Homeಮುಖಪುಟಕೇಂದ್ರ ಬಜೆಟ್‌ನಲ್ಲಿ ರಾಜ್ಯಗಳ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ಸಿಎಂಗಳ ನಿರ್ಧಾರ

ಕೇಂದ್ರ ಬಜೆಟ್‌ನಲ್ಲಿ ರಾಜ್ಯಗಳ ಕಡೆಗಣನೆ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ಸಿಎಂಗಳ ನಿರ್ಧಾರ

- Advertisement -
- Advertisement -

ಕೇಂದ್ರ ಬಜೆಟ್‌ನಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಇದೇ ಶನಿವಾರ (ಜು.27) ನಡೆಯಲಿರುವ ನೀತಿ ಆಯೋಗದ ಆಡಳಿತ ಮಂಡಳಿ ಸಭೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮೊದಲಿಗೆ ಸಭೆ ಬಹಿಷ್ಕರಿಸುವುದಾಗಿ ಚೆನ್ನೈನಲ್ಲಿ ಘೋಷಿಸಿದರು. ಆ ಬಳಿಕ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ತೆಲಂಗಾಣದ ಎ.ರೇವಂತ್ ರೆಡ್ಡಿ. ಹಿಮಾಚಲ ಪ್ರದೇಶದ ಸುಖವೀಂದರ್‌ ಸಿಂಗ್ ಸುಖು ಅವರು ಕೂಡ ಸಭೆ ಬಹಿಷ್ಕರಿಸುವುದಾಗಿ ತಿಳಿಸಿದರು.

“ರಾಜ್ಯದ ಅಗತ್ಯಗಳೇನು ಎಂಬುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರಿಗೆ ಮನವರಿಕೆ ಮಾಡಿ ಕೊಡಲಾಗಿತ್ತು. ಆದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ. ಈ ಉದ್ದೇಶಪೂರ್ವಕ ನಿರ್ಲಕ್ಷ್ಯ ಮತ್ತು ತಾರತಮ್ಯವನ್ನು ಖಂಡಿಸುತ್ತೇವೆ. ಪ್ರತಿಭಟನಾರ್ಥಕವಾಗಿ ಇದೇ 27ರಂದು ಪ್ರಧಾನಿ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ (ಜು.22) ಎಕ್ಸ್‌ ಪೋಸ್ಟ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ “ಇಂದು ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಸಂಪೂರ್ಣ ತಾರತಮ್ಯದಿಂದ ಕೂಡಿದ್ದು, ಅಪಾಯಕಾರಿಯಾಗಿದೆ. ಇದು ಕೇಂದ್ರ ಸರ್ಕಾರ ಅನುಸರಿಸಬೇಕಿದ್ದ ಒಕ್ಕೂಟ ವ್ಯವಸ್ಥೆ ಮತ್ತು ನ್ಯಾಯಸಮ್ಮತತೆಯ ತತ್ವಗಳಿಗೆ ವಿರುದ್ದವಾಗಿದೆ. ಸರ್ಕಾರದ ಧೋರಣೆ ಸಂಪೂರ್ಣವಾಗಿ ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಿಎಂಗಳು ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಭೆಯಲ್ಲಿ ಭಾಗವಹಿಸುವುದು ಅಸಾಧ್ಯವಾಗಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇರಳದ ಪಿಣರಾಯಿ ವಿಜಯನ್ ಕೂಡ ಸಭೆಗೆ ಹಾಜರಾಗುವ ಸಾಧ್ಯತೆ ಕಡಿಮೆಯಿದೆ.

ಇಂಡಿಯಾ ಒಕ್ಕೂಟದ ಪಕ್ಷಗಳು ಆಡಳಿತ ನಡೆಸುವ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ನೀತಿ ಆಯೋಗದ ಸಭೆ ಬಹಿಷ್ಕರಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಕರೆ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಸಭೆಯಲ್ಲಿ ಟಿಎಂಸಿ ನಾಯಕ ಡೆರೆಕ್ ಒಬ್ರಿಯನ್ ತಿಳಿಸಿದ್ದಾರೆ.

ಇದನ್ನೂ ಓದಿ : ‘ಕುರ್ಚಿ ಉಳಿಸಿಕೊಳ್ಳುವ ಬಜೆಟ್..’; ಕೇಂದ್ರ ಸರ್ಕಾರದ ವಿರುದ್ಧ ಇಂಡಿಯಾ ಬ್ಲಾಕ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...