Homeಮುಖಪುಟಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

- Advertisement -
- Advertisement -

ಹಾಸ್ಯನಟ ರಾಜು ಶ್ರೀವಾಸ್ತವ ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತಕ್ಕೆ ಒಳಗಾದ ಒಂದು ತಿಂಗಳ ನಂತರ ದೆಹಲಿಯಲ್ಲಿ ಇಂದು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

“ರಾಜು ಶ್ರೀವಾಸ್ತವ ಅವರು ಬೆಳಗ್ಗೆ 10.20ಕ್ಕೆ ಮೃತಪಟ್ಟಿದ್ದಾರೆ” ಎಂದು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

“ಅವರು ಇನ್ನಿಲ್ಲ ಎಂದು ಸುಮಾರು ಅರ್ಧ ಗಂಟೆಯ ಹಿಂದೆ ಕುಟುಂಬದಿಂದ ನನಗೆ ಕರೆ ಬಂದಿತು. ಇದು ನಿಜವಾಗಿಯೂ ದುರದೃಷ್ಟಕರ ಸುದ್ದಿ. ಅವರು 40 ದಿನಗಳ ಕಾಲ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದರು” ಎಂದು ಅವರ ಸಹೋದರ ದಿಪೂ ಶ್ರೀವಾಸ್ತವ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಾಸ್ಯನಟನ ನಿಧನಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

“ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ಅವರು ಒಬ್ಬ ಪ್ರಬುದ್ಧ ಕಲಾವಿದರಲ್ಲದೆ, ಅವರು ತುಂಬಾ ಉತ್ಸಾಹಭರಿತ ವ್ಯಕ್ತಿಯಾಗಿದ್ದರು. ಅವರು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಹೆಚ್ಚು ಸಕ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ಸಿಂಗ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದು, “ರಾಜು ಶ್ರೀವಾಸ್ತವ್ ಅವರು ನಮ್ಮೊಂದಿಗಿಲ್ಲ. ಉತ್ತರ ಪ್ರದೇಶದ ಜನರ ಪರವಾಗಿ ನಾನು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಜಿಮ್‌ನಲ್ಲಿ ಕುಸಿದು ಬಿದ್ದದ್ದ ಶ್ರೀವಾಸ್ತವ ಅವರನ್ನು ಆಗಸ್ಟ್ 10ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದೇ ದಿನ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಿಸಿ ವೆಂಟಿಲೇಟರ್ ಅಳವಡಿಸಲಾಗಿತ್ತು.

ಇದನ್ನೂ ಓದಿರಿ: ಇಸ್ಲಾಂ ವಿರುದ್ಧ ಬರೆದಿದ್ದಕ್ಕೆ ಆರ್‌ಎಸ್‌ಎಸ್‌ನ ಆರ್ಗನೈಸರ್‌ ವರದಿಗಾರನಿಗೆ ಬೆದರಿಕೆ; ಪತ್ರಕರ್ತನ ಪರಿಚಯಸ್ಥನೇ ಆರೋಪಿ

ಶ್ರೀವಾಸ್ತವ ಅವರು 1980ರ ದಶಕದಿಂದಲೂ ಜನರನ್ನು ರಂಜಿಸುವಲ್ಲಿ ನಿರತರಾಗಿದ್ದರು. 2005 ರಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿ ಶೋ “ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್”ನಲ್ಲಿ ಭಾಗವಹಿಸಿದ ನಂತರ ಜನಮನ್ನಣೆ ಪಡೆದರು.

“ಮೈನೆ ಪ್ಯಾರ್ ಕಿಯಾ”, “ಬಾಜಿಗರ್”, “ಬಾಂಬೆ ಟು ಗೋವಾ” ಮತ್ತು “ಆಮ್ದಾನಿ ಅಥಾನಿ ಖರ್ಚಾ ರುಪೈಯಾ” ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಅವರು, “ಬಿಗ್ ಬಾಸ್” ಸೀಸನ್ ಮೂರರಲ್ಲಿಯೂ ಸ್ಪರ್ಧಿಯಾಗಿದ್ದರು.

ಶ್ರೀವಾಸ್ತವ ಅವರು ಕೊನೆಯದಿನಗಳವರೆಗೂ ಉತ್ತರ ಪ್ರದೇಶದ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....