Homeಕರ್ನಾಟಕಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

ಒಳ ಮೀಸಲಾತಿಗೆ ಸಮಿತಿ: ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರ ಎಂದ ಸಿದ್ದರಾಮಯ್ಯ

- Advertisement -
- Advertisement -

‘ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಆಗಿದ್ದು ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘ಸಮಯ ಕೊಲ್ಲುವ’ ತಂತ್ರ ಅಷ್ಟೇ ಆಗಿದೆ’ ಎಂದು ಆರೋಪಿಸಿದ್ದಾರೆ.

‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು’ ಎಂದು ಸಿಎಂ ಆಗ್ರಹಿಸಿದ್ದಾರೆ.

‘ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ’ ಎಂದಿದ್ದಾರೆ.

‘ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡಬೇಕೆಂದು ಆಂಧ್ರಪ್ರದೇಶದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಬೇಡಿಕೆಯ ಪರಿಶೀಲನೆಗೆ ನೇಮಿಸಲಾದ ರಾಷ್ಟ್ರೀಯ ಆಯೋಗ ಶಿಫಾರಸು ಮಾಡಿದೆ ಎಂದು 2023ರ ಜುಲೈ 23ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿಯವರು ರಾಜ್ಯಸಭೆಗೆ ತಿಳಿಸಿದ್ದರು. ಇದು ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹಮೂರ್ತಿ ಅವರ ಪ್ರಶ್ನೆಗೆ ನೀಡಿದ್ದ ಉತ್ತರವಾಗಿತ್ತು. ಈಗ ಇದೇ ಸಚಿವ ಎ.ನಾರಾಯಣ ಸ್ವಾಮಿಯವರು ಒಳಮೀಸಲಾತಿಗೆ ಸಂವಿಧಾನದ ತಿದ್ದುಪಡಿಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ಎಂದಿನಂತೆ ಎರಡೆರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯ ಈಡೇರಿಕೆಯ ಹೊಣೆ ತಮ್ಮ ಹೆಗಲ ಮೇಲೆ ಬಿದ್ದ ನಂತರ ತಳಮಳಕ್ಕೀಡಾಗಿರುವ ಬಿಜೆಪಿ ನಾಯಕರು ತಲೆಗೊಬ್ಬರಂತೆ ತಲೆಬುಡವಿಲ್ಲದ ಹೇಳಿಕೆಗಳನ್ನು ನೀಡಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಿದ್ದಾರೆ; ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

‘ಪರಿಶಿಷ್ಟರ ಒಳಮೀಸಲಾತಿ ನೀಡಲು ಸಂವಿಧಾನದ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಅಗತ್ಯ ಇಲ್ಲ ಎಂದು ಮಾಜಿ ಸಚಿವ ಗೋವಿಂದಪ್ಪ ಕಾರಜೋಳ ಹೇಳುತ್ತಿದ್ದಾರೆ. ಸದಾಶಿವ ಆಯೋಗದ ವರದಿಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳುತ್ತಿದ್ದಾರೆ. ಈ ರೀತಿಯ ನಿರಾಧಾರ ಮಾತುಗಳಿಂದ ತಮ್ಮ ಅಜ್ಞಾನವನ್ನು ತಾವೇ ಪ್ರದರ್ಶಿಸುತ್ತಿದ್ದೇವೆ ಎಂಬ ಅರಿವು ಇವರಿಗೆ ಇದ್ದ ಹಾಗಿಲ್ಲ’ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಕಿಡಿಕಾರಿದ್ದಾರೆ.

‘ಮಾಜಿ ಸಚಿವ ಗೋವಿಂದ ಕಾರಜೋಳರಂತಹ ಹಿರಿಯ ದಲಿತ ನಾಯಕರು ಮತ್ತು ತಮ್ಮನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರ ಅನುಯಾಯಿ ಎಂದು ಕರೆದುಕೊಳ್ಳುವವರು ಕೂಡಾ ಸಂವಿಧಾನವನ್ನು ತಿರುಚಲು ಹೊರಟಿರುವುದು ವಿಷಾದನೀಯ. ಇಂತಹ ತಪ್ಪು ಮಾಹಿತಿಗಳನ್ನು ಮಾಜಿ ಸಚಿವ ಕಾರಜೋಳ ಹಂಚಿಕೊಳ್ಳುತ್ತಿರುವುದು ಖಂಡಿತ ಅವರ ಅಜ್ಞಾನದಿಂದ ಅಲ್ಲ, ದಲಿತ ವಿರೋಧಿಯಾಗಿರುವ ಆರ್.ಎಸ್.ಎಸ್ ಹೇಳಿಕೊಟ್ಟಿರುವ ಗಿಣಿಪಾಠವನ್ನು ಅವರು ಒಪ್ಪಿಸುತ್ತಿದ್ದಾರೆ ಅಷ್ಟೆ’ ಎಂದಿದ್ದಾರೆ.

‘ಎ.ಜೆ.ಸದಾಶಿವ ಆಯೋಗದ ವರದಿಯನ್ನು ನಮ್ಮ ಸರ್ಕಾರ ಜಾರಿಗೆ ತರಬೇಕಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇವರು ಮೂರುವರೆ ವರ್ಷಗಳ ಕಾಲ ತಾವು ರಾಜ್ಯದ ಮುಖ್ಯಮಂತ್ರಿಯಾಗಿರುವುದನ್ನು ಮರೆತೇ ಬಿಟ್ಟಿದ್ದಾರೆ. ಆದರೆ ರಾಜ್ಯದ ಜನತೆ ನೆನಪಲ್ಲಿ ಇಟ್ಟುಕೊಂಡಿದ್ದಾರೆ. ಈಗ ನಮ್ಮನ್ನು ಒತ್ತಾಯಿಸುವವರು ತಾವು ಅಧಿಕಾರದಲ್ಲಿದ್ದಾಗ ಯಾಕೆ ಸದಾಶಿವ ಆಯೋಗದ ವರದಿಯನ್ನು ಒಪ್ಪಿ ಜಾರಿಗೆ ತರಲಿಲ್ಲ? ಇಷ್ಟು ಮಾತ್ರವಲ್ಲ ಇದೇ ವಿಷಯದ ಅಧ್ಯಯನಕ್ಕೆ ಇನ್ನೊಂದು ಸಮಿತಿ ಮಾಡಿ ಸದಾಶಿವ ಆಯೋಗದ ವರದಿಯನ್ನು ತಿರಸ್ಕರಿಸಿರುವುದು ಕೂಡಾ ತಮ್ಮದೇ ನೇತೃತ್ವದ ಸರ್ಕಾರ ಎನ್ನುವುದನ್ನು ಬೊಮ್ಮಾಯಿಯವರೇ ಮರೆತಂತಿದೆ’ ಎಂದು ಹೇಳಿದ್ದಾರೆ.

‘ರಾಜ್ಯದ ಬಿಜೆಪಿ ನಾಯಕರು ನಮ್ಮ ವಿರುದ್ದ ರಾಜಕೀಯ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ವೃಥಾ ಕಾಲಹರಣ ಮಾಡದೆ ಸಂವಿಧಾನದ 341ನೇ ಪರಿಚ್ಚೇದಕ್ಕೆ ತಿದ್ದುಪಡಿ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಬೇಕು’ ಎಂದು ಬಿಜೆಪಿ ನಾಯಕರಿಗೆ ಸಿಎಂ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ರಾಜ್ಯ ದೇಶಕ್ಕೆ ₹100 ಕೊಟ್ರೆ ₹12 ಮಾತ್ರ ಮರಳಿ ಬರುತ್ತಿದೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...