Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...