Homeಮುಖಪುಟಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ - ಕಾಂಗ್ರೆಸ್ ವಿರೋಧ

ಸಾಮಾನ್ಯ ಬಳಕೆಯ 8 ಔಷಧಿಗಳ ಬೆಲೆ 50% ಹೆಚ್ಚಿಸಲು ಕೇಂದ್ರ ನಿರ್ಧಾರ – ಕಾಂಗ್ರೆಸ್ ವಿರೋಧ

- Advertisement -
- Advertisement -

ಎಂಟು ಅಗತ್ಯ ಔಷಧಿಗಳ ಬೆಲೆಯನ್ನು 50% ರಷ್ಟು ಹೆಚ್ಚಿಸುವ ಕೇಂದ್ರದ ಬಿಜೆಪಿಯ ಮೋದಿ ಸರ್ಕಾರದ ನಿರ್ಧಾರದ ಬಗ್ಗೆ ವಿಪಕ್ಷ ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದ್ದು, ಬೆಲೆ ಏರಿಕೆಯಿಂದ ರೋಗಿಗಳು ಮತ್ತು ಜನರ ಆರೋಗ್ಯ ರಕ್ಷಣೆಯ ಮೇಲೆ ಬೀರುವ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿ ರಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದೆ. ಸಾಮಾನ್ಯ ಬಳಕೆಯ

ಸಾಮಾನ್ಯವಾಗಿ ಬಳಸುವ ಎಂಟು ಔಷಧಿಗಳ ಸೀಲಿಂಗ್ ಬೆಲೆಯನ್ನು 50%ದಷ್ಟು ಹೆಚ್ಚಿಸುವ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರದ (ಎನ್‌ಪಿಪಿಎ) ಇತ್ತೀಚಿನ ನಿರ್ಧಾರದ ಬಗ್ಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಮೋದಿಗೆ ಪತ್ರ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಟ್ಯಾಗೋರ್ ಅವರು ಈ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಈ ಬೆಲೆ ಹೆಚ್ಚಳಕ್ಕೆ ಸರ್ಕಾರವು ‘ಅಸಾಧಾರಣ ಸಂದರ್ಭಗಳು’ ಮತ್ತು ‘ಸಾರ್ವಜನಿಕ ಹಿತಾಸಕ್ತಿ’ ಕಾರಣಗಳನ್ನು ಉಲ್ಲೇಖಿಸಿದೆ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಆದರೆ ಅಂತಹ ಮಹತ್ವದ ನಿರ್ಧಾರದ ಹಿಂದಿನ ತಾರ್ಕಿಕತೆಯನ್ನು ಸ್ಪಷ್ಟಪಡಿಸುವುದು ನಿರ್ಣಾಯಕ ಎಂದು ನಾನು ನಂಬುತ್ತೇನೆ” ಎಂದು ಪತ್ರದಲ್ಲಿ ಕೇಳಿದ್ದಾರೆ. ಸಾಮಾನ್ಯ ಬಳಕೆಯ

“ಈ ಬೆಲೆ ಏರಿಕೆಯು ಲಕ್ಷಾಂತರ ನಾಗರಿಕರಿಗೆ ಅಗತ್ಯವಾದ ಆಸ್ತಮಾ, ಕ್ಷಯ, ಬೈಪೋಲಾರ್ ಡಿಸಾರ್ಡರ್ ಮತ್ತು ಗ್ಲುಕೋಮಾದಂತಹ ರೋಗಗಳ ಪ್ರಮುಖ ಔಷಧಿಗಳ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶದ ಅನೇಕ ರೋಗಿಗಳು ಮತ್ತು ಅವರ ಕುಟುಂಬಗಳು ಅಗತ್ಯ ಚಿಕಿತ್ಸೆಗಳನ್ನು ಪಡೆಯಲು ಈಗಾಗಲೆ ಹಣಕಾಸಿನ ಸಮಸ್ಯೆ ಎದುರಿಸುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಔಷಧದ ಬೆಲೆಗಳಲ್ಲಿನ ಈ ಹಠಾತ್ ಹೆಚ್ಚಳವು ಇಂತಹ ವ್ಯಕ್ತಿಗಳ ಮೇಲೆ ಹೆಚ್ಚುವರಿ ಹೊರೆಯನ್ನು ಉಂಟುಮಾಡಬಹುದು ಮತ್ತು ಅವರ ಆರೋಗ್ಯದ ಮೇಲೆ ಅವರು ರಾಜಿ ಮಾಡುವ ಸಂಭವವಿರುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಈ ಬೆಲೆ ಏರಿಕೆಗೆ ಅಗತ್ಯವಾದ ಅಸಾಮಾನ್ಯ ಸಂದರ್ಭಗಳ ಬಗ್ಗೆ ಹೆಚ್ಚು ವಿವರವಾದ ವಿವರಣೆಯನ್ನು ನೀಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಇದಲ್ಲದೆ, ರೋಗಿಗಳು ಮತ್ತು ಆರೋಗ್ಯ ಕ್ಷೇತ್ರದ ಮೇಲೆ ಈ ಬೆಲೆ ಹೆಚ್ಚಳದ ನೈಜ ಪರಿಣಾಮವನ್ನು ನಿರ್ಣಯಿಸಲು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ಸ್ಥಾಪಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇಂತಹ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕಾಗಿದ್ದು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಸಂಪೂರ್ಣ ಪರಿಶೀಲನೆಯು ಒಳ್ಳೆಯ ನೀತಿಗಳು ತರುವಂತೆ ಮಾಡುತ್ತದೆ. ಹೀಗಾದರೆ ಅಗತ್ಯ ಔಷಧಗಳು ಕೈಗೆಟುಕುವ ದರರಲ್ಲಿ ಎಲ್ಲರಿಗೂ ಪಡೆಯುವಂತೆ ಇರುತ್ತದೆ” ಎಂದು ಸಂಸದ ಟ್ಯಾಗೋರ್ ಹೇಳಿದ್ದಾರೆ.

ಅಕ್ಟೋಬರ್ 14 ರಂದು ಕೇಂದ್ರ ಸರ್ಕಾರವು ಎಂಟು ಔಷಧಿಗಳ 11 ನಿಗದಿತ ಸೂತ್ರೀಕರಣಗಳನ್ನು ಅವುಗಳ ಪ್ರಸ್ತುತ ಸೀಲಿಂಗ್ ಬೆಲೆಯ ಶೇಕಡಾ 50 ರಷ್ಟು ಹೆಚ್ಚಿಸಲು ಅನುಮೋದಿಸಿದೆ ಎಂದು ಘೋಷಿಸಿತ್ತು. ಔಷಧೀಯ ಪದಾರ್ಥಗಳ ನಿರಂತರ ಹೆಚ್ಚಳವಾದ ವೆಚ್ಚ ಸೇರಿದಂತೆ ವಿವಿಧ ಕಾರಣಗಳನ್ನು ಉಲ್ಲೇಖಿಸಿ ಬೆಲೆಗಳ ಏರಿಕೆಗಾಗಿ ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಮಾಡಿತ್ತು.

ಇದನ್ನೂ ಓದಿ: ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ವಕ್ಫ್‌ ಭೂಮಿ ವಿವಾದ | ರೈತರಿಗೆ ನೀಡಿದ ನೋಟಿಸ್‌ ತಕ್ಷಣವೆ ವಾಪಸ್‌ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...