Homeಮುಖಪುಟ"ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!" - ಭಾಗವತ್‌ಗೆ ವಿರೋಧ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

- Advertisement -
- Advertisement -

ನ್ಯೂಯಾರ್ಕ್/ಮುಂಬೈ:

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ ಮಾತನಾಡಿದ ಭಾಗವತ್ ನಡೆಯನ್ನು ಭಾರತದ ವಿರೋಧ ಪಕ್ಷಗಳ ನಾಯಕರು ಹಾಗೂ ಪ್ರಮುಖರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, “ಇದು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸುವ ದ್ವಂದ್ವ ನಿಲುವು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೋಹನ್ ಭಾಗವತ್ ಹೇಳಿದ್ದೇನು?

ನ್ಯೂಯಾರ್ಕ್‌ನ ಪ್ರತಿಷ್ಠಿತ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆದ ‘ಯುನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್’ (ಜಾಗತಿಕ ಏಕತಾ ಮಹೋತ್ಸವ) ಕಾರ್ಯಕ್ರಮದಲ್ಲಿ ಭಾರತೀಯ ಮೂಲದ ಜನರನ್ನುದ್ದೇಶಿಸಿ ಮೋಹನ್ ಭಾಗವತ್ ಮಾತನಾಡಿದರು. ಈ ವೇಳೆ, “ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಯಾವ ಹಿಂದೂವಾದರೂ ಭಾವಿಸಿದರೆ, ಅವನು ನಿಜವಾದ ಹಿಂದೂ ಆಗಿರಲು ಸಾಧ್ಯವೇ ಇಲ್ಲ” ಎಂದರು. ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಭಾರತೀಯತೆ ಮತ್ತು ಸಹಿಷ್ಣುತೆ ಎಂದು ಅವರು ಪ್ರತಿಪಾದಿಸಿದರು.

ಭಾಗವತ್ ಹೇಳಿಕೆಗೆ ವ್ಯಕ್ತವಾದ ತೀಕ್ಷ್ಣ ವಾಗ್ದಾಳಿಗಳು:

ಸಂಜಯ್ ರಾವತ್

“ಮೋಹನ್ ಭಾಗವತ್ ಅವರು ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಿ ಆಡುವುದನ್ನು ಬಿಟ್ಟು, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಬೇಕು. ಹಿಂದೂ ಧರ್ಮದಲ್ಲಿ ಇದಕ್ಕೆ ‘ಢೋಂಗಿ ತನ’ ಅಥವಾ ನಾಟಕ ಎನ್ನಲಾಗುತ್ತದೆ. ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ. ದೇಶದ ಒಳಗಿರುವ ಸರ್ವಾಧಿಕಾರ ಮತ್ತು ವಿಭಜಕ ರಾಜಕಾರಣದ ಬಗ್ಗೆ ಭಾಗವತ್ ಅವರು ಮೊದಲು ಭಾರತದಲ್ಲಿ ಮಾತನಾಡಲಿ” ಎಂದು ಸವಾಲು ಹಾಕಿದ್ದಾರೆ.

ಪ್ರಿಯಾಂಕ್ ಖರ್ಗೆ 

ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, “ಕಳೆದ 100 ವರ್ಷಗಳಿಂದ ‘ಹಿಂದೂ ರಾಷ್ಟ್ರ’ದ ಕಲ್ಪನೆಯನ್ನು ಬಿತ್ತುತ್ತಿರುವ ಈ ನೋಂದಣಿಯಾಗದ ಸಂಸ್ಥೆ (ಆರ್‌ಎಸ್‌ಎಸ್), ಅಮೆರಿಕದಲ್ಲಿ ಮಾತ್ರ ಮುಸ್ಲಿಮರನ್ನು ವಿರೋಧಿಸುವವನು ಹಿಂದೂವೇ ಅಲ್ಲ ಎನ್ನುತ್ತಿದೆ. ಪ್ರೇಕ್ಷಕರು ಬದಲಾದಂತೆ ಇವರ ಭಾಷೆಯೂ ಬದಲಾಗುತ್ತದೆ! ಸಮಾಜದಲ್ಲಿ ಕೋಮುವಾದದ ಬೀಜ ಬಿತ್ತುವ ತಮ್ಮ ‘ವಿಚಾರ ಪರಿವಾರ’ಕ್ಕಾಗಿ ಅನಿವಾಸಿ ಭಾರತೀಯರಿಂದ ನಿಧಿ (Fund) ಸಂಗ್ರಹಿಸಲು ಆರ್‌ಎಸ್‌ಎಸ್ ಯಾವುದೇ ಮಟ್ಟಕ್ಕೂ ಹೋಗುತ್ತದೆ. ದೇಶದಲ್ಲಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುವವರು ವಿದೇಶದಲ್ಲಿ ಜಾಗತಿಕ ಏಕತೆಯ ಭಾಷೆ ಏಕೆ ಬಳಸುತ್ತಾರೆ? ಹಣ ಮತ್ತು ನಿಧಿ ಸಂಗ್ರಹದ ಜಾಡನ್ನು ಹಿಡಿಯಿರಿ, ಅಸಲಿಯತ್ತು ತಿಳಿಯುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಗರಿಕಾ ಘೋಷ್

