Homeಕರ್ನಾಟಕಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ಕರಾವಳಿಯಲ್ಲಿ ಮತ್ತೊಬ್ಬ ಯುವಕನ ಹತ್ಯೆ: ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

'ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು' ಎಂದ ಜನರು

- Advertisement -
- Advertisement -

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬ ಯುವಕನ ಹತ್ಯೆಯಾಗಿದೆ. ಮೇ 1ರಂದು ಗುರುವಾರ ಸಂಜೆ ಮಂಗಳೂರಿನ ಹೊರವಲಯ ಬಜ್ಪೆ ಬಳಿ ರೌಡಿ ಶೀಟರ್ ಸುಹಾಸ್ ಎಂಬಾತನ ಹತ್ಯೆಯಾಗಿತ್ತು. ಅದಾಗಿ ತಿಂಗಳು ಕಳೆಯುವುದೊರಳಗೆ, ಅಂದರೆ ಮೇ 27ರಂದು ಸಂಜೆ ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದಿದೆ.

ಸುಹಾಸ್ ಹತ್ಯೆಗೂ ನಾಲ್ಕು ದಿನ ಮುಂಚೆ, ಅಂದರೆ 27 ಏಪ್ರಿಲ್ 2025ರಂದು ಮಂಗಳೂರು ನಗರದ ಹೊರವಲಯ ಕುಡುಪು ಬಳಿಯ ಭಟ್ರ ಕಲ್ಲುರ್ಟಿ ದೇವಸ್ಥಾನ ಸಮೀಪ ಕೇರಳದ ವಯನಾಡ್ ಮೂಲದ ಅಶ್ರಫ್ ಎಂಬ 36 ವರ್ಷದ ಯವಕನ ಗುಂಪು ಹತ್ಯೆ ನಡೆದಿತ್ತು.

ಈ ಎಲ್ಲಾ ಹತ್ಯೆಗಳಿಗೆ ಕೋಮು ವೈಷಮ್ಯವೇ ಕಾರಣ ಎಂಬುವುದು ಜಿಲ್ಲೆಯ ಜನರ ಆರೋಪವಾಗಿದೆ. ಕೆಲ ಪ್ರಕರಣಗಳ ಹಿನ್ನೆಲೆ ಕೂಡ ಕೋಮು ಕಾರಣಕ್ಕೇ ಕೊಲೆಗಳು ನಡೆಯುತ್ತಿವೆ ಎಂಬುವುದನ್ನು ಸಾಬೀತುಪಡಿಸಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರು “ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಹತ್ಯೆ ನಡೆದಿದೆ”ಎಂದು ಹೇಳಿದ್ದರು.

ಮಂಗಳವಾರ ನಡೆದ ಅಬ್ದುಲ್ ರಹಿಮಾನ್ ಕೊಲೆ ಸುಹಾಸ್ ಹತ್ಯೆಗೆ ಪ್ರತೀಕಾರ ಆಗಿರಬಹುದು ಎಂಬುವುದು ಜನರ ಅನುಮಾನವಾಗಿದೆ. ಇದು ಕೋಮು ವೈಷ್ಯಮ್ಯದ ಕೊಲೆಯೇ ಎಂಬುವುದು ಇನ್ನೂ ಖಚಿತವಾಗಿಲ್ಲ.

ಒಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳೊಳಗೆ ಮೂವರು ಯುವಕರ ಹತ್ಯೆ ನಡೆದು ಹೋಗಿದೆ. ತಂದೆ-ತಾಯಿಗೆ ಮಕ್ಕಳು, ಹೆಂಡತಿಗೆ ಗಂಡ, ಮಕ್ಕಳಿಗೆ ಅಪ್ಪ, ಸಹೋದರರಿಗೆ ಸಹೋದರ ಇಲ್ಲವಾಗಿದ್ದಾರೆ.

ಕೋಮುವಾದಕ್ಕೆ ಕಡಿವಾಣ ಹಾಕದ ಸರ್ಕಾರ, ಜನರಿಂದ ತೀವ್ರ ಆಕ್ರೋಶ

ಅಶ್ರಫ್ ಅವರ ಗುಂಪು ಹತ್ಯೆ, ರೌಡಿ ಶೀಟರ್ ಸುಹಾಸ್ ಅವರನ್ನು ದುಷ್ಕರ್ಮಿಗಳು ಜನನಿಬಿಡ ಪ್ರದೇಶದ ರಸ್ತೆ ಮಧ್ಯೆಯೇ ಯಾವುದೇ ಭಯವಿಲ್ಲದೆ ಬರ್ಬರವಾಗಿ ಹತ್ಯೆಗೈದ ಬಳಿಕ, ಹದಗೆಟ್ಟ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಅತಿಥಿಯಂತೆ ಆಗಾಗ ಜಿಲ್ಲೆಗೆ ಭೇಟಿ ನೀಡುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜನ ಆಗ್ರಹಿಸಿದ್ದಾರೆ.

ಅಶ್ರಫ್ ಮತ್ತು ಸುಹಾಸ್ ಅವರ ಹತ್ಯೆಯ ಕೆಲ ದಿನಗಳ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದರು. ಆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಗೃಹ ಸಚಿವರು, ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕುವ ಮಾತುಗಳನ್ನು ಆಡಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ‘ಕೋಮುದ್ವೇಷ ನಿಗ್ರಹ ದಳ (Anti Communal Force)’ ಆರಂಭಿಸುವುದಾಗಿ ಘೋಷಿಸಿದ್ದರು.

