Homeಮುಖಪುಟಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಶ್ರದ್ಧಾಂಜಲಿ: ಬದ್ಧತೆಯ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ನಿಧನ

ಭಾರತದಲ್ಲಿ ವೃತ್ತಿಪರ ಇತಿಹಾಸ ಸಂಶೋಧನೆಗೆ ಅಪಾರ ಕೊಡುಗೆ ನೀಡಿದ ಝಾ, ತಮ್ಮ ಜೀವಿತದುದ್ದಕ್ಕೂ ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದರು.

- Advertisement -
- Advertisement -

ಡಿ.ಎನ್ ಝಾ ಎಂದೇ ಖ್ಯಾತರಾಗಿದ್ದ ಇತಿಹಾಸಕಾರ ದ್ವಿಜೇಂದ್ರ ನಾರಾಯಣ್ ಝಾ ಗುರುವಾರ ತಮ್ಮ 81 ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಅವರು ತಮ್ಮ ಜೀವಮಾನವಿಡೀ ಭಾರತೀಯ ಸಮಾಜದಲ್ಲಿನ ಅವೈಚಾರಿಕತೆ ಮತ್ತು ಅವಿವೇಕದ ಪ್ರಭಾವವನ್ನು ಹೊರಹಾಕಲು ಯತ್ನಿಸಿದರು. ಎಷ್ಟರಮಟ್ಟಿಗೆಂದರೆ, ಅವರ ಪುಸ್ತಕಗಳು, ಅಸಂಖ್ಯಾತ ಸಂಶೋಧನಾ ಪ್ರಬಂಧಗಳು ಮತ್ತು ರಾಜಕೀಯ ವಿವಾದಗಳಲ್ಲಿ ವಿದ್ವತ್ಪೂರ್ಣ ಹಸ್ತಕ್ಷೇಪಗಳು ಶೈಕ್ಷಣಿಕ ಸಮುದಾಯದಿಂದ ಅಪಾರ ಪ್ರಶಂಸೆ ಗಳಿಸಿದವು. ಹಾಗೆಯೇ ಬಲಪಂಥೀಯ ಶಕ್ತಿಗಳ ಕೆಂಗಣ್ಣಿಗೆ ಗುರಿಯಾದವು.

ಅಯೋಧ್ಯೆಯಲ್ಲಿನ ವಿವಾದಿತ ಭೂಮಿಯನ್ನು ಹಿಂದೂ ಪಕ್ಷಗಳಿಗೆ ಹಸ್ತಾಂತರಿಸಿದ 2019 ರ ಸುಪ್ರೀಂ ಕೋರ್ಟ್ ತೀರ್ಪಿನ ಮುಂಚೆಯೇ ದಿ ವೈರ್‌ಗೆ ತಮ್ಮ ಕೊನೆಯ ಸಂದರ್ಶನವೊಂದನ್ನು ನೀಡಿದ್ದರು. ಅದರಲ್ಲಿ, ಅವರು ದೇವಾಲಯವನ್ನು ನೆಲಸಮಗೊಳಿಸಿದ ನಂತರ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂಬ ಅವರ ಪ್ರತಿಪಾದನೆಯನ್ನು ಪುನರುಚ್ಛರಿಸಿದ್ದರು. ಈ ಸಿದ್ಧಾಂತವನ್ನು ಸಂಘ ಪರಿವಾರವು ತನ್ನದೇ ಆದ ರಾಜಕೀಯ ಹಿತಾಸಕ್ತಿಗಳಿಗಾಗಿ ನಿರ್ಮಿಸಿದೆ ಎಂದು ಆರೋಪಿಸಿದ್ದರು.

ಅವರ ಪ್ರಸಿದ್ಧ ಕೃತಿ, ‘ರಾಮ್‌ಜನ್ಮಭೂಮಿ-ಬಾಬರಿ ಮಸೀದಿ: ಎ ಹಿಸ್ಟೋರಿಯನ್ಸ್ ರಿಪೋರ್ಟ್ ಆಫ್ ದಿ ನೇಷನ್’ನಲ್ಲಿ ಅಯೋಧ್ಯೆಯಲ್ಲಿರುವ ವಿವಾದಿತ ಸ್ಥಳದ ಬಗ್ಗೆ ಅವರು ಮೊದಲು ತಮ್ಮ ತೀರ್ಮಾನಗಳನ್ನು ಪ್ರಕಟಿಸಿದರು. ಪ್ರಮುಖ ಇತಿಹಾಸಕಾರರಾದ ಸೂರಜ್ ಭಾನ್, ಅಥರ್ ಅಲಿ ಮತ್ತು ಆರ್.ಎಸ್. ಶರ್ಮಾ ಜೊತೆ ಸೇರಿಕೊಂಡು ಸಂಶೋದನೆ ಮಾಡಿದರು. ಮೇ 1991 ರಲ್ಲಿ, (ಮಸೀದಿಯನ್ನು ಹಿಂದೂ ಬಲಪಂಥೀಯ ಕಾರ್ಯಕರ್ತರು ನೆಲಸಮಗೊಳಿಸುವ ಒಂದು ವರ್ಷದ ಮೊದಲು) ಲಭ್ಯವಿರುವ ಎಲ್ಲಾ ಪಠ್ಯ ಮತ್ತು ಪುರಾತತ್ವ ಪುರಾವೆಗಳನ್ನು ಪರಿಶೀಲಿಸಿದ ನಂತರ ಈ ಸ್ವತಂತ್ರ ಇತಿಹಾಸಕಾರರ ತಂಡವು ವರದಿಯನ್ನು ಬರೆದಿದೆ.

