Homeಚಳವಳಿ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳು ರೈತರಿಗೆ ಹೇಗೆ ಪ್ರಯೋಜನಕಾರಿ ಎಂಬುವುದನ್ನು ವಿವರಿಸಲು ಸಂಸದೆ ಹೇಮಾ ಮಾಲಿನಿ ಅವರನ್ನು ’ಕಂಡಿ ಕಿಸಾನ್ ಸಂಘರ್ಷ್ ಸಮಿತಿ’ಯು ಪಂಜಾಬ್‌ಗೆ ಆಹ್ವಾನಿಸಿದೆ. ಸಂಸದೆಗೆ ಪತ್ರ ಬರೆದಿರುವ ಸಮಿತಿಯು, ಅವರಿಗೆ ಒಂದು ವಾರ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಳ್ಳಲು ಮತ್ತು ವಿಮಾನಯಾನದ ಶುಲ್ಕದ ವೆಚ್ಚವನ್ನು ತಾವೇ ಭರಿಸುವುದಾಗಿ ಪ್ರಸ್ತಾಪಿಸಿದೆ.

ಸಮಿತಿಯ ಅಧ್ಯಕ್ಷರಾದ ಭೂಪಿಂದರ್ ಸಿಂಗ್ ಘುಮಾನ್ ಮತ್ತು ಉಪಾಧ್ಯಕ್ಷ ಜರ್ನೈಲ್ ಸಿಂಗ್ ಗರ್ದಿವಾಲ್ ಅವರು, “ಪಂಜಾಬಿಗಳು ಹೇಮಾ ಮಾಲಿನಿಯನ್ನು ಗೌರವದಿಂದ ನೋಡುತ್ತಿದ್ದಾರೆ. ಯಾಕೆಂದರೆ ಅವರು ರಾಜ್ಯದ ಜನರಿಂದ ಪ್ರೀತಿಸಲ್ಪಟ್ಟಿರುವ ಧರ್ಮೇಂದ್ರ ಅವರ ಪತ್ನಿ” ಎಂದು ಸಂಸದೆಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

“ಈ ಆಂದೋಲನದಲ್ಲಿ ಈಗಾಗಲೇ 100 ಜನರು ಸಾವನ್ನಪ್ಪಿದ್ದಾರೆ. ಆದರೆ ರೈತರಿಗೆ ಕಾನೂನುಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನೀವು ಹೇಳಿದ್ದು ನೋವುಂಟುಮಾಡಿದೆ. ನಮ್ಮ ಸಮಿತಿಯು ನಿಮ್ಮನ್ನು ಪಂಜಾಬ್‌ಗೆ ಆಹ್ವಾನಿಸಲು ನಿರ್ಧರಿಸಿದೆ. ಇದರಿಂದಾಗಿ ಕಾನೂನುಗಳ ಬಗ್ಗೆ ನೀವು ತಿಳಿದುಕೊಂಡಿರುವುದನ್ನು ರೈತರಿಗೆ ವಿವರಿಸಬಹುದು” ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ಸ್ಥಿತಿಗೆ ಅನುಗುಣವಾಗಿ ಪಂಚತಾರಾ ಹೋಟೆಲ್‌ನಲ್ಲಿ ನಿಮ್ಮ ವಾಸ್ತವ್ಯವನ್ನು ವ್ಯವಸ್ಥೆಗೊಳಿಸಬೇಕೆಂದು ನಾವು ನಿರ್ಧರಿಸಿದ್ದೇವೆ. ಇದಕ್ಕೆ ಹಣವನ್ನು ರೈತರು ಮತ್ತು ಕಾರ್ಮಿಕರು ಪಾವತಿಸುತ್ತಾರೆ” ಎಂದು ತಿಳಿಸಲಾಗಿದೆ.

“ಪಂಜಾಬ್‌ನ ಮಕ್ಕಳು ಸಹ ಪಂಜಾಬ್ ಅನ್ನು ನಾಶಮಾಡಲು ರೂಪಿಸಲಾದ ಕೃಷಿ ಕಾನೂನುಗಳ ಉದ್ದೇಶವನ್ನು ಅರ್ಥಮಾಡಿಕೊಂಡಿದ್ದಾರೆ. ಆದರೆ ನೀವು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದೀರಿ. ಆದ್ದರಿಂದ ನೀವು ಪಂಜಾಬ್‌ಗೆ ಬಂದು ಅದನ್ನು ಜನರಿಗೆ ವಿವರಿಸಬೇಕೆಂದು ನಾವು ವಿನಂತಿಸುತ್ತೇವೆ. ಇದರಿಂದಾಗಿ ನಮ್ಮ ಜನರು ದೆಹಲಿಯ ಗಡಿಗಳಲ್ಲಿ ಕೊರೆಯುವ ಚಳಿಯಿಂದಾಗಿ ಪ್ರಾಣ ಕಳೆದುಕೊಳ್ಳುವುದು ತಪ್ಪುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೇಮಾ ಮಾಲಿನಿ ಇತ್ತೀಚೆಗೆ, “ಇಷ್ಟೆಲ್ಲಾ ಮಾತುಕತೆಗಳು ನಡೆದ ನಂತರವೂ ರೈತರು ಸಹಮತಕ್ಕೆ ಬರುತ್ತಿಲ್ಲ. ಅವರಿಗೇನು ಬೇಕೆಂದು ಅಥವಾ ಈ ಕಾನೂನುಗಳಲ್ಲಿ ಏನು ಸಮಸ್ಯೆಯಿದೆ ಎಂಬುದು ಅವರಿಗೆ ತಿಳಿದಿಲ್ಲ. ಇದರರ್ಥ ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...