Homeಅಂತರಾಷ್ಟ್ರೀಯಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕೊರೊನಾ ಎದುರಿಸಲು ಸಿದ್ಧರಾಗಿದ್ದೇವೆ ; ಮೋದಿ ಮನವಿಗೆ ಪಾಕ್‌ ಪ್ರತಿಕ್ರಿಯೆ

ಕರೋನ ವೈರಸ್ ವಿರುದ್ಧ ಹೋರಾಡಲು "ಸಾರ್ಕ್" ದೇಶಗಳ ಒಗ್ಗಟ್ಟು..

- Advertisement -
- Advertisement -

ಕರೋನ ವೈರಸ್ ಹಾಗೂ ಸಾಂಕ್ರಾಮಿಕ ರೋಗಗಳ ವಿರುದ್ಧ ಒಟ್ಟಾಗಿ ಕೆಲಸ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ ಒಂದು ದಿನದ ನಂತರ, ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರ ಟ್ವೀಟ್ಟರ್‌ನಲ್ಲಿ  “ಕೊರೋನ ವೈರಸ್ ವಿರುದ್ಧ ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಸಂಘಟಿತ ಪ್ರಯತ್ನಗಳ ಅಗತ್ಯವಿದೆ. ಈ ವಿಷಯದ ಬಗ್ಗೆ ಸಾರ್ಕ್ ಸದಸ್ಯ ರಾಷ್ಟ್ರಗಳ ವೀಡಿಯೊ ಸಮ್ಮೇಳನದಲ್ಲಿ ಭಾಗವಹಿಸಲು ಪ್ರಧಾನ ಮಂತ್ರಿಯ ವಿಶೇಷ ಸಹಾಯಕ ಇರಲಿದ್ದಾರೆ” ಎಂದು ಟ್ವೀಟ್ ಮಾಡಲಾಗಿದೆ.

ಪಾಕಿಸ್ತಾನ ತನ್ನ ನೆರೆಹೊರೆಯವರಿಗೆ ನೆರವು ನೀಡಲು ಸಿದ್ಧವಾಗಿದೆ ಎಂದು ವಕ್ತಾರರು ಈ ಹಿಂದೆ ಹೇಳಿದ್ದರು.  ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಈಗಾಗಲೇ ಕರೋನ ವೈರಸ್ ವಿರುದ್ಧ ರಾಷ್ಟ್ರೀಯ ಭದ್ರತೆಯ ಕುರಿತು ತುರ್ತು ಸಭೆಯನ್ನು ನಡೆಸಿದ್ದಾರೆ ಎಂದು ತಿಳಿಸಲಾಗಿದೆ.

ವಿಶ್ವಾದ್ಯಂತ 5,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡ ಹಾಗೂ 1.3 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದ ಕರೋನ ವೈರಸ್ ವಿರುದ್ದ ಹೋರಾಡಲು ಭಾರತದ ನೆರೆಹೊರೆಯವರು ಕೈಜೋಡಿಸಬೇಕೆಂದು ಶುಕ್ರವಾರ ಪ್ರಧಾನಿ ಮೋದಿ ಒತ್ತಾಯಿಸಿದ್ದರು.

“ಸಾರ್ಕ್ ರಾಷ್ಟ್ರಗಳ ನಾಯಕತ್ವವು ಕರೋನವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುತ್ತದೆ ಎಂದು ನಾನು ಪ್ರಸ್ತಾಪಿಸಲು ಬಯಸುತ್ತೇನೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಾಗರಿಕರನ್ನು ಆರೋಗ್ಯವಾಗಿಡುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಬಹುದು” ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ ಮತ್ತು ಶ್ರೀಲಂಕಾ ದೇಶಗಳು “ಸಾರ್ಕ್” ಸದಸ್ಯರಾಗಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಭೂತಾನ್‌ನ ಪ್ರಧಾನ ಮಂತ್ರಿ ಲೋಟೇ ತ್ಸೆರಿಂಗ್ ಉತ್ತರಿಸುತ್ತಾ: ” ಇಂತಹ ಕಾಲದಲ್ಲಿ ನಾವು ಒಗ್ಗೂಡಬೇಕು. ಸಣ್ಣ ಆರ್ಥಿಕತೆಗಳಿಗೆ ತೀವ್ರ ಹೊಡೆತ ಬಿದ್ದಿದೆ, ಆದ್ದರಿಂದ ವೀಡಿಯೋ ಕಾನ್ಫ್ರೆನ್ಸ್ ಗಾಗಿ ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.

ಶ್ರೀಲಂಕಾ ಅಧ್ಯಕ್ಷೆ ಗೋಟಬಯಾ ರಾಜಪಕ್ಸೆ ಕೂಡ ಪ್ರತಿಕ್ರಿಯಿಸಿ “ಶ್ರೀ ನರೇಂದ್ರ ಮೋದಿಯವರ ಆಹ್ವಾನಕ್ಕೆ ಧನ್ಯವಾದಗಳು. ಶ್ರೀಲಂಕಾ ಚರ್ಚೆಗೆ ಸೇರಲು, ಕಲಿಕೆಗಳನ್ನು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಮತ್ತು  ಕಲಿಯಲು ಸಿದ್ಧರಿದ್ದೇವೆ. ಈ ಪ್ರಯತ್ನದ ಸಮಯದಲ್ಲಿ ಒಗ್ಗಟ್ಟಿನಲ್ಲಿರೋಣ ಮತ್ತು ನಮ್ಮ ನಾಗರಿಕರನ್ನು ಸುರಕ್ಷಿತವಾಗಿರಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಸಾರ್ಕ್ ಪ್ರದೇಶದಲ್ಲಿ 126 ಪ್ರಕರಣಗಳಿವೆ; ಭಾರತದಲ್ಲಿ 82 ಮತ್ತು ಪಾಕಿಸ್ತಾನದಲ್ಲಿ 20 ಕರೋನ ವೈರಸ್ ಪ್ರಕರಣಗಳಿವೆ. ಭಾರತ ತನ್ನ ಮೊದಲ ವೈರಸ್ ಸಂಬಂಧಿತ ಸಾವನ್ನು ಗುರುವಾರ ಕರ್ನಾಟಕದಲ್ಲಿ ವರದಿ ಮಾಡಿತ್ತು ಮತ್ತು ಎರಡನೇ ಸಾವು ಶುಕ್ರವಾರ ರಾತ್ರಿ ದೆಹಲಿಯಲ್ಲಿ ವರದಿಯಾಗಿದೆ. ಇತರ ಸಾರ್ಕ್ ದೇಶಗಳಿಂದ ಈವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...