Homeಮುಖಪುಟವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ ರೂ. 91.5 ಕಡಿತ

- Advertisement -
- Advertisement -

ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1ರಿಂದ ಅನ್ವಯವಾಗುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 91.5 ರಷ್ಟು ಕಡಿಮೆ ಮಾಡಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್-2022 ಮಂಡಿಸುವ ಕೆಲವೇ ನಿಮಿಷಗಳ ಮೊದಲು ಈ ಸುದ್ದಿ ಹೊರ ಬಿದ್ದಿತ್ತು. ವಾಣಿಜ್ಯ ಉದ್ದೇಶಗಳಿಗೆ ಬಳಸುವ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ರೂ. 91.5 ರಷ್ಟು ಕಡಿಮೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇಂದಿನಿಂದ ದೆಹಲಿಯಲ್ಲಿ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ದರ ರೂ. 1,907 ಸಬ್ಸಿಡಿ ರಹಿತ (14.2 ಕೆಜಿ) ಇಂಡಿಯನ್‌ ಸಿಲಿಂಡರ್‌ಗೆ ರೂ. 899.50 ಮತ್ತು ಕೋಲ್ಕತ್ತಾದಲ್ಲಿ ರೂ. 926 ದರವಿರಲಿದೆ. ಆದರೆ 5 ಕೆಜಿ, 10 ಕೆಜಿ ಕಾಂಪೋಸಿಟ್ ತೂಕದ ಇತರ ದೇಸಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಭಾರತದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ತಿಂಗಳು ಅಡುಗೆ ಅನಿಲದ ದರ ಪರಿಷ್ಕರಣೆ ಮಾಡಲಾಗುತ್ತದೆ. 2021ರ ಡಿಸೆಂಬರ್ 1ರಂದು 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ರೂ. 100 ನಷ್ಟು ಹೆಚ್ಚಿಸಲಾಯಿತು. ಆಗ ದೆಹಲಿಯಲ್ಲಿ ಸಿಲಿಂಡರ್‌ ಒಂದರ ಬೆಲೆ ರೂ. 2,101 ತಲುಪಿತ್ತು. 2012-13 ರ ನಂತರ 2ನೇ ಬಾರಿಗೆ ಏರಿಕೆ ಕಂಡ ಅತಿ ಹೆಚ್ಚಿನ ದರ ಇದಾಗಿದ್ದು, ರೂ. 2,200 ನಷ್ಟು ಏರಿಕೆಯಾಗಿತ್ತು. 2022ರ ಜನವರಿ 1ರ ವೇಳೆಗೆ ಪ್ರತಿ ಸಿಲಿಂಡರ್‌ನಲ್ಲಿ ರೂ. 102.50 ರಷ್ಟು ಕಡಿತಗೊಂಡಿತ್ತು. ಇದೀಗ ಬಜೆಟ್‌ ಮಂಡನೆಗೆ ಮುನ್ನ ಕಡಿತ ಮಾಡಲಾಗಿದೆ.

ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರವು ಬೆಲೆ ಇಳಿಕೆ ಮಾಡಿದೆ ಎನ್ನಲಾಗುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ಸಿಲಿಂಡರ್‌ ಬೆಲೆ ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಅಕ್ಟೋಬರ್‌ ತಿಂಗಳಿನಿಂದಲೂ ಸಬ್ಸಿಡಿ ರಹಿತ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನವೆಂಬರ್‌ನಿಂದ ಪೆಟ್ರೋಲ್ ಮತ್ತು ಡೀಸೆಲ್ ದರವೂ ಸ್ಥಿರವಾಗಿದೆ.

ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಫೆಬ್ರವರಿ 10ರಿಂದ ಮಾರ್ಚ್ 7ರವರೆಗೆ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿರಿ: ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dear finance minister nice to hear LPG cylinders rate INR 91.50 reduced. But After election of Uttar Pradesh how many times increases so don’t make us pool we are very sorry to say please look into Middle class people day by day what ever saved they spending and becoming poor than before so don’t pool middle class of Indian citizens. Please take care about poor people health care why can’t make medical free with one health card like Aadhar card.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...