Homeಮುಖಪುಟಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವನಿಗೆ ಮೂರು ವರ್ಷ ಜೈಲು ಶಿಕ್ಷೆ!

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವನಿಗೆ ಮೂರು ವರ್ಷ ಜೈಲು ಶಿಕ್ಷೆ!

ಶಿಕ್ಷೆಗೊಳಗಾಗಿರುವ ದಿಲೀಪ್ ರೇ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕಲ್ಲಿದ್ದಲು ರಾಜ್ಯ ಸಚಿವರಾಗಿದ್ದರು.

- Advertisement -
- Advertisement -

ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ ಸೋಮವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಲೀಪ್ ರೇ ಶಿಕ್ಷೆಗೊಳಗಾಗಿದ್ದರು.

ಈ ಮೊದಲು ಸಿಬಿಐ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿತ್ತು. ಇಂದಿಗೆ ತೀರ್ಪು ಕಾದಿರಿಸಿದ್ದ ದೆಹಲಿ ನ್ಯಾಯಾಲಯ ಆರೋಪಿಗಳು ಖುದ್ದು ಹಾಜರಾಗುವಂತೆ ಸೂಚಿಸಿತ್ತು.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕಲ್ಲಿದ್ದಲು ರಾಜ್ಯ ಸಚಿವನಾಗಿದ್ದ ದಿಲೀಪ್ ರೇ ಮತ್ತು ಆ ಸಮಯದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯ ನಂದ್ ಗೌತಮ್ ಮತ್ತು ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್‌ನ (ಸಿಟಿಎಲ್) ನಿರ್ದೇಶಕ ಮಹೇಂದ್ರ ಕುಮಾರ್ ಅಗರ್‌ವಾಲ್ಲಾರಿಗೆ ಸಿಬಿಐ ಜೀವಾವಧಿ ಶಿಕ್ಷೆ ಕೋರಿತ್ತು.

ದಿಲಿಪ್ ರೇಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) 409 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಶಿಕ್ಷೆಗೊಳಪಡಿಸಲಾಗಿದೆ, ಇದು ಸಾರ್ವಜನಿಕ ಸೇವಕರ ನಂಬಿಕೆ ದ್ರೋಹದಂತಹ ಕ್ರಿಮಿನಲ್ ಉಲ್ಲಂಘನೆಗೆ ಸಂಬಂಧಿಸಿದೆ.

ಈ ಪ್ರಕರಣವು ಜಾರ್ಖಂಡ್‌ನ ಗಿರಿಡಿಹ್‌ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999 ರಲ್ಲಿ ಸಿಟಿಎಲ್‌ಗೆ ಹಂಚಿಕೆಗೆ ಸಂಬಂಧಿಸಿದೆ. “ಕಾನೂನುಗಳನ್ನು ಗಾಳಿಗೆ ತೂರಿ, ಅಪ್ರಾಮಾಣಿಕವಾಗಿ ರಾಷ್ಟ್ರೀಕೃತವಲ್ಲದ ಕಲ್ಲಿದ್ದಲು ಗಣಿ ಪ್ರದೇಶಗಳನ್ನು ಸಿಟಿಎಲ್‌ಗೆ ವಹಿಸಿಕೊಡಲಾಗಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.


ಇದನ್ನೂ ಓದಿ: ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

0
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭಗೊಂಡಿದ್ದು, ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. "ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ...