Homeಮುಖಪುಟಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ.

ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ ನೇತೃತ್ವವನ್ನು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ವಹಿಸಲಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಮೇ 24, 2026ರಂದು ಬೆಂಗಳೂರಿನ ಟೌನ್ ಹಾಲ್ ಬಳಿ ಪಕ್ಷದ ವತಿಯಿಂದ ಮೊದಲ ಬಹಿರಂಗ ಮಾನವ ಸರಪಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಬೆಂಗಳೂರು ಪೊಲೀಸರು ಈ ಕಾರ್ಯಕ್ರಮಕ್ಕೆ ಕಾನೂನುಬದ್ಧ ಅನುಮತಿ ನಿರಾಕರಿಸಿದ್ದರಿಂದ ಅದು ಯಶಸ್ವಿಯಾಗಿಲ್ಲ.

ನಿರುದ್ಯೋಗ ಮತ್ತು ಬೆಲೆ ಏರಿಕೆ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾನವ ಸರಪಳಿ ರಚಿಸಲು ಕರೆ ನೀಡಲಾಗಿತ್ತು. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಸೂಕ್ತ ಅನುಮತಿ ಇಲ್ಲದ ಕಾರಣಕ್ಕಾಗಿ ಬೆಂಗಳೂರು ನಗರ ಪೊಲೀಸರು ಈ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಿದ್ದರು. 

ದೇಶದಲ್ಲಿ ಇತ್ತೀಚೆಗೆ ನಡೆದ ನೀಟ್ ಮತ್ತು ಸಿಬಿಎಸ್‌ಸಿ ಪರೀಕ್ಷೆಗಳ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುವುದು ಈ ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ಸಿಜೆಪಿಯ ವಕ್ತಾರರು ಹೇಳಿಕೊಂಡಿದ್ದಾರೆ.

ಜೂನ್ 6ರಂದು ಅಭಿಜಿತ್ ದೀಪ್ಕೆ ಭಾರತಕ್ಕೆ

ಜೂನ್ 6, 2026ರ ಶನಿವಾರ ಬೆಳಿಗ್ಗೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಬೋಸ್ಟನ್‌ನಿಂದ ನೇರವಾಗಿ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅವರು ಪ್ರಸ್ತುತ ಅಮೆರಿಕದ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

ತಮ್ಮನ್ನು ಬರಮಾಡಿಕೊಳ್ಳಲು ಮತ್ತು ಚಳುವಳಿಗೆ ಬೆಂಬಲ ನೀಡಲು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಬೆಂಬಲಿಗರು ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕು ಎಂದು ಅವರು ಸೋಶಿಯಲ್ ಮೀಡಿಯಾ ಮೂಲಕ ಕರೆ ನೀಡಿದ್ದಾರೆ. 

ವಿಮಾನ ನಿಲ್ದಾಣದಿಂದ ನೇರವಾಗಿ ಬೆಂಬಲಿಗರೊಂದಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ, ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅಧಿಕೃತ ಅನುಮತಿ ಕೋರಲಿದ್ದಾರೆ ಎಂದು ವರದಿಯಾಗಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂಬುವುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಹಮ್ಮಿಕೊಂಡಿರುವ ಆನ್‌ಲೈನ್ ಅರ್ಜಿಗೆ ಈಗಾಗಲೇ 8 ಲಕ್ಷಕ್ಕೂ ಹೆಚ್ಚು ಜನರು ಸಹಿ ಹಾಕಿದ್ದಾರೆ. 

ಅಭಿಜೀತ್ ದೀಪ್ಕೆ ಭಾರತಕ್ಕೆ ಕಾಲಿಡುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸುವ ಅಥವಾ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಅವರ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಅಭಿಜೀತ್, “ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಮತ್ತು ಸಂವಿಧಾನ ನೀಡಿರುವ ಹಕ್ಕಿನ ಅಡಿಯಲ್ಲಿ ಶಾಂತಿಯುತವಾಗಿ ಧ್ವನಿ ಎತ್ತಲು ನಾನು ಸಿದ್ಧನಾಗಿದ್ದೇನೆ, ಅಗತ್ಯಬಿದ್ದರೆ ದೆಹಲಿಯಲ್ಲಿ ಬಂಧನಕ್ಕೊಳಗಾಗಲೂ ನಾನು ಸಿದ್ಧ” ಎಂದು ಇಂಟರ್ವ್ಯೂಗಳಲ್ಲಿ ಸ್ಪಷ್ಟಪಡಿಸಿದ್ದಾರೆ. 

ಸಿಜೆಪಿ ವಕ್ತಾರರಿಂದ ಮೊದಲ ಸುದ್ದಿಗೋಷ್ಠಿ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಚೊಚ್ಚಲ ಅಧಿಕೃತ ಸುದ್ದಿಗೋಷ್ಠಿಯನ್ನು ಜೂನ್ 3, 2026 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನಡೆಸಿದೆ. ಪಕ್ಷದ ನೂತನ ವಕ್ತಾರರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ಮುಂಬರುವ ಜೂನ್ 6ರ ಬೃಹತ್ ಪ್ರತಿಭಟನೆಯ ಸಂಪೂರ್ಣ ಕ್ರಿಯಾ ಯೋಜನೆಯನ್ನು ಪ್ರಕಟಿಸಿದ್ದಾರೆ.