ಅಯೋಧ್ಯೆಯಲ್ಲಿ ಮೊದಲು ಉತ್ಖನನ ಮಾಡಿದ ಎಎಸ್‌ಐನ (ಭಾರತೀಯ ಪುರಾತತ್ವ ಇಲಾಖೆ) ಮಾಜಿ ಮಹಾನಿರ್ದೇಶಕ ಬಿ.ಬಿ ಲಾಲ್ 1990 ರಲ್ಲಿ ಮಸೀದಿಯ ಕೆಳಗಿರುವ ಸಂಭವನೀಯ ದೇವಾಲಯದ ಬಗ್ಗೆ ತನ್ನ ಮೊದಲಿನ ನಿಲುವನ್ನು ಬದಲಾಯಿಸಿದ್ದು ಮಹಾನ್‌ದ್ರೋಹ ಎಂದು ಝಾ ಟೀಕಿಸಿದ್ದರು. ಆ ಮೂಲಕ ಲಾಲ್ ಸಂಘ ಪರಿವಾರಕ್ಕೆ ಸಹಾಯ ಮಾಡಿದರು ಎಂದು ಝಾ ಆಕ್ರೋಶ ವ್ಯಕ್ತಪಡಿಸುತ್ತಲೇ ಬಂದಿದ್ದರು.

ಹಿಂದೂ ಬಲಪಂಥಿಯತೆಯು ದೇಶವನ್ನು ಅನೇಕ ಯುಗಗಳಷ್ಟು ಹಿಂದಕ್ಕೆ ಒಯ್ಯುತ್ತಿದೆ ಎನ್ನುತ್ತಿದ್ದ ಝಾ ಅವರ ಜೀವನವು, ಹಿಂದೂ ಬಲಪಂಥೀಯ ಶಕ್ತಿಗಳ ವಿರುದ್ಧದ ಹೋರಾಟಕ್ಕೆ ಮಾತ್ರ ಸಿಮೀತವಾಗಿರಲಿಲ್ಲ. ಸ್ವತಂತ್ರ ಭಾರತದಲ್ಲಿ ಇತಿಹಾಸ ಬರೆಯುವ ಕಾರ್ಯದಲ್ಲಿ ತಮ್ಮನ್ನು ತಾವು ವಹಿಸಿಕೊಂಡ ಮೊದಲ ಕೆಲವು ತಲೆಮಾರುಗಳ ಭಾರತೀಯ ಇತಿಹಾಸಕಾರರಲ್ಲಿ ಅವರು ಒಬ್ಬರಾಗಿದ್ದರು. ಅನೇಕ ಭಾರತೀಯ ಇತಿಹಾಸಕಾರರು ವಿಭಿನ್ನ ರಾಜಮನೆತನಗಳು, ಯುದ್ಧಗಳ ಸುತ್ತಲಷ್ಟೇ ತಮ್ಮ ಸಂಶೋಧನೆ ಮಾಡುತ್ತಿದ್ದಾಗ ಝಾ ತರಹದ ಹಲವರು ಆ ಇತಿಹಾಸವನ್ನು ಸಮಾಜೋ-ಆರ್ಥಿಕ ದೃಷ್ಟಿಕೋನದಲ್ಲಿ ಕಟ್ಟಿಕೊಟ್ಟರು.

ಭಾರತದಲ್ಲಿ ಇತಿಹಾಸ ಬರವಣಿಗೆಯಲ್ಲಿ ಸಾಮಾಜಿಕ-ಆರ್ಥಿಕ ವಿಶ್ಲೇಷಣೆಗಳಲ್ಲಿ ತೊಡಗಿದವರಲ್ಲಿ ಮೊದಲಿಗರು ಎನಿಸಿರುವ ಆರ್.ಎಸ್. ಶರ್ಮಾ ಅವರ ಮಾರ್ಗದರ್ಶನದಲ್ಲಿ ಝಾ ತರಬೇತಿ ಪಡೆದಿದ್ದರು.

ಝಾ ಅವರ ‘ದಿ ಮಿಥ್ ಆಫ್ ದಿ ಹೋಲಿ ಕೌ’ ಅವರ ಅತ್ಯಂತ ಉಲ್ಲೇಖಿತ ಕೃತಿಗಳಲ್ಲಿ ಒಂದಾಗಿದೆ. ಇದರಲ್ಲಿ ಪ್ರಾಚೀನ ಭಾರತದ ಆಹಾರ ಪದ್ಧತಿಯಲ್ಲಿ ಬ್ರಾಹ್ಮಣರು ಸೇರಿ ಹಿಂದೂಗಳು ಗೋಮಾಂಸ ತಿನ್ನುವ ಸಂಸ್ಕೃತಿಯಿತ್ತು ಎಂಬುದನ್ನು ನಿರ್ಣಾಯಕವಾಗಿ ಸಾಬೀತುಪಡಿಸಿದರು. ಇದನ್ನು ಕನ್ನಡದಲ್ಲಿ ಗೌರಿ ಲಂಕೇಶ್ ಗೋವು ಮಿಥ್ಯೆ ಎಂಬ ಹೆಸರಿನಲ್ಲಿ ಪ್ರಕಟಿಸಿದ್ದರು.


ಇದನ್ನೂ ಓದಿ: ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...