Homeಕರ್ನಾಟಕಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

ಕೋಮುದ್ವೇಷ: ಕಾಳಿ ಸ್ವಾಮೀಜಿ ಮಾಡಿದ ಅವಾಂತರಗಳಿವು!

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಕಾಳಿ ಸ್ವಾಮೀಜಿ (ಋಷಿ ಕುಮಾರ ಸ್ವಾಮೀಜಿ) ಅವರಿಗೆ ಮಸಿ ಬಳಿದಿರುವುದು ಸುದ್ದಿಯಾಗಿದೆ.

ಶಿವರಾಮೇಗೌಡ ಬಣದ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರದ ಗಂಗಮ್ಮ ದೇವಾಲಯಕ್ಕೆ ಋಷಿಕುಮಾರ ಸ್ವಾಮಿ ಬಂದಿದ್ದ ವೇಳೆ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಋಷಿಕುಮಾರ ಸ್ವಾಮೀಜಿಗೆ ಧಿಕ್ಕಾರ ಕೂಗಿ ಮುಖಕ್ಕೆ ಕಪ್ಪುಮಸಿ ಬಳಿದಿದ್ದಾರೆ.

ಘಟನೆ ಕುರಿತು ಕಾಳಿ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, “ನಾನು ಯಾರನ್ನು ಅವಮಾನಿಸಿಲ್ಲ. ದಾಖಲೆಗಳಿದ್ದರೆ ಕೋರ್ಟ್‌ನಲ್ಲಿ ದಾವೆ ಹೂಡಲಿ. ಇದರಿಂದ ನಾನೇನು ವಿಚಲಿತನಾಗಿಲ್ಲ” ಎನ್ನುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಳಿ ಸ್ವಾಮೀಜಿಯವರಿಗೆ ಮಸಿ ಬಳಿದಿರುವ ಸಂಗತಿಯ ಸುತ್ತ ಪರ ವಿರೋಧ ವ್ಯಕ್ತವಾಗಬಹುದು. ಆದರೆ ಕಾಳಿ ಸ್ವಾಮೀಜಿಯವರು ಸಮಾಜದಲ್ಲಿ ಬಿತ್ತುತ್ತಿರುವ ