Homeಅಂತರಾಷ್ಟ್ರೀಯಸ್ವಾಮಿಯ ಕೈಯ್ಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ ಕೊಲಂಬೊ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು!

ಸ್ವಾಮಿಯ ಕೈಯ್ಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ ಕೊಲಂಬೊ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು!

ಶ್ರೀಲಂಕಾ ಪ್ರಧಾನಿಯ ಪ್ರಮುಖ ಬೆಂಗಲಿಗನನ್ನು ಕುಲಪತಿಯನ್ನಾಗಿ ಮಾಡಿದ್ದಕ್ಕೆ ವಿದ್ಯಾರ್ಥಿಗಳ ವಿಭಿನ್ನ ಪ್ರತಿಭಟನೆ

- Advertisement -
- Advertisement -

ಕೊಲಂಬೊ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ದೇಶದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಬಲಿಗ ಸ್ವಾಮಿಯೊಬ್ಬರನ್ನು ನೇಮಿಸಿದ್ದನ್ನು ವಿರೋಧಿಸಿ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದಿದೆ.

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಮುಖ ಬೆಂಗಲಿಗ ಧರ್ಮ ಗುರು, ಮುರುತ್ತೆತ್ತುವೆ ಆನಂದ ಥೇರೊ ಅವರನ್ನು ಅಲ್ಲಿನ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಕೊಲಂಬೊ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದ್ದರು. ಆದರೆ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಯು ಎಂದಿಗೂ ರಾಜಕೀಯ ನೇಮಕಾತಿಯಾಗಬಾರದು ಹಾಗೂ ರಾಜಕೀಯ ಕಾರ್ಯಸೂಚಿಯನ್ನು ಪೂರೈಸುವಂತಿರಬಾರದು ಎಂದು ಪ್ರತಿಪಾದಿಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ:5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

ಇಷ್ಟೇ ಅಲ್ಲದೆ, ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆಫ್ ಮ್ಯಾನೇಜ್ಮೆಂಟ್ ಮತ್ತು ಫೈನಾನ್ಸ್ ಟೀಚರ್ಸ್ ಅಸೋಸಿಯೇಷನ್ ​​(ಎಫ್‌ಎಂಎಫ್‌ಟಿಎ) ಕೂಡಾ ಪದವಿ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡಿತ್ತು.

ವಿಡಿಯೊ ನೋಡಿ

ಆದರೆ ದೇಶದ ಆಡಳಿತ ವರ್ಗ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಮನ್ನಿಸಿರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಗುಂಪೊಂದು ವಿಶ್ವವಿದ್ಯಾಲಯದ ಪದವಿ ಸಮಾರಂಭದಲ್ಲಿ ಪ್ರಮಾಣಪತ್ರವನ್ನು ಸ್ವೀಕರಿಸುವ ಸಮಯದಲ್ಲಿ ಸ್ವಾಮಿಯ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ:ಚಲ್ಯ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲ: ಜೀವ ಭಯದಲ್ಲಿ ಶಾಲೆ ಬಿಡುತ್ತಿದ್ದಾರೆ ವಿದ್ಯಾರ್ಥಿಗಳು

ಹಲವಾರು ವಿದ್ಯಾರ್ಥಿಗಳು ವೇದಿಕೆ ಮೇಲೆ ಬಂದು ಧರ್ಮ ಗುರುವಿನ ಕೈಯ್ಯಿಂದ ಪ್ರಮಾಣ ಪತ್ರವನ್ನು ಸ್ವೀಕರಿಸದೇ ಅವರನ್ನು ಮುಜುಗರಕ್ಕೆ ಒಡ್ಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನೆಟ್ಟಿಗರಿಂದ ಮೆಚ್ಚುಗೆ ಗಳಿಸಿದೆ. ಪ್ರತಿಭಟನೆಯನ್ನು ಹೀಗೆ ಕೂಡಾ ಮಾಡಬಹುದು ಎಂದು ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಅಭಿನಂಧನೆಗಳ ಸುರಿಮಳೆ ಸುರಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವೇದಿಕೆಗೆ ಆಗಮಿಸಿ ಕುಲಪತಿಯ ಕೈಯಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಮುರುತ್ತೆತ್ತುವೆ ಆನಂದ ಥೇರೊ ಅವರನ್ನು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರು ಕಳೆದ ತಿಂಗಳು ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿದ್ದರು. ಅವರು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಪ್ರಬಲ ಬೆಂಬಲಿಗರು ಎಂದು ಅಲ್ಲಿನ ಮಾಧ್ಯಮಗಳು ಹೇಳಿವೆ.

ಇದನ್ನೂ ಓದಿ:ಕಾಲೇಜು ಆರಂಭವಾಗಿ 2 ತಿಂಗಳಾದರೂ ಹಾಸ್ಟೆಲ್‌ನಲ್ಲಿ ಊಟವಿಲ್ಲ: ಮಹಾರಾಣಿ ವಿದ್ಯಾರ್ಥಿನಿಯರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ವಿಚಾರದ ಘನತೆ ಎಂದರೆ ಇದು. ಯುವತಿ ಯುವಕರ ಸ್ವಾಭಿಮಾನದ ನಡೆಯು ಅನುಕರಣೀಯವಾಗಿದೆ.

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...