Homeಕರ್ನಾಟಕಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಕುರಿತು ಇಲಾಖಾ ತನಿಖೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಉತ್ತರ ಉಪ ವಿಭಾಗದ ಎಸಿಪಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಯಾಗಿದೆ.

ಮಹಿಳೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ ರಾಜ್ಯ ಮಹಿಳಾ ಆಯೋಗ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಮಿಷನರ್‌ಗೆ ಸೂಚಿಸಿತ್ತು ಎಂದು ವರದಿ ಉಲ್ಲೇಖಿಸಿದೆ.

“ನನ್ನ ಗಂಡನ ವಿರುದ್ಧ ಸುಳ್ಳು ಪ್ರಕರಣವೊಂದು ದಾಖಲಾಗಿತ್ತು. ಆ ಸಂಬಂಧ ಪೊಲೀಸರು ಅವರನ್ನು ಬಂಧಿಸಿದ್ದರು. ಗಂಡನನ್ನು ಬಿಡುಗಡೆ ಮಾಡಬೇಕಾದರೆ ತನ್ನ ಜೊತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಇನ್‌ಸ್ಪೆಕ್ಟರ್ ಸಂದೇಶ್ ಒತ್ತಾಯಿಸಿದ್ದಾರೆ. 25 ಲಕ್ಷ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಒಪ್ಪದಿದ್ದರೆ ನನ್ನ ಗಂಡನ ವಿರುದ್ದ ರೌಡಿ ಶೀಟ್ ತೆರೆಯುವುದಾಗಿ ಬೆದರಿಕೆ ಒಡ್ಡಿದ್ದಾರೆ” ಎಂದು ಮಹಿಳೆಯೊಬ್ಬರು ಮಾಧ್ಯಮಗಳ ಮುಂದೆ ಆರೋಪಿಸಿದ್ದಾರೆ.

“ಇನ್‌ಸ್ಪೆಕ್ಟರ್ ಸಂದೇಶ್ ನನಗೆ ಮಾತ್ರವಲ್ಲದೆ ಇತರ ಹಲವು ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಾರೆ. ನಾನು ಪೊಲೀಸ್ ಠಾಣೆಗೆ ಹೋದಾಗ ವಾಹನ ನಿಲುಗಡೆ ಜಾಗದಲ್ಲಿ ನನಗೆ ಬೆದರಿಕೆ ಹಾಕಿದ್ದಾರೆ. ಅವರು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಲಂಚ ಕೊಟ್ಟು ಪೊಲೀಸ್ ಹುದ್ದೆ ಗಿಟ್ಟಿಸಿಕೊಂಡಿದ್ದಾಗಿ ಹೇಳಿದ್ದಾರೆ. ನೀನು ಯಾರಿಗೆ ದೂರು ಕೊಟ್ಟರೂ ನನಗೆ ಏನೂ ಆಗುವುದಿಲ್ಲ ಎಂದು ಬೆದರಿಸಿದ್ದಾರೆ” ಎಂದು ಮಹಿಳೆ ಟಿವಿ ವಾಹಿನಿಗಳಲ್ಲಿ ಆರೋಪ ಮಾಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್ ಮೊಬೈಲ್‌ನಲ್ಲಿ ಹಾಡು ಹಾಕಿ ಮಹಿಯೊಬ್ಬರೊಂದಿಗೆ ಡ್ಯಾನ್ಸ್ ಮಾಡುವಂತೆ ಒತ್ತಾಯಿಸುವ, ಅವರ ಕೈಯನ್ನು ಬಲವಂತವಾಗಿ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಮಾಧ್ಯಮಗಳು ಪ್ರಕಟಿಸಿರುವ ಮತ್ತೊಂದು ಸಿಸಿಟಿವಿ ವಿಡಿಯೋದಲ್ಲಿ ಸಂದೇಶ್ ಅವರು ರಾತ್ರಿ ಹೊತ್ತು ಮನೆಯೊಂದರ ಗೇಟ್ ಹಾರಿ ಒಳ ಹೋಗುವ ದೃಶ್ಯವಿದೆ. ಇವೆಲ್ಲವೂ ಸಂತ್ರಸ್ತ ಮಹಿಳೆಯರು ಸಂಗ್ರಹಿಸಿದ ಸಾಕ್ಷ್ಯಗಳು ಎಂದು ಮಹಿಳೆ ತಿಳಿಸಿದ್ದಾರೆ.

“ನನಗೆ ಇನ್‌ಸ್ಪೆಕ್ಟರ್ ಸಂದೇಶ್ ಕಿರುಕುಳ ನೀಡುತ್ತಿದ್ದ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರಿಗೆ ಪತ್ರ ಬರೆದು ಹೇಳಿಕೊಂಡಿದ್ದೇನೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪೊಲೀಸ್ ಆಯುಕ್ತರಿಗೆ ಬರೆದ ಪತ್ರಕ್ಕೆ ವಿಷಯವನ್ನು ವಿಲೇ ಮಾಡಲಾಗಿದೆ ಎಂದು ಹಿಂಬರಹ ಕೊಟ್ಟಿದ್ದಾರೆ. ಆದರೆ, ಒಮ್ಮೆಯೂ ನನ್ನನ್ನು ವಿಚಾರಣೆ ಮಾಡಿಲ್ಲ” ಎಂದು ಮಹಿಳೆ ಹೇಳಿಕೊಂಡಿದ್ದಾರೆ.

ಇನ್‌ಸ್ಪೆಕ್ಟರ್ ಸಂದೇಶ್‌ಗೆ ಸಂಬಂಧಪಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬಳಿಕ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆತನ ವಿರುದ್ದ ಕಠಿಣ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಆಗ್ರಹ ಕೇಳಿ ಬಂದಿದೆ.

ಮಹಿಳೆ ದೂರು ನೀಡಿಲ್ಲ : ಕಮಿಷನರ್

“ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ಲೈಂಗಿಕ ಕಿರುಕುಳ ನೀಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಮಹಿಳೆ ನನಗೆ ಯಾವುದೇ ದೂರು ನೀಡಿಲ್ಲ. ಯಾವುದೇ ಸಂತ್ರಸ್ತ ವ್ಯಕ್ತಿ ಬಂದು ದೂರು ನೀಡಿದರೂ ಆ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಇನ್‌ಸ್ಪೆಕ್ಟರ್ ವಿರುದ್ದ ಮಾಡಲಾದ ಆರೋಪಗಳ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ನಗರ ಉತ್ತರ ಉಪವಿಭಾಗ ಎಸಿಪಿಯವರಿಗೆ ಸೂಚಿಸಿದ್ದೇನೆ. ಎಸಿಪಿಯಿಂದ ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...