Homeಕರ್ನಾಟಕಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

ಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

- Advertisement -
- Advertisement -

ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದ್ದು, ಇದಕ್ಕೆ ದೊಡ್ಡ ಚರ್ಚೆ ಯಾಕೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದು, ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ, “ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಮಿಷನ್‌ಗಾಗಿ ಈಶ್ವರಪ್ಪ ಪೀಡಿಸುತ್ತಿದ್ದಾರೆಂದು ಹಿಂದುತ್ವ ಮುಖಂಡ ದೂರು; ಕಾಂಗ್ರೆಸ್ ನಾಯಕರ ವಾಗ್ದಾಳಿ

“ರಾಜ್ಯ ಸರ್ಕಾರದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರಕ್ಕೆ ಬಂದಿರುವುದೇ ಕಮಿಷನ್ ವಿಚಾರ. ಈಗ ಹೊರಗೆ ಬರುತ್ತಿರುವ ವಿಷಯಗಳ ಬಗ್ಗೆ ಅಚ್ಚರಿ ಏನೂ ಇಲ್ಲ. ಇದು ಒಂದು ರೀತಿಯ ದಿನನಿತ್ಯದ ಕೆಲಸ ಆಗಿಹೋಗಿದೆ” ಎಂದು ಅವರು ಹೇಳೀದ್ದಾರೆ.

“ಹಿಂದೆ ಸಣ್ಣಪುಟ್ಟ ಮಟ್ಟದಲ್ಲಿ ಇಂಥದ್ದೆಲ್ಲ ನಡೆದುಕೊಂಡು ಹೋಗುತ್ತಿತ್ತು. ಈಗ ಸ್ವಲ್ಪ ದೊಡ್ಡ ಪ್ರಮಾಣಕ್ಕೆ ಏರಿಕೆ ಆಗಿದೆ. ಏಕೆಂದರೆ, ಬಜೆಟ್ ಗಾತ್ರ ಹೆಚ್ಚಾದಂತೆ ಕಮಿಷನ್ ಗಾತ್ರ ಕೂಡ ಹೆಚ್ಚಾಗುತ್ತಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

“ಗುತ್ತಿಗೆ ಕೆಲಸ ಮಾಡುವವರು ಇಂಥ ಕೆಲಸಗಳಿಗೆ ಪ್ರೋತ್ಸಾಹ ಕೊಡದನ್ನು ನಿಲ್ಲಸಬೇಕು. ಹಣ, ಕಮಿಷನ್ ಕೊಡುವುದಿಲ್ಲ ಎಂದು ಕಠಿಣ ನಿರ್ಧಾರ ಮಾಡಬೇಕು. ಗುತ್ತಿಗೆದಾರರು ಮೊದಲು ಬಿಗಿಯಾಗಿ ಇದ್ದರೆ ಈ ಸಮಸ್ಯೆಗಳು ಏಕೆ ಬರುತ್ತವೆ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

“ನಾಳೆಯಿಂದ ಸದನದಲ್ಲಿ ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಎರಡು ದಿನ ಏನು ಚರ್ಚೆ ಮಾಡುತ್ತಾರೋ ನೋಡೋಣ. ಚುನಾವಣೆಯಲ್ಲಿ ಬದಲಾವಣೆ ತರುವ ಬಗ್ಗೆ ಏನು ಚರ್ಚೆ ಮಾಡುತ್ತಾರೆ. ಕಮಿಷನ್ ವಿಚಾರ ಎನ್ನುವುದು ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ದೊಡ್ಡ ಚರ್ಚೆ ಏಕೆ? ನಮ್ಮ ಜನರು ಕೂಡ ಈ ಬಗ್ಗೆ ತಲೆ ಕೆಡಿಸಿಕೊಲ್ಲುವುದಿಲ್ಲ. ಜನರಿಗೆಲ್ಲ ಇದು ಗೊತ್ತಿರುವ ವಿಚಾರವೇ” ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.

“ಈ ಬಗ್ಗೆ ಚರ್ಚೆ ಮಾಡಲು ನನಗೆ ಆಸಕ್ತಿ ಇಲ್ಲ. ಜನರು ಈ ಬಗ್ಗೆ ಮೊದಲ ತಿಳಿದುಕೊಳ್ಳಬೇಕು. ಈಗಲಾದರೂ ಗುತ್ತಿಗೆದಾರರು ಎಲ್ಲರೂ ಸೇರಿ ಕಮಿಷನ್ ಕೊಡಬಾರದು ಎನ್ನುವ ನಿರ್ಧಾರ ಮಾಡಿ. ಲಂಚ ಕೇಳಿದರೆ ಕೆಲಸವನ್ನೆ ಮಾಡಬೇಡಿ, ನಿಲ್ಲಸಿ. ಅದರಿಂದ ಏನೂ ಆಗಲ್ಲ. ಗುತ್ತಿಗೆದಾರರ ಸಂಘದ ಅಧ್ಯಕ್ಷರು ಯಾರು ಇದ್ದೀರಿ, ಅವರು ಈ ಕೆಲಸ ಮಾಡಬೇಕು” ಎಂದು ಅವರು ಕಿವಿಮಾತು ಹೇಳಿದ್ದಾರೆ.

“40% ಪರ್ಸಂಟೇಜ್ ಅಂತ ಎಲ್ಲರೂ ಹೇಳುತ್ತಾರೆ. ಆದರೆ, ನೀವು ಮೊದಲು ನಾವು ಯಾವುದೇ ಕೆಲಸ ಮಾಡಲ್ಲ, ಕಮಿಷನ್ ಕೊಡಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಿ. ಆಗ ಎಲ್ಲವೂ ಸರಿ ಹೋಗುತ್ತದೆ. ನೀವೇ ಪ್ರೋತ್ಸಾಹ ನೀಡಿದರೆ ಇದು ಹೀಗೆ ಇರುತ್ತದೆ. ಅದು ಬಿಟ್ಟು ಬರೀ ಚರ್ಚೆ ಮಾಡಿದರೆ ಪ್ರಯೋಜನ ಇಲ್ಲ” ಎಂದು ಅವರು ಗುತ್ತಿಗೆದಾರರಿಗೆ ಹೇಳಿದ್ದಾರೆ.

ಇದನ್ನೂ ಓದಿ: ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...