Homeಮುಖಪುಟ'ಸನಾತನ' ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

‘ಸನಾತನ’ ಕುರಿತು ಟೀಕೆ; ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

- Advertisement -
- Advertisement -

ಸನಾತನ ಧರ್ಮದ ಕುರಿತಾದ ಟೀಕೆಗಳಿಗಾಗಿ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡ ಎರಡು ದಿನಗಳ ನಂತರ, ಇಂದು ಮದ್ರಾಸ್ ಹೈಕೋರ್ಟ್‌ ಅವರಿಗೆ ಸಣ್ಣ ರಿಲೀಫ್ ನೀಡಿದೆ. ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ. ‘ಸ್ಟಾಲಿನ್ ಅವರ ಹೇಳಿಕೆಗಳು ತಪ್ಪು’ ಎಂದು ಗಮನಿಸಿದ ಹೈಕೋರ್ಟ್, ಆದರೆ ಅವರು ಇನ್ನೂ ಯಾವುದೇ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿಲ್ಲ’ ಎಂದು ಹೇಳಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂದು ಅವರು ಹೇಳಿದ ಮಾತುಗಳು ಭಾರೀ ಗದ್ದಲಕ್ಕೆ ಕಾರಣವಾಗಿತ್ತು.

ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ರಾಜಾ ಅವರು ಉದಯ್ ಹೇಳಿದ್ದನ್ನು ಅನುಮೋದಿಸಿದ್ದರು.

ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ ಮತ್ತು ಹಿಂದೂ ಧರ್ಮವನ್ನು ಅಲ್ಲ’ ಎಂದು ಹೇಳಿದ್ದಾರೆ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಅವರ ಹೇಳಿಕೆಯ ಮೇಲಿನ ಗಲಾಟೆ ನಂತರ ದೇಶದ ಹಲವಾರು ರಾಜ್ಯಗಳಲ್ಲಿ ಪೊಲೀಸ್ ದೂರು ದಾಖಲಾಯಿತು. ಹಲವು ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಬೇಕೆಂದು ಡಿಎಂಕೆ ನಾಯಕ ಈಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸುಪ್ರೀಂ ಕೋರ್ಟ್ ಕಟುವಾಗಿ ಪ್ರತಿಕ್ರಿಯಿಸಿದ್ದು, ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು ಅವರನ್ನು ತರಾಟೆಗೆ ತೆಗೆದುಕೊಂಡಿತು, ಸಚಿವರಾಗಿ ಅವರು ತಮ್ಮ ಮಾತಿನ ಪರಿಣಾಮಗಳ ಬಗ್ಗೆ ತಿಳಿದಿರಬೇಕು ಎಂದು ಹೇಳಿದರು.

‘ನೀವು ಸಂವಿಧಾನದ ಆರ್ಟಿಕಲ್ 19(1)(ಎ) ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ನೀವು ಆರ್ಟಿಕಲ್ 25ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಳ್ಳುತ್ತೀರಿ. ಈಗ ನೀವು ಆರ್ಟಿಕಲ್ 32 ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಏನು ಗೊತ್ತಾ? ನೀವು ಜನಸಾಮಾನ್ಯರಲ್ಲ, ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವು ತಿಳಿದುಕೊಳ್ಳಬೇಕು’ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್ ಹಗರಣದ ಕೈ ಯಾರದೆಂದು ಚಿಕ್ಕ ಮಕ್ಕಳೂ ಹೇಳಬಲ್ಲರು: ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....