Homeರಂಜನೆಕ್ರೀಡೆಕಾಮನ್‌ವೆಲ್ತ್ ಕ್ರೀಡಾಕೂಟ- 2022 : 24 ವರ್ಷಗಳ ಬಳಿಕ ಕ್ರಿಕೆಟ್‌ ಸೇರ್ಪಡೆ

ಕಾಮನ್‌ವೆಲ್ತ್ ಕ್ರೀಡಾಕೂಟ- 2022 : 24 ವರ್ಷಗಳ ಬಳಿಕ ಕ್ರಿಕೆಟ್‌ ಸೇರ್ಪಡೆ

- Advertisement -
- Advertisement -

ಕಾಮನ್‌ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ 24 ವರ್ಷಗಳ ಬಳಿಕ ಕ್ರಿಕೆಟ್‌ ತಂಡಗಳು ಭಾಗವಹಿಸುತ್ತಿವೆ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ 8 ತಂಡಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ದೃಢಪಡಿಸಿದೆ. ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡ ಜುಲೈ 29 ರಂದು ಆರಂಭಿಕ ಪಂದ್ಯದಲ್ಲಿ ಸೆಣಸಲಿವೆ.

ಈ ವರ್ಷದ ಕ್ರಿಕೆಟ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 8 ಮಹಿಳಾ ತಂಡಗಳೂ ಸ್ಪರ್ಧಿಸಲಿದ್ದು, ಶ್ರೀಲಂಕಾ, ಆಸ್ಟ್ರೇಲಿಯಾ, ಬಾರ್ಬಡೋಸ್, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ಪಟ್ಟಿಯಲ್ಲಿವೆ.

1998 ರಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ ಕ್ರಿಕೆಟ್‌ ತಂಡಗಳು ಭಾಗವಹಿಸಿ, ಚಿನ್ನದ ಪದಕಕ್ಕೆ ಸೆಣಸಾಡಿದ್ದವು. ಅಂತಿಮವಾಗಿ, ಶಾನ್ ಪೊಲಾಕ್ ನೇತೃತ್ವದ ದಕ್ಷಿಣ ಆಫ್ರಿಕಾ ತಂಡ ಫೈನಲ್‌ನಲ್ಲಿ ಸ್ಟೀವ್ ವಾ ನೇತೃತ್ವದ ಆಸ್ಟ್ರೇಲಿಯಾ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ ಚಿನ್ನ ಗೆದ್ದಿತ್ತು.

ಇದನ್ನೂ ಓದಿ: ಯುಪಿ-2022: ಅಖಿಲೇಶ್‌ ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಕಾಂಗ್ರೆಸ್!

ಇತ್ತೀಚೆಗೆ ಕೌಲಾಲಂಪುರದಲ್ಲಿ ಐಸಿಸಿ ನಡೆಸಿದ ಕಾಮನ್‌ವೆಲ್ತ್ ಗೇಮ್ಸ್ ಕ್ವಾಲಿಫೈಯರ್ 2022 ಸುತ್ತಿನಲ್ಲಿ ಬಾಂಗ್ಲಾದೇಶ, ಕೀನ್ಯಾ, ಮಲೇಷ್ಯಾ, ಸ್ಕಾಟ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ತೀವ್ರ ಪೈಪೋಟಿ ನಡೆಸಿದ್ದವು. ಆದರೆ ಪ್ರವೇಶಕ್ಕೆ ಉಳಿದಿದ್ದ ಕೊನೆಯ ಸ್ಥಾನ ಪಡೆದುಕೊಳ್ಳುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ.

ಐಸಿಸಿ ಬಿಡುಗಡೆ ಮಾಡಿದ ವರದಿಯಂತೆ 2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಲೀಗ್-ಕಮ್-ನಾಕೌಟ್ ಅಫೇರ್ ಆಗಿರುತ್ತದೆ. ಪದಕದ ಪಂದ್ಯಗಳು ಆಗಸ್ಟ್ 7 ರಂದು ನಡೆಯಲಿವೆ. ಜುಲೈ 28ರಿಂದ ಆಗಸ್ಟ್ 8 ರವರೆಗೆ ನಡೆಯಲಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 72 ದೇಶಗಳ 4,500 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.


ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...