Homeಕರ್ನಾಟಕಒಳಮೀಸಲಾತಿ ಜಾರಿಗೆ ಬದ್ಧ : ಸಿಎಂ ಸಿದ್ದರಾಮಯ್ಯ

ಒಳಮೀಸಲಾತಿ ಜಾರಿಗೆ ಬದ್ಧ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಸಚಿವರಾದ ಕೆ.ಹೆಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ, ಮಾಜಿ ಸಚಿವ ಹೆಚ್‌. ಆಂಜನೇಯ, ಕಾಂಗ್ರೆಸ್ ಮುಖಂಡ ಎಲ್‌. ಹನುಮಂತಯ್ಯ ಮತ್ತು ಇತರರನ್ನು ಒಳಗೊಂಡ ನಿಯೋಗದ ಜೊತೆ ಬುಧವಾರ ಚರ್ಚೆ ನಡೆಸಿ ಸಿಎಂ ಮಾತನಾಡಿದರು.

ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಹೆಚ್‌.ಡಿ ರೇವಣ್ಣ ಜಾಮೀನು ರದ್ದುಗೊಳಿಸಲು ಹೈಕೋರ್ಟ್ ನಕಾರ : ಎಸ್‌ಐಟಿ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...