ಪ್ರಮುಖ ತನಿಖಾ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಸೌರವ್ ದಾಸ್ ಸಿಜೆಪಿಯ ಮುಖ್ಯ ವಕ್ತರನಾಗಿ ನೇಮಕಗೊಂಡಿದ್ದಾರೆ. ರಾಜಕೀಯ ಸಂಶೋಧಕಿ ಮತ್ತು ಚಲನಚಿತ್ರ ನಿರ್ಮಾಪಕಿ ವಿಜೇತಾ ದಹಿಯಾ, ಮಾಜಿ ಮ್ಯಾನೇಜ್‌ಮೆಂಟ್ ಕನ್ಸಲ್ಟೆಂಟ್ ಅಶುತೋಷ್ ರಾಂಕಾ ಪಕ್ಷದ ಇನ್ನಿಬ್ಬರು ವಕ್ತಾರರು.

ದೇಶದಲ್ಲಿ ನೀಟ್-ಯುಜಿ, ಸಿಬಿಎಸ್‌ಸಿ ಮತ್ತು ಸಿಯುಇಟಿ ಪರೀಕ್ಷೆಗಳಲ್ಲಿ ನಡೆದಿರುವ ಸರಣಿ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳ ಸಂಪೂರ್ಣ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸೌರವ್ ದಾಸ್ ಒತ್ತಾಯಿಸಿದ್ದಾರೆ.

ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಜೂನ್ 6ರ ಶನಿವಾರ ಬೆಳಿಗ್ಗೆ 8 ಗಂಟೆಗೆ ಅಮೆರಿಕದಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಅವರು ನೇರವಾಗಿ ಬೆಂಬಲಿಗರೊಂದಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ತೆರಳಿ ಜಂತರ್ ಮಂತರ್ ಪ್ರತಿಭಟನೆಗೆ ಕಾನೂನುಬದ್ಧ ಅನುಮತಿ ಕೋರಲಿದ್ದಾರೆ ಎಂದಿದ್ದಾರೆ.

ಪ್ರಖ್ಯಾತ ಶಿಕ್ಷಣ ಸುಧಾರಕ ಮತ್ತು ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಜೂನ್ 6ರಂದು ದೆಹಲಿಯಲ್ಲಿ ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಕ್ತಾರರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

ಈ ಹೋರಾಟವು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಬ್ಯಾನರ್ ಅಡಿಯಲ್ಲಿ ಸೀಮಿತವಾಗಿಲ್ಲ. ದೇಶದ ಯುವಕರ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಹಾಗೂ ನಾಗರಿಕರು ಪಕ್ಷಾತೀತವಾಗಿ ಈ ಪ್ರತಿಭಟನೆಯಲ್ಲಿ ಕೈಜೋಡಿಸಬೇಕೆಂದು ಸಿಜೆಪಿ ವಿನಂತಿಸಿದೆ. 

“ಭ್ರಷ್ಟತೆಯಿಂದ ಸಂಪೂರ್ಣವಾಗಿ ಕೊಳೆತುಹೋಗಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಕನಿಷ್ಠ ಹೊಣೆಗಾರಿಕೆಯನ್ನು ಸರ್ಕಾರದಿಂದ ನಿರೀಕ್ಷಿಸುತ್ತಿದ್ದೇವೆ. ಭಾರತದ ರಾಜಕೀಯ ಚರ್ಚೆಯ ಸ್ವರೂಪವನ್ನೇ ಬದಲಾಯಿಸಲು ನಮ್ಮ ಹೊಸ ಪೀಳಿಗೆಯ ನಾಯಕರು ಸಜ್ಜಾಗಿದ್ದಾರೆ” ಎಂದು ಮುಖ್ಯ ವಕ್ತಾರ ಸೌರವ್ ದಾಸ್ ಸುದ್ದಿಗೋಷ್ಠಿಯಲ್ಲಿ ತೀಕ್ಷ್ಣವಾಗಿ ಹೇಳಿದ್ದಾರೆ.

ನಮಗೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮಾತ್ರ ಮುಖ್ಯವಲ್ಲ. ಈ ಭ್ರಷ್ಟ ವ್ಯವಸ್ಥೆ ಸರಿಯಾಗಬೇಕು. ಪೇಪರ್ ಲೀಕ್ ಆಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾದರೂ , ಪ್ರತಿಕ್ರಿಯಿಸದೆ ಮೌನ ಪಾಲಿಸುವ ಈ ಪದ್ದತಿ ಬದಲಾಗಬೇಕು. ಇಷ್ಟು ದೊಡ್ಡ ವಿಷಯವನ್ನು ಗಂಭೀರವಾಗಿ ಪರಿಗಣಿಸದ ವ್ಯವಸ್ಥೆ ಬದಲಾಗಬೇಕು ಎಂದಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ಒಂದು ರಾಜಕೀಯ ಪಕ್ಷವಲ್ಲ. ಇದು ಯುವಜನತೆಯ ಒಂದು ಆಂದೋಲನ ಅಥವಾ ಚಳುವಳಿ ಎಂದು ಸೌರವ್ ದಾಸ್ ಸ್ಪಷ್ಟಪಡಿಸಿದ್ದಾರೆ.

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...