Homeಮುಖಪುಟಸುಪ್ರೀಂಕೋರ್ಟ್ ಮೇಲಿನ ತನ್ನ ಟ್ವೀಟ್‌‌ಗಳಿಗೆ ಕ್ಷಮೆ ಕೋರಲು ನಿರಾಕರಿಸಿದ ಹಾಸ್ಯ ನಟ ಕುನಾಲ್ ಕಮ್ರಾ

ಸುಪ್ರೀಂಕೋರ್ಟ್ ಮೇಲಿನ ತನ್ನ ಟ್ವೀಟ್‌‌ಗಳಿಗೆ ಕ್ಷಮೆ ಕೋರಲು ನಿರಾಕರಿಸಿದ ಹಾಸ್ಯ ನಟ ಕುನಾಲ್ ಕಮ್ರಾ

- Advertisement -
- Advertisement -

ಸ್ಟ್ಯಾಂಡ್ ಅಪ್ ಹಾಸ್ಯನಟ ಕುನಾಲ್ ಕಮ್ರಾ  ಸುಪ್ರೀಂಕೋರ್ಟ್ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ, ಇದಕ್ಕಾಗಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಲಾಗಿದೆ. ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ, “ನ್ಯಾಯಾಂಗದ ಮೇಲೆ ಸಾರ್ವಜನಿಕರ ನಂಬಿಕೆಯು ಅದರ ಕಾರ್ಯಗಳನ್ನು ಅವಲಂಬಿಸಿದೆ. ಅದರ ಬಗ್ಗೆ ಮಾಡಿರುವ ಟೀಕೆಗಳ ಮೇಲೆ ಅಲ್ಲ” ಎಂದು ಹೇಳಿದ್ದಾರೆ.

ತನ್ನ ಟ್ವೀಟ್‌ಗಳು ಹಾಗೂ ಹಾಸ್ಯಗಳು ವಿಶ್ವದ ಅತ್ಯಂತ ಶಕ್ತಿಶಾಲಿ ನ್ಯಾಯಾಲಯದ ಅಡಿಪಾಯವನ್ನು ಅಲುಗಾಡಿಸಬಹುದು ಎಂದು ಹೇಳುವ ಮೂಲಕ ತನ್ನ ಸಾಮರ್ಥ್ಯಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕುನಾಲ್ ಕಮ್ರಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗ ನಿಂದನೆ: 6 ವಾರದಲ್ಲಿ ಪ್ರತಿಕ್ರಿಯೆ ನೀಡಲು ಕುನಾಲ್ ಕಮ್ರಾಗೆ ಸುಪ್ರೀಂ ನೋಟಿಸ್

“ಪ್ರಜಾಪ್ರಭುತ್ವದಲ್ಲಿ ಯಾವುದಾದರೂ ಸಂಸ್ಥೆಯ ಮೇಲೆ ಟೀಕೆ ಮಾಡಬಾರದು ಎಂದು ನಂಬುವುದು, ಅತ್ಯಂತ ಕೆಟ್ಟ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ‌‌ ವಲಸೆ ಕಾರ್ಮಿಕರು ಅವರ ಮನೆಗೆ ಹೋಗಲು ತಾವೆ ದಾರಿ ಹುಡುಕಬೇಕು ಎಂಬಂತಿದೆ; ಇದು ಅಸಂಬದ್ದ ಮತ್ತು ಪ್ರಜಾಪ್ರಭುತ್ವ ವಿರೋಧಿ” ಎಂದು ಅವರು ಹೇಳಿದ್ದಾರೆ.

ಕುನಾಲ್ ಕಮ್ರಾ ದೇಶದಲ್ಲಿ ಅಸಹಿಷ್ಣುತೆಯ ಸಂಸ್ಕೃತಿ ಬೆಳೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಬಂಧನಕ್ಕೊಳಗಾದ ಮತ್ತೊಬ್ಬ ಹಾಸ್ಯನಟ ಮುನವಾರ್ ಫಾರೂಕಿ ಬಂಧನದ ಬಗ್ಗೆಯೂ ಅವರು ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ಅಲಾವುದ್ದೀನ್ ಮತ್ತು ಅದ್ಭುತ ದೀಪದ ’ಜಿನ್’: ಕುನಾಲ್ ಕಮ್ರಾ ಟ್ವೀಟ್‌ ವೈರಲ್!

“ಮುನ್ನಾವರ್ ಫಾರೂಕಿಯಂತಹ ಹಾಸ್ಯನಟರು ಅವರು ಮಾಡದ ಹಾಸ್ಯಕ್ಕಾಗಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳನ್ನು ದೇಶದ್ರೋಹ ಪ್ರಕರಣದಲ್ಲಿ ವಿಚಾರಣೆಗೊಳಪಡಿಸುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಆಕ್ರಮಣಕ್ಕೆ ಸಾಕ್ಷಿಯಾಗಿದ್ದೇವೆ. ಇಂತಹ ಸಮಯದಲ್ಲಿ ಈ ನ್ಯಾಯಾಲಯವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸರ್ವೋಚ್ಛ ತತ್ವವೆಂದು ಹೇಳುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುನಾಲ್ ಕಮ್ರಾಗೆ ನಿಷೇಧ ವಿರೋಧಿಸಿ, ಇಂಡಿಗೊ ವಿಮಾನದ ಒಳಗೆ ಪ್ರತಿಭಟಿಸಿದ ಜನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...