Homeರಾಜಕೀಯ‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

‘ರಜೆಯಲ್ಲಿ ಅಸ್ಸಾಂಗೆ ಬನ್ನಿ’: ಉದ್ಧವ್‌ ಠಾಕ್ರೆಗೆ ವ್ಯಂಗ್ಯವಾಗಿ ಆಹ್ವಾನಿಸಿದ ಸಿಎಂ ಹಿಮಂತ ಬಿಸ್ವಾ

- Advertisement -
- Advertisement -

ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ ಆರೋಪವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ತಳ್ಳಿಹಾಕಿದ್ದು, ರಾಜ್ಯಕ್ಕೆ ಭೇಟಿ ನೀಡುವ ಯಾರನ್ನೂ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ್‌ ಅಘಾಡಿ ಸರ್ಕಾರದ ವಿರುದ್ಧವೇ ಸರ್ಕಾರದ ಭಾಗವಾಗಿರುವ ಶಿವಸೇನೆ ಶಾಸಕರು ಬಂಡಾಯ ಎದ್ದು ಗುಜರಾತ್‌ನ ಸೂರತ್‌ಗೆ ತೆರಳಿದ್ದರು. ಆದರೆ ಶಿವಸೇನೆಯ ಮಧ್ಯವರ್ತಿಗಳು ಗುಜರಾತಿಗೆ ಆಗಮಿಸುತ್ತಿದ್ದಂತೆ, ಅಲ್ಲಿಂದ ಅಸ್ಸಾಂನ ಗುವಾಹಟಿಗೆ ಬಂಡಾಯ ಶಾಸಕರನ್ನು ಸ್ಥಳಾಂತರಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಂಡಾಯ ಶಾಸಕರು ಗುವಾಹಟಿಗೆ ಬಂದು ಇಳಿಯುವ ಮೊದಲೇ, ಮುಖ್ಯಮಂತ್ರಿ ಹಿಮಂತ ಅವರು ಪ್ರಸ್ತುತ ಶಾಸಕರು ಉಳಿದಿರುವ ಹೋಟೆಲ್‌‌ನಲ್ಲಿ ಕಾಣಿಸಿಕೊಂಡಿದ್ದರು. ಹೀಗಾಗಿ, ಬಂಡಾಯ ಶಿವಸೇನೆ ಶಾಸಕರಿಗೆ ಆತಿಥ್ಯ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ಬಂಡಾಯಕ್ಕೆ ನೆರವು ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ: ಉದ್ಧವ್ ಸರ್ಕಾರದ ಬಿಕ್ಕಟ್ಟಿನಲ್ಲಿ ನಮ್ಮ ಪಾತ್ರವಿಲ್ಲ ಎಂದ ಮಹಾರಾಷ್ಟ್ರ ಬಿಜೆಪಿ

“ದೇಶದಾದ್ಯಂತ ಇರುವ ಶಾಸಕರನ್ನು ಅಸ್ಸಾಂಗೆ ಭೇಟಿ ನೀಡುವಂತೆ ನಾನು ಆಹ್ವಾನಿಸುತ್ತೇನೆ. ಜನರು ಹೋಟೆಲ್‌ಗೆ ಬರುವುದನ್ನು ತಡೆಯುವುದು ಹೇಗೆ? ದೇಶದಲ್ಲಿ ಫೆಡರಲ್ ರಚನೆ ಇರುವುದರಿಂದ ಅಸ್ಸಾಂನಲ್ಲಿ ಹೋಟೆಲ್‌ಗೆ ಬರಬೇಡಿ ಎಂದು ನಾನು ಹೇಳಲು ಸಾಧ್ಯವಿದೆಯೆ? ಯಾರಾದರೂ ಬಂದಾಗ ನನಗೆ ಸಂತೋಷವಾಗುತ್ತದೆ. ಅಸ್ಸಾಂಗೆ, ಅವರು ಎಲ್ಲಿಯವರೆಗೆ ಬೇಕಾದರೂ ಇರಬಹುದು” ಎಂದು ಹಿಮಂತ ಶರ್ಮಾ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಉದ್ಧವ್‌ ಠಾಕ್ರೆ ಅವರಿಗೆ ನೀವು ಏನು ಹೇಳಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರಜೆಗೆ ಸಮಯದಲ್ಲಿ ನೀವೂ ಅಸ್ಸಾಂಗೆ ಬರಬೇಕು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಸಚಿವ ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಶಿವಸೇನೆ ಶಾಸಕರು ಬಿಜೆಪಿ ಆಡಳಿತದ ಅಸ್ಸಾಂನಲ್ಲಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಬಂಡಾಯ ಶಾಸಕರು, ಶಿವಸೇನೆಯು ಮಹಾ ವಿಕಾಸ್ ಅಘಾಡಿ ಸರ್ಕಾರದ ಮೈತ್ರಿಯನ್ನು ತೊರೆದು, ಅದರ ಬದಲಿಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡುವಂತೆ ಕೇಳಿಕೊಂಡಿದ್ದಾರೆ.

ಪ್ರಸ್ತುತ ಎಣಿಕೆಗಳ ಪ್ರಕಾರ, ಶಿಂಧೆ ಅವರ ವಿರುದ್ಧ ಪಕ್ಷಾಂತರ ವಿರೋಧಿ ಕಾನೂನು ಜಾರಿ ಮಾಡಲು ಸಾಧ್ಯವಿಲ್ಲ. ಶಿವಸೇನೆಯ ಐವತ್ತು ಶಾಸಕರಲ್ಲಿ ಅವರಿಗೆ ಅಗತ್ಯವಾದ 37 ಶಾಸಕರ ಬೆಂಬಲ ಇದೆ ಎಂದು ನಂಬಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪ್ರವಾಹದಲ್ಲಿ ಸಿಲುಕಿರೋರಿಗೆ ಏನಾದ್ರು ವ್ಯವಸ್ಥೆ ಮಾಡಪ್ಪ ಪುಣ್ಯಾತ್ಮ ಆಮೇಲೆ ವ್ಯಂಗ್ಯ ಮಾಡುವಂತೆ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...