Homeಮುಖಪುಟಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

- Advertisement -
- Advertisement -

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ. ಆದರೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಜೆಪಿ ತನ್ನ ಪಟ್ಟು ಮುಂದುವರೆಸಿದೆ.

ಇಂದು ಮಧ್ಯಾಹ್ನ ಪ್ರಧಾನ್ ಅವರ ರಾಜೀನಾಮೆ ಘೋಷಣೆಯ ನಂತರ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಸಂತಸ ವ್ಯಕ್ತಪಡಿಸಿದರು.

ಯುವಜನರನ್ನು ಉದ್ದೇಶಿಸಿ ಮಾತನಾಡಿದ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ, “ನಾವು ಸಾಧಿಸಿದ್ದೇವೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟಿದ್ದಾರೆ. ಈ ಸರ್ಕಾರದಲ್ಲಿ ‘ರಾಜೀನಾಮೆಗಳು ಅಸ್ತಿತ್ವದಲ್ಲಿಲ್ಲ’ ಎಂದು ಅವರು ಹೇಳುತ್ತಿದ್ದರು” ಎಂದರು.

“ಇದು ಪ್ರಜಾಪ್ರಭುತ್ವ; ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ನಮಗೆ ಇನ್ನೂ ಎರಡು ಬೇಡಿಕೆಗಳಿವೆ. ನಾವು ಇಷ್ಟಕ್ಕೆ ಹೋಗುವುದಿಲ್ಲ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಆದರೆ, ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ ಸಿಗಬೇಕು. ಅವರಿಗೆ ಸಿಗಲೇಬೇಕು” ಎಂದರು.

“ಆ ಎಲ್ಲಾ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ. ಎರಡನೆಯದಾಗಿ, 20 ರಂದು ಪೊಲೀಸ್ ಗೂಂಡಾಗಳು ವಿದ್ಯಾರ್ಥಿಗಳ ಮೇಲೆ ಕೃತ್ಯ ಎಸಗಿದರು. ಅದಕ್ಕಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ನೆನಪಿಡಿ, ಜಿರಳೆಯೊಂದಿಗೆ ಆಟವಾಡಬೇಡಿ” ಎಂದು ಅಭಿಜೀತ್ ಎಚ್ಚರಿಕೆ ನೀಡಿದರು.

ಸಿಜೆಪಿ ಬೇಡಿಕೆಗಳು

  1. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು – (ಕೊಟ್ಟಿದ್ದಾರೆ)
  2. ಆತ್ಮಹತ್ಯೆಯಿಂದ ಸಾವನ್ನಪ್ಪಿದ ಎಲ್ಲಾ ವಿದ್ಯಾರ್ಥಿಗಳ ಕುಟುಂಬಗಳಿಗೆ ರೂ 1 ಕೋಟಿ ಪರಿಹಾರ – ಬಾಕಿ ಇದೆ
  3. ಯಾವುದೇ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು – ಬಾಕಿ ಇದೆ
  4. ⁠ಆರ್‌ಎಎಫ್‌ ಮತ್ತು ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆ – ಬಾಕಿ ಇದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....