ಗೃಹ ಸಚಿವರು ಸುದ್ದಿಗೋಷ್ಠಿ ನಡೆಸಿ ತೆರಳಿದ ಬೆನ್ನಿಗೇ ಜಿಲ್ಲೆಯ ಜನಪ್ರತಿನಿಧಿಯೊಬ್ಬರು ಸೇರಿದಂತೆ ಕೆಲ ಸಂಘಟನೆಗಳ ಮುಖಂಡರು ಬಹಿರಂಗವಾಗಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ. ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿದ್ದಾರೆ.

ಈ ಎಲ್ಲದರ ನಡುವೆ ಮಂಗಳವಾರ ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದು ಹೋಗಿದೆ. ಅವರ ಜೊತೆಗಿದ್ದ ಮತ್ತೊಬ್ಬ ಯುವಕನ ಕೊಲೆಯತ್ನ ನಡೆದಿದೆ.

ಈ ಬೆಳವಣಿಗೆಯಿಂದ ಜಿಲ್ಲೆಯ ಜನರು ಬೇಸತ್ತು ಹೋಗಿದ್ದು, ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

“ಖಂಡನೆಯ ತೇಪೆ ಸಾಕು, ಕಠಿಣ ಕ್ರಮ ಬೇಕು” ಜನರ ಆಗ್ರಹ

ಮಂಗಳವಾರ ಅಬ್ದುಲ್ ರಹಿಮಾನ್ ಅವರ ಕೊಲೆ ನಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದಿದ್ದರು.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿ “ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್, ಡಿಜಿಪಿ ಕರ್ನಾಟ ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿ ಜೊತೆ ಮಾತಾಡಿದ್ದೇನೆ.”

“ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ‌. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ‌.” ಎಂದು ಬರೆದುಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಈ ಪೋಸ್ಟ್ ಕೆಳಗಡೆ ಜನರು ಆಕ್ರೋಶದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಕೋಮುವಾದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದ ಉಸ್ತುವಾರು ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

 

 

 

 

 

 

 

ಕರಾವಳಿಯ ಹಲವು ಪಕ್ಷ, ಸಂಘಟನೆಗಳು ಕೂಡ ಸರಣಿ ಕೊಲೆಗಳು ಮತ್ತು ಹದೆಗೆಟ್ಟ ಕಾನೂನು ಸುವ್ಯವಸ್ಥೆಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಬಿಜೆಪಿ, ಸಂಘಪರಿವಾರದ ದ್ವೇಷ ಭಾಷಣ, ಸರ್ಕಾರ ಬೇಜವಾಬ್ದಾರಿ ನಡೆ ಜಿಲ್ಲೆಯ ಇಂದಿನ ಸ್ಥಿತಿಗೆ ಕಾರಣ ಎಂದು ಸಿಪಿಐಎಂ ಜಿಲ್ಲಾ ಘಟಕ ಆರೋಪಿಸಿದೆ.

ಪ್ರಚೋದನಕಾರಿ ಭಾಷಣಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಜನಪ್ರತಿನಿಧಿಗಳೇ, ಓಲೈಕೆ ರಾಜಕಾರಣ ನಿಲ್ಲಿಸಿ. ಕೊಲೆಗೆ ಪ್ರಚೋದನೆ ನೀಡಿದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ವಿಧಿಸಿ. ರಾಜ್ಯದ ಜನತೆಯನ್ನು ಕಾಪಾಡಿ ಎಂದು ಎಸ್ಎಸ್‌ಎಫ್‌ ಕರ್ನಾಟಕ ಆಗ್ರಹಿಸಿದೆ.

ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಕೋಮು ಗಲಭೆ ನಿಯಂತ್ರಿಸಲು ಸಾಧ್ಯವಾಗದಿದ್ದರೆ ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ ಎಂದು ಎಸ್‌ಕೆಎಸ್‌ಎಸ್‌ಎಫ್‌ ಸಂಘಟನೆ ಒತ್ತಾಯಿಸಿದೆ.

ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ಎಕ್ಸ್‌, ಇನ್‌ಸ್ಟಾಗ್ರಾಂ ಮತ್ತು ವಾಟ್ಸಾಪ್‌ ಮೆಸೆಂಜರ್‌ಗಳಲ್ಲಿ ಜಿಲ್ಲೆಯ ಧಾರ್ಮಿಕ ನಾಯಕರು, ಇತರ ಜನರು ಸರ್ಕಾರ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಂದು ಕೊಲೆ ನಡೆದ ಬಳಿಕ ಅದಕ್ಕೆ ಪ್ರತೀಕಾತ ತೀರಿಸುತ್ತೇವೆ ಎಂದು ಕೆಲವರು ಬಹಿರಂಗವಾಗಿ ವೇದಿಕೆ ಕಟ್ಟಿ ಬೆದರಿಕೆ ಹಾಕುವಾಗ ಪೊಲೀಸರು ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಕರಾವಳಿಯ ಕೋಮುವಾದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ ಎಂಬುವುದು ಜನರ ಪ್ರಶ್ನೆಯಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ:15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದ ಅಬ್ದುಲ್ ರಹಿಮಾನ್ ಅವರ‌ ಕೊಲೆ ಮತ್ತು ಕಲಂದರ್ ಶಾಫಿ ಅವರ ಕೊಲೆಯತ್ನ ಪ್ರಕರಣ ಸಂಬಂಧ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ದೀಪಕ್ ಮತ್ತು ಸುಮಿತ್ ಎಂಬವರು ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ಸುದ್ದಿ ಸಂಸ್ಥೆ ವಾರ್ತಾಭಾರತಿ ಇತ್ತೀಚಿನ ವರದಿಯಲ್ಲಿ ಹೇಳಿದೆ.

ಜಿಲ್ಲಾಧಿಕಾರಿಯನ್ನು ಪಾಕಿಸ್ತಾನಿ ಎಂದಿದ್ದ ಬಿಜೆಪಿ ನಾಯಕ | ಪ್ರಕರಣ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...