Homeಕರ್ನಾಟಕಕಾಲೇಜುಗಳು ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳು ಪ್ರಯಾಣಿಸಲು ಬಸ್‌ಗಳೇ ಇಲ್ಲ!

ಕಾಲೇಜುಗಳು ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳು ಪ್ರಯಾಣಿಸಲು ಬಸ್‌ಗಳೇ ಇಲ್ಲ!

ಸರ್ಕಾರ ಏಕಪಕ್ಷೀಯ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ, ಮೊದಲೇ ಉನ್ನತ ಶಿಕ್ಷಣ ಪಡೆಯಲು ಆಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಮತ್ತಷ್ಟು ದೂರ ಉಳಿಯುವಂತೆ ಮಾಡುವ ಹುನ್ನಾರ ನಡೆದಿದೆ ಎಂಬ ಆರೋಪವೂ ಇದೆ

- Advertisement -
- Advertisement -

ಕರ್ನಾಟಕದಲ್ಲಿ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಂಡ ಬಳಿಕ ಪದವಿ, ಡಿಪ್ಲಮೊ, ಇಂಜಿನಿಯರಿಂಗ್, ವೈದ್ಯಕೀಯ, ಫಾರ್ಮಸಿ ಕಾಲೇಜುಗಳೇನೋ ಆರಂಭವಾಗಿವೆ. ಇದು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾದರೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಂಕಟವನ್ನು ತಂದೊಡ್ಡಿದೆ. ಈವರೆಗೆ ಗ್ರಾಮೀಣ ಭಾಗದಲ್ಲಿ ಬಸ್ ವ್ಯವಸ್ಥೆಯನ್ನೇ ಕಲ್ಪಿಸಿಲ್ಲ. ಇದರ ಪರಿಣಾಮವಾಗಿ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು ಪಾಠ-ಪ್ರವಚನ ಕೇಳಲೂ ಅಡ್ಡಿಯನ್ನುಂಟು ಮಾಡಿದೆ.

ರಾಜ್ಯ ಸರ್ಕಾರ ಕಾಲೇಜುಗಳನ್ನು ಆರಂಭಿಸಿಯೇ ತೀರಬೇಕು ಎಂಬ ಹಟಕ್ಕೆ ಬಿದ್ದಂತೆ ತೀರ್ಮಾನ ಕೈಗೊಂಡಿದೆ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ವಿದ್ಯಾರ್ಥಿ, ಪೋಷಕರ ಅಭಿಪ್ರಾಯ ಕೂಡ ಕೇಳಿಲ್ಲ. ಸರ್ಕಾರ ಏಕಪಕ್ಷೀಯ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಮೊದಲೇ ಉನ್ನತ ಶಿಕ್ಷಣ ಪಡೆಯಲು ಆಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಮತ್ತಷ್ಟು ದೂರ ಉಳಿಯುವಂತೆ ಮಾಡುವ ಹುನ್ನಾರ ನಡೆದಿದೆ ಎಂಬ ಆರೋಪವೂ ಇದೆ.

ಇದನ್ನೂ ಓದಿ: ಜೈಲು ಖೈದಿಗಳ ಮಕ್ಕಳ ಶಿಕ್ಷಣಕ್ಕೆ 20 ಲಕ್ಷ ಮೀಸಲಿಟ್ಟ ಕೇರಳ ಸರ್ಕಾರ!

ರಾಜ್ಯದ ತಾಲೂಕು ಕೇಂದ್ರಗಳು ಮತ್ತು ಹೋಬಳಿ ಕೇಂದ್ರಗಳಲ್ಲಿ ಪದವಿ ಕಾಲೇಜುಗಳನ್ನು ತೆರೆಯಲಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವುದು ಸರ್ಕಾರದ ಪ್ರಮುಖ ಉದ್ದೇಶವೂ ಹೌದು. ಆದರೆ ಈಗ ಸರ್ಕಾರ ಕಾಲೇಜುಗಳ ಆರಂಭದ ಬಗ್ಗೆ ತೆಗೆದುಕೊಂಡಿರುವ ನಿರ್ಧಾರ ವೈಜ್ಞಾನಿಕವಾಗಿಲ್ಲ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಂತೆ ಕಂಡುಬರುತ್ತಿಲ್ಲ. ಹಾಗೆ ನೋಡಿದರೆ ಮೇಲ್ನೋಟಕ್ಕೆ ಈ ವಿದ್ಯಾರ್ಥಿಗಳನ್ನು ಕಡೆಗಣಿಸಿರುವುದು ಕಾಣುತ್ತದೆ.

