Homeರಾಷ್ಟ್ರೀಯವಾಣಿಜ್ಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ ₹102 ಹೆಚ್ಚಳ

ವಾಣಿಜ್ಯ ಎಲ್‌ಪಿಜಿ ಬೆಲೆ ಪ್ರತಿ ಸಿಲಿಂಡರ್‌ಗೆ ₹102 ಹೆಚ್ಚಳ

- Advertisement -
- Advertisement -

ಭಾನುವಾರ ಬೆಳಿಗ್ಗೆ ತೈಲ ಮಾರುಕಟ್ಟೆ ಕಂಪನಿಗಳು (OMC) ತಕ್ಷಣವೇ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಸುಮಾರು ₹102 ರಷ್ಟು ಹೆಚ್ಚಿಸಿವೆ. ಇದರೊಂದಿಗೆ ಬೆಂಗಳೂರಿನಲ್ಲಿ 19 ಕೆ.ಜಿ. ಸಿಲಿಂಡರ್ ಬೆಲೆ ರೂ.2,328.5 ರಿಂದ ರೂ.2,430.5 ಕ್ಕೆ ಏರಿಕೆಯಾಗಿದೆ. 47.5 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 6,073.5 ರೂ. ತಲುಪಿದೆ.

ನಿನ್ನೆಯ ಬೆಲೆ ಹೆಚ್ಚಳದಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌‌ ಬೆಲೆ ಪರಿಷ್ಕರಣೆಯಾಗದೆ ಹಾಗೆ ಉಳಿದ ಹಿನ್ನೆಲೆಯಲ್ಲಿ ಜನರು ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರದ ಬೆಲೆ ಹೆಚ್ಚಳದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಬೆಲೆ 2355.50 ರೂಗೆ ತಲುಪಿದ್ದು, ಈ ಹಿಂದೆ ಅದರ ದರ ಪ್ರತಿ ಸಿಲಿಂಡರ್‌ಗೆ 2253 ರೂ. ಇತ್ತು.

ಇದನ್ನೂ ಓದಿ: ವಾಣಿಜ್ಯ LPG ಸಿಲಿಂಡರ್‌ ಬೆಲೆ ಏಕಾಏಕಿ 250 ರೂ. ಏರಿಕೆ

ಮುಂಬೈನಲ್ಲಿ ವಾಣಿಜ್ಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 2205 ರೂ. ನಿಂದ 2,307 ರೂ. ಗೆ ಹೆಚ್ಚಿಸಲಾಗಿದೆ. ಕೋಲ್ಕತ್ತಾದಲ್ಲಿ 2,351 ರೂ. ನಿಂದ 2,455 ರೂ.ಗೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿ 2,406 ರೂ. ನಿಂದ 2,508 ರೂ.ಗೆ ಹೆಚ್ಚಿಸಲಾಗಿದೆ.

ಏತನ್ಮಧ್ಯೆ, ದೆಹಲಿಯಲ್ಲಿ ಈಗ 5 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 655 ರೂ.ಗೆ ತಲುಪಿದೆ.

ಉಕ್ರೇನ್ ಬಿಕ್ಕಟ್ಟು ಮತ್ತು ಪೂರೈಕೆ ಆತಂಕದ ನಡುವೆ ಜಾಗತಿಕ ಇಂಧನ ಬೆಲೆಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬೆಲೆಗಳಲ್ಲಿ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ, ಮಾಜಿ ಸಂಸದ ನಿಲೇಶ್ ರಾಣೆ ವಿರುದ್ಧ FIR

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸಲಾಗುತ್ತಿದೆ. ಮಾರ್ಚ್ 22 ರಂದು ಸಬ್ಸಿಡಿ ಹೊಂದಿರುವ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ 50 ರೂ. ಏರಿಕೆ ಮಾಡಲಾಗಿತ್ತು. ಜೊತೆಗೆ ಎಪ್ರಿಲ್ 1 ರಂದು 19 ಕೆಜಿ ಯ ವಾಣಿಜ್ಯ LPG ಸಿಲಿಂಡರ್‌ ಬೆಲೆ ಏಕಾಏಕಿ 250 ರೂ. ಏರಿಕೆ ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....