ಟಿಎಂಸಿ ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ಅವರು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಭಾಗವತ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಅಮೆರಿಕದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಮತ್ತು ಬಹುತ್ವದ ಬಗ್ಗೆ ಮಾತನಾಡುವ RSS ನಾಯಕತ್ವವು ಭಾರತದಲ್ಲಿ RSS-BJP ಪರಿವಾರದ ರಾಜಕೀಯ ನಡೆ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ. 

ದುಷ್ಯಂತ್ ಅರೋರಾ

ಪ್ರಖ್ಯಾತ ವಕೀಲ ದುಷ್ಯಂತ್ ಅರೋರಾ ಅವರು ಇದನ್ನು “ಆರ್‌ಎಸ್‌ಎಸ್‌ನ ಹಳೆಯ ದ್ವಂದ್ವ ನೀತಿಗೆ ಅತ್ಯುತ್ತಮ ಉದಾಹರಣೆ” ಎಂದು ಕರೆದಿದ್ದಾರೆ. ಈ ವರ್ಷದ ಆರಂಭದಲ್ಲಿ ಮುಂಬೈನಲ್ಲಿ ಭಾಗವತ್ ಮಾಡಿದ ಭಾಷಣವನ್ನು ನೆನಪಿಸಿದ ಅವರು, “ಒಂದೆಡೆ ಭಾಷೆಯ ಆಧಾರದ ಮೇಲೆ ಅಕ್ರಮ ನುಸುಳುಕೋರರನ್ನು ಗುರುತಿಸಬೇಕು ಎಂದು ಹೇಳುತ್ತಾ, ಮತ್ತೊಂದೆಡೆ ಮುಸ್ಲಿಮರಿಗೂ ಉದ್ಯೋಗ ನೀಡಬೇಕು ಎಂದು ಭಾಗವತ್ ಹೇಳಿದ್ದರು. ಸಾರ್ವಜನಿಕವಾಗಿ ಸೌಹಾರ್ದತೆಯ ಮಾತನಾಡಿದರೂ, ಸಂಘಟನೆಯ ಕಾರ್ಯಕರ್ತರಿಗೆ ತಲುಪುವ ಸಂದೇಶವೇ ಬೇರೆಯಾಗಿರುತ್ತದೆ” ಎಂದು ವಿಶ್ಲೇಷಿಸಿದ್ದಾರೆ.

ಒಟ್ಟಾರೆಯಾಗಿ, ಆರ್‌ಎಸ್‌ಎಸ್ ಮುಖ್ಯಸ್ಥರ ಅಮೆರಿಕಾ ಪ್ರವಾಸ ಮತ್ತು ನ್ಯೂಯಾರ್ಕ್‌ನಲ್ಲಿ ಅವರು ನೀಡಿದ ಸೌಹಾರ್ದತೆಯ ಸಂದೇಶವು ಭಾರತದ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಭಾಗವತ್ ಅವರ ವಿದೇಶಿ ಭಾಷಣಗಳು ಮತ್ತು ಭಾರತದಲ್ಲಿನ ಆರ್‌ಎಸ್‌ಎಸ್‌ನ ರಾಜಕೀಯ ಹಾಗೂ ಸಾಮಾಜಿಕ ಪಾತ್ರದ ನಡುವಿನ ಸಂಬಂಧವನ್ನು ವಿರೋಧಿಗಳು ಪ್ರಶ್ನಿಸುತ್ತಿದ್ದರೆ, ಬೆಂಬಲಿಗರು ಈ ಭಾಷಣವನ್ನು ಭಾರತೀಯ ಪರಂಪರೆಯ ಸಹಿಷ್ಣುತೆ ಮತ್ತು ಏಕತೆಯ ಸಂದೇಶವೆಂದು ವ್ಯಾಖ್ಯಾನಿಸುತ್ತಿದ್ದಾರೆ. ಈ ಚರ್ಚೆ ಮುಂದಿನ ದಿನಗಳಲ್ಲಿ ಭಾರತೀಯ ರಾಜಕೀಯದಲ್ಲಿ ಇನ್ನಷ್ಟು ಪ್ರತಿಕ್ರಿಯೆಗಳಿಗೆ ಕಾರಣವಾಗುವ ಸಾಧ್ಯತೆಯಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...