ಎಸ್.ಎಫ್.ಐ ತುಮಕೂರು ಜಿಲ್ಲಾಧ್ಯಕ್ಷ ಹಾಗು ವಿದ್ಯಾರ್ಥಿ ನಾಯಕ ಈ.ಶಿವಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿ “ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ. ಒಂದೆರಡು ಬಸ್‌ಗಳನ್ನು ಬಿಟ್ಟಿದ್ದಾರೆ. ಅವು ಯಾವುದೋ ಸಮಯಕ್ಕೆ ಬರುತ್ತವೆ-ಹೋಗುತ್ತವೆ. ಹಾಗಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮಸ್ಯೆಯಾಗುತ್ತದೆ. ಇದರಲ್ಲಿ ಗ್ರಾಮೀಣ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಹುನ್ನಾರವೂ ನಡೆಯುತ್ತಿದೆ. ಖಾಸಗಿ ಬಸ್ ಮತ್ತು ಸರ್ಕಾರಿ ಬಸ್‌ಗಳನ್ನು ಮೊದಲು ಇದ್ದ ರೀತಿಯಲ್ಲಿ ಬಿಟ್ಟರೆ ಮಾತ್ರ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..

“ಈ ಸಂಬಂಧ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಶೇ. 50ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಗಳಲ್ಲಿ ಉಳಿದು ಕೊಳ್ಳಲು ಅವಕಾಶ ಕಲ್ಪಿಸಿದೆ. ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಬಂದು ಹಾಸ್ಟೆಲ್ ಸೇರಿಕೊಂಡು ಓದುವ ಕನಸಿನೊಂದಿಗೆ ಬಂದಿರುವ ವಿದ್ಯಾರ್ಥಿಗಳಿಗೆ ಈ ಸುತ್ತೋಲೆ ಬರಸಿಡಿಲು ಬಡಿದಂತೆ ಆಗಿದೆ. ಸರ್ಕಾರ ಅವರ ಉನ್ನತ ಶಿಕ್ಷಣದ ಕನಸಿಗೆ ತಣ್ಣೀರು ಎರೆಚಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಎಲ್ಲಿ ಹೋಗಬೇಕು. ಅವರು ವ್ಯಾಸಂಗ ಮಾಡಬಾರದೆ? ಚುನಾವಣೆಯಲ್ಲಿ ಸಾವಿರಾರು ಜನ ಸೇರುತ್ತಾರೆ. ಅಲ್ಲಿ ಶೇ. 50 ರ ನೀತಿ ಅನ್ವಯವಾಗುವುದಿಲ್ಲವೇ? ಸ್ಯಾನಿಟೈಜ್ ಮಾಡುವುದಿಲ್ಲ, ಮಾಸ್ಕ್ ಇರುವುದಿಲ್ಲ, ದೈಹಿಕ ಅಂತರವನ್ನು ಕೇಳುವಂತೆಯೇ ಇಲ್ಲ. ರಾಜಕಾರಣಿಗಳು ನಡೆಸುವ ಸಭೆ -ಸಮಾರಂಭಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ವಿದ್ಯಾರ್ಥಿಗಳಿಗೆ ಮಾತ್ರ ನಿಯಮಗಳನ್ನು ವಿಧಿಸಿ ಶಿಕ್ಷಣದಿಂದ ದೂರ ಉಳಿಯುವಂತೆ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 175ಕ್ಕೂ ಹೆಚ್ಚು ತಾಲೂಕು ಕೇಂದ್ರಗಳಿವೆ. ಪ್ರತಿಯೊಂದು ತಾಲೂಕು ಕೇಂದ್ರದಲ್ಲೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಹೋಬಳಿ ಮಟ್ಟದಲ್ಲೂ ಕಾಲೇಜುಗಳಿವೆ. ವಿದ್ಯಾರ್ಥಿಗಳು ನಿತ್ಯವೂ ಕಾಲೇಜುಗಳಿಗೆ ತಲುಪಲು ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಬಸ್‌ಗಳ ಸಂಚಾರವೂ ಇಲ್ಲ. ಅವುಗಳ ಓಡಾಟಕ್ಕೆ ಅನುಮತಿಯನ್ನೂ ನೀಡಿಲ್ಲ. ಪ್ರಯಾಣಿಕರ ಸಂಖ್ಯೆ ಆಧರಿಸಿ ಕೆಎಸ್ಆರ್.ಟಿ.ಸಿ ಬಸ್ ಬಿಡಲಾಗಿದೆ. ಅದೂ ರಾಜ್ಯ ಹೆದ್ದಾರಿಗಳಲ್ಲಿ ಮಾತ್ರ ಬಸ್‌ಗಳು ಸಂಚರಿಸುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಹೇಗೆ ತರಗತಿಗಳಿಗೆ ಹಾಜರಾಗಬೇಕು ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸಿದಂತೆ ಇಲ್ಲ.

