀಡಿ, ಮೇಲ್ಮನವಿ ಸಲ್ಲಿಸಲು ವಿಭಾಗೀಯ ಪೀಠ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಪಿಣರಾಯಿ ವಿಜಯನ್ ಹಾಗೂ ಕುಟುಂಬದವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ ಮತ್ತು ದೂರುದಾರರು, ಎಫ್‌ಐಆರ್ ದಾಖಲಿಸುವ ಮುನ್ನ ಆಪಾದಿತರ ವಾದ ಆಲಿಸುವ ಅಗತ್ಯವಿಲ್ಲ ಎಂದು ವಾದಿಸಿದ್ದಾರೆ. ಆದರೆ, ಈ ವಾದವನ್ನು ಕಡಾಖಂಡಿತವಾಗಿ ತಳ್ಳಿಹಾಕಿರುವ ನ್ಯಾಯಮೂರ್ತಿ ಜಯಮಾಲ್ಯ ಬಾಗ್ಚಿ ನೇತೃತ್ವದ ಪೀಠವು, ಹೈಕೋರ್ಟ್ ಏಕಸದಸ್ಯ ಪೀಠವು ಇವರ ವಿರುದ್ಧ ಸಂಜ್ಞೇಯ ಅಪರಾಧದ (Cognizable Offence) ಆಧಾರಗಳಿವೆ ಎಂದು ನೇರವಾಗಿ ಉಲ್ಲೇಖಿಸಿ ತನಿಖೆಗೆ ಆದೇಶಿಸಿದೆ. ಹೀಗಾಗಿ ಅವರು ಈ ಆದೇಶದಿಂದ ನೇರವಾಗಿ ಬಾಧಿತರಾದ ಸಂತ್ರಸ್ತ ವ್ಯಕ್ತಿಗಳಾಗುತ್ತಾರೆ ಹಾಗೂ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವ ಹಕ್ಕಿದೆ ಎಂದು ಪ್ರತಿಪಾದಿಸಿದೆ.

ಅಲ್ಲದೆ, ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ತನಿಖೆಗೆ ಆದೇಶಿಸುವ ಕಾನೂನು ಪ್ರಕ್ರಿಯೆಯಲ್ಲಿ ಸಾರ್ವಜನಿಕ ಸೇವಕರು ಮತ್ತು ಸಂಬಂಧಪಟ್ಟವರ ಹಕ್ಕುಗಳನ್ನು ಪರಿಗಣಿಸುವ ವಿಸ್ತೃತ ವ್ಯಾಪ್ತಿಯಿದೆ ಎಂಬುದನ್ನು ಪೀಠ ಉಲ್ಲೇಖಿಸಿದೆ. ಕೇವಲ ಎಫ್‌ಐಆರ್ ಮಾತ್ರವಲ್ಲದೆ, ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವಂತೆಯೂ ಏಕಸದಸ್ಯ ಪೀಠ ಆದೇಶಿಸಿರುವುದರಿಂದ ಅರ್ಜಿದಾರರಿಗೆ ಮೇಲ್ಮನವಿ ಸಲ್ಲಿಸಲು ಕಾನೂನಾತ್ಮಕ ಅರ್ಹತೆ ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...

‘ಪ್ರಜಾಪ್ರಭುತ್ವದಲ್ಲಿ ಇದು ಕಳವಳಕಾರಿ, ಸಿಜೆಪಿ ಪ್ರಶ್ನೆಗಳಿಗೆ ನನ್ನ ಬೆಂಬಲವಿದೆ’: CJP ನಾಯಕರ ಬೆನ್ನಿಗೆ ನಿಂತ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ!

ಕಾಕ್‌ರೋಚ್ ಜನತಾ ಪಾರ್ಟಿಯ ಯುವ ನಾಯಕರ ಮೇಲೆ ದೆಹಲಿ ಪೊಲೀಸರು ನಡೆಸುತ್ತಿರುವ ಕಸ್ಟಡಿ ಮತ್ತು ಕಾನೂನು ಪ್ರಕ್ರಿಯೆಗಳ ಕುರಿತು ಪ್ರಜಾಪ್ರಭುತ್ವವಾದಿ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ...

ಯೇಸುವಿನ ದರ್ಶನದ ಹೆಸರಲ್ಲಿ 191 ಜನರ ಮಾರಣಹೋಮ : ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಸೇರಿ 29 ಮಂದಿ ತಪ್ಪಿತಸ್ಥರು ಎಂದ ನ್ಯಾಯಾಲಯ  

ಬರೋಬ್ಬರಿ 191 ಜನರ ಸಾವಿಗೆ ಕಾರಣನಾದ ಕೀನ್ಯಾದ ಧಾರ್ಮಿಕ ಮುಖಂಡ ಪೌಲ್ ಮೆಕೆಂಜಿ ಮತ್ತು ಆತನ ಸಹಚರರನ್ನು ಸೋಮವಾರ (ಅಕ್ಟೋಬರ್ 19) ನ್ಯಾಯಾಲಯ ತಪ್ಪಿತಸ್ಥರು ಎಂದು ಘೋಷಿಸಿದ್ದು, ನವೆಂಬರ್ 6ರಂದು ಶಿಕ್ಷೆ ಪ್ರಮಾಣ...

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...

‘ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’: ಎಸ್ಐಆರ್ ವಿರೋಧಿಸಿ ಅ. 28ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆಗೆ ಪ್ರಕಾಶ್ ಅಂಬೇಡ್ಕರ್ ಕರೆ

ಮುಂಬೈ: ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ,...

ಹೋರಾಟಗಾರನ ಕೊಲೆ, ಅಮಿತ್ ಶಾ ಭೇಟಿ : ಪಂಜಾಬ್‌ನಲ್ಲಿ ಎಎಪಿಗೆ ಮುಳುವಾಗುತ್ತಾ ಡ್ರಗ್ ವಿರೋಧಿ ಜನಾಕ್ರೋಶ?

ಕಳೆದ ವಾರ ಪಂಜಾಬ್‌ನ ಮಾನಸಾ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನೊಬ್ಬ 42 ವರ್ಷದ ಮಾದಕವಸ್ತು ವಿರೋಧಿ ಕಾರ್ಯಕರ್ತ (Anti-Drugs Activist's) ಪರ್ವಿಂದರ್ ಸಿಂಗ್ ಝೋಟಾ ಅವರನ್ನು ಹತ್ಯೆ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....