Homeಕರ್ನಾಟಕಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಎಂ ಪುತ್ರನ ವಿರುದ್ಧ ಸುದ್ದಿ ಮಾಡಿದ್ದಕ್ಕೆ ಸ್ಥಗಿತ: ನಾಳೆಯಿಂದ ಆನ್‌ ಏರ್‌ ಆಗಲಿದೆ ಪವರ್‌ ಟಿವಿ

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಆರೋಪಿಸಿ ದಾಖಲೆ ಸಹಿತ ವರದಿ ಮಾಡಿದ್ದಕ್ಕೆ ಸ್ಥಗಿತಗೊಂಡಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ನಾಳೆಯಿಂದ ಮತ್ತೆ ಕಾರ್ಯರಂಭ ಮಾಡಲಿದೆ.

ಸಿಎಂ ಪುತ್ರನ ಭ್ರಷ್ಟಾಚಾರ ಬಯಲು ಮಾಡಿದ ಕಾರಣ ರಾಜ್ಯ ಸರ್ಕಾರ ದ್ವೇಷ ರಾಜಕೀಯ ಮಾಡಿ ನಮ್ಮ ಸಂಸ್ಥೆಯನ್ನು ಮುಚ್ಚಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪವರ್ ಟಿವಿ ಆರೋಪಿಸಿತ್ತು.

ಸೆ.28ರಂದು ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ನಂತರ ಚಾನೆಲ್‌ನ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಸುದ್ದಿ ಸಂಸ್ಥೆ ಪ್ರತಿಕ್ರಿಯಿಸಿತ್ತು.

ಅದೇ ದಿನ ತಮ್ಮ ಖಾಸಗಿ ಫೇಸ್‌ಬುಕ್‌ನಿಂದ ಲೈವ್ ಬಂದು ಮಾತನಾಡಿದ್ದ ರಹಮಾನ್ ಹಾಸನ್, ’ಸಿಸಿಬಿ ಪೊಲೀಸರು ಕೇಸಿಗೆ ಸಂಬಂಧಪಟ್ಟಂತೆ ಸರ್ಚ್ ವಾರೆಂಟ್ ತಂದು ಪವರ್‌ ಟಿವಿ ಕಚೇರಿಯಲ್ಲಿ ಸರ್ಚ್ ಮಾಡಿದ್ದಾರೆ. ಅವರಿಗೆ ಬೇಕಾಗಿರುವ ಸಿಸ್ಟಂ, ಲ್ಯಾಪ್‌ಟಾಪ್‌, ಹಾರ್ಡ್‌ಡಿಸ್ಕ್‌ ಸಹಿತ ಎಲ್ಲಾ ದಾಖಲೆಗಳನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ ಪವರ್‌ ಟಿವಿಯ ಫೇಸ್‌ಬುಕ್ ಲೈವ್‌ ಕೂಡಾ ತಡೆಹಿಡಿಯಲಾಗಿದೆ. ಸುಮಾರು 250  ಉದ್ಯೋಗಿಗಳಿರುವ ಚಾನೆಲನ್ನು ತಡೆಹಿಡಿದಿದ್ದಾರೆ, ಎಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಭಾವುಕರಾಗಿದ್ದರು.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: ಪವರ್‌ ಟಿವಿ ಪ್ರಸಾರಕ್ಕೆ ತಡೆ!

’ನಮ್ಮ ಕಚೇರಿಗೆ ಬಂದಿದ್ದ ಸಿಸಿಬಿ ಪೊಲೀಸರು ದಾಖಲೆಗಳನ್ನು ಪಡೆದು ಕೊನೆಗೆ ಚಾನೆಲ್ ಸರ್ವರ್‌‌‌ನ್ನು ಕೂಡಾ ವಶಕ್ಕೆ ಪಡೆದರು. ನಾವು ಚಾನೆಲನ್ನು ಮುಚ್ಚಿಸಬೇಡಿ ಎಂದು ಎಷ್ಟೇ ಕೇಳಿಕೊಂಡರೂ ಸರ್ವರ್‌ ಸಿಸ್ಟಂ ಕೂಡಾ ಪಡೆದರು. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಾವು ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದು ರಹಮಾನ್‌ ಹೇಳಿದ್ದರು.

Power TV

ರಾಜ್ಯದಲ್ಲಿ ಅನೇಕ ಸಂಘಟನೆಗಳು ಪವರ್ ಬೆಂಬಲಕ್ಕೆ ನಿಂತಿದ್ದರು. ಸರ್ಕಾರದ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ we are with power tv ಟ್ರೆಂಡ್ ಆಗಿತ್ತು. ನೇರ ಪ್ರಸಾರ ತಡೆಹಿಡಿದಿದ್ದರು ಬೇರೆ ಖಾತೆಗಳ ಫೇಸ್‌ಬುಕ್ ಲೈವ್‌ಗಳ ಮೂಲಕ ಸುದ್ದಿ ಪ್ರಸಾರ ಮಾಡುತ್ತಿತ್ತು.

ಸಿಸಿಬಿ ಪೊಲೀಸರು ಸರ್ವರ್ ತೆಗೆದುಕೊಂಡು ಹೋಗಿರುವುದರಿಂದ ಪ್ರಸಾರ ನಿಲ್ಲಿಸಲಾಗಿತ್ತು. ಈಗ ಹೊಸ ಸರ್ವರ್ ವ್ಯವಸ್ಥೆ ಆಗಿರುವುದರಿಂದ ನಾಳೆಯಿಂದ ಮತ್ತೆ ಚಾನೆಲ್ ಕಾರ್ಯಾರಂಭವಾಗಲಿದೆ. ಇದು ನ್ಯಾಯಕ್ಕೆ ಸಿಕ್ಕ ಗೆಲುವು ಎಂದು ಉದ್ಯೋಗಿಗಳು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿ: ಪವರ್ ಟಿವಿ ಪ್ರಕರಣ ಎತ್ತುವ ಪ್ರಶ್ನೆಗಳು ಯಾರ ಮನೆ ಬಾಗಿಲೆದುರು ನಿಲ್ಲುತ್ತವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...