ಇದನ್ನೂ ಓದಿ: ಕೊರೊನಾ ನಂತರ 1.10 ಕೋಟಿ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ- ಯುನೆಸ್ಕೋ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲ. ನಗರದ ಹಾಸ್ಟೆಲ್‌ಗಳಲ್ಲಿದ್ದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆಯೂ ಇಲ್ಲ. ಅರ್ಧ ಮಂದಿಗೆ ಮಾತ್ರ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳಲು ಮತ್ತು ಊಟ ನೀಡುವಂತಹ ಕ್ರಮ ಕೈಗೊಂಡಿರುವ ಸರ್ಕಾರ, ವಿದ್ಯಾರ್ಥಿಗಳನ್ನು ಮೂಲಭೂತ ಹಕ್ಕುಗಳಿಂದ ವಂಚಿತರನ್ನಾಗಿಸಿದೆ. ಅವರ ಶಿಕ್ಷಣದ ಹಕ್ಕನ್ನು ಕಸಿದುಕೊಂಡಿದೆ. ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದೆ. ಲಾಭ ಬರುವಂತಿದ್ದರೆ ಎಷ್ಟು ಜನ ಬೇಕಾದರೂ ಸೇರಬಹುದು. ಬಸ್‌ಗಳಲ್ಲಿ ದೈಹಿಕ ಅಂತರ ಕಾಪಾಡದೆಯೂ ಇರಬಹುದು. ಇದು ನ್ಯಾಯವೇ? ಎಂಬ ಪ್ರಶ್ನೆ ಎದುರಾಗಿದೆ.

ಕಾಲೇಜುಗಳ ಆರಂಭಕ್ಕೆ ವಿದ್ಯಾರ್ಥಿ ಸಂಘಟನೆಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, “ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು. ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಅವಕಾಶ ಕಲ್ಪಿಸಬೇಕು. ಮಾಸ್ಕ್, ಸ್ಯಾನಿಟೈಜರ್ ವ್ಯವಸ್ಥೆಯನ್ನು ಸರ್ಕಾರವೇ ನೀಡಬೇಕು. ಕೊರೊನ ಸೋಂಕಿನಿಂದ ಕೆಲಸ, ಉದ್ಯೋಗ ಕಳೆದುಕೊಂಡ ಆರ್ಥಿಕ ಸಂಕಷ್ಟದಲ್ಲಿರುವ ಜನರ ನೆರವಿಗೆ ಸರ್ಕಾರ ಬರಬೇಕು. ಶುಲ್ಕವನ್ನು ವಾಪಸ್ ನೀಡಬೇಕು” ಎಂದು ವಿದ್ಯಾರ್ಥಿ ಸಂಘಟನೆಗಳು ಆಗ್ರಹಿಸಿವೆ


ಇದನ್ನೂ ಓದಿ: ದಮನಿತರಿಗೆ ಶಿಕ್ಷಣಕ್ರಮ ಹೇಗಿರಬೇಕು?: ಪಾಲೊ ಫ್ರೇರಿಯ ‘ಪೆಡಗಾಗಿ ಆಫ್ ದಿ ಅಪ್ರೆಸ್ಡ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...