Homeಮುಖಪುಟಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ...

ಬೈಂದೂರು ಬಿಜೆಪಿ ಶಾಸಕನ ಒಡೆತನದ ಕಾಲೇಜಿನ ಸಿಬ್ಬಂದಿಯಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ- ಕಿರುಕುಳ ಆರೋಪ: ವಿದ್ಯಾರ್ಥಿಗಳಿಂದ ಧರಣಿ

- Advertisement -
- Advertisement -

ಬೈಂದೂರು ಬಿಜೆಪಿ ಶಾಸಕ ಸುಕುಮಾರ ಶೆಟ್ಟ ಮಾಲಿಕತ್ವದ ಖಾಸಗಿ ಕಾಲೇಜಿನ ಪಿ.ಆರ್.ಓ ಆಗಿ ಕೆಲಸ ಮಾಡುತ್ತಿರುವ ನೌಕರನೊಬ್ಬ ಕಾಲೇಜಿನ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. ಆತನನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಾಲೇಜಿನ ವಿದ್ಯರ್ಥಿಗಳು ಒತ್ತಾಯಿಸಿದ್ದಾರೆ.

ಕುಂದಾಪುರದ ಬಿ.ಬಿ.ಹೆಗ್ಡೆ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಪಿಆರ್‌ಓ ಹುದ್ದೆಯಲ್ಲಿರುವ ನಾಗರಾಜ ಶೆಟ್ಟಿ ನೈಕಂಂಬ್ಳಿ ಎಂಬಾತನ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜ ಶೆಟ್ಟಿ ರಾತ್ರಿಯ ವೇಳೆ ಕಾಲೇಜಿನ ವಿದ್ಯಾರ್ಥಿನಿಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೆ. ವಿದ್ಯಾರ್ಥಿನಿಯರಿಗೆ ನಿಮ್ಮ ವೈಯಕ್ತಿಯ ವಿವರರಗಳನ್ನು ಕೊಡಿ, ಪರ್ಸನಲ್ ಆಗಿ ಏನ್ನನ್ನು ಬೇಕಾದರೂ ಮೆಸೇಜ್ ಮಾಡಿ, ರಾತ್ರಿಯ ವೇಳೆ ಒಬ್ಬರೂ ಇರುತ್ತೀರಾ, ನಿಮ್ಮ ಸೆಲ್ಫಿ ಕಳಿಸಿ ಎಂದೆಲ್ಲಾ ಚೇಡಿಸಿದ್ದಾನೆ. ಅಶ್ಲೀಲ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಲ್ಲದೆ ಎಲ್ಲಾ ಮೆಸೇಜ್‌ಗಳನ್ನು ಡಿಲೀಟ್ ಮಾಡಿ ಎಂದು ದುಂಬಾಲು ಬಿದ್ದಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಆತನ ವರ್ತನೆಯ ಬಗ್ಗೆ ಹಲವು ಬಾರಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆತನ ವಿರುದ್ದ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಕಾಲೇಜಿ ಆಡಳಿತದ ವಿರುದ್ದ ಸಿಟ್ಟಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿಭಟನೆಗೆ ಇಳಿಸಿದ್ದಾರೆ.

ಪ್ರತಿಭಟನೆಯ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಬಂದ ಪೊಲೀಸರು, ವಿದ್ಯಾರ್ಥಿನಿಯರು ಒಬ್ಬೊಬ್ಬರಾಗಿ ಬಂದು ಕಂಪ್ಲೇಂಟ್ ಕೊಟ್ಟರೆ ಮಾತ್ರ ಆತನ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇದರಿಂದ ಮತ್ತಷ್ಟು ಬೇಸತ್ತ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ.

ನಂತರ, ಪ್ರತಿಭಟನೆ ಕೈಬಿಡುವಂತೆ ವಿದ್ಯಾರ್ಥಿಗಳಲ್ಲಿ ಕೇಳಿಕೊಂಡು ಕಾಲೇಜು ಪ್ರಾಂಶುಪಾಲ ಉಮೇಶ್ ರವರು, ಆರೋಪಿತ ಸಿಬ್ಬಂದಿಯ ವಿರುದ್ದ ಶಿಸ್ತುಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ. ಆದರೆ, ಆರೋಪಿತ ಪಿಆರ್‌ಓ ನನ್ನು ಸ್ಥಳಕ್ಕೆ ಕರೆಸಬೇಕೆಂದು ಪಟ್ಟು ಹಿಡಿದ ವಿದ್ಯಾರ್ಥಿಗಳು, ಬಿಸಿಲನ್ನೂ ಲೆಕ್ಕಿಸದೇ ಸ್ಥಳದಲ್ಲೇ ಧರಣಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರೂ, ಬೈಂದೂರು ಶಾಸಕರೂ ಆದ ಸುಕುಮಾರ್ ಶೆಟ್ಟಿಯವರನ್ನೂ ಸ್ಥಳಕ್ಕೆ ಕರೆಸುವಂತೆ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದು, ಪ್ರತಿಭಟನೆ ಮುಂದುವರಿಸಿದ್ದಾರೆ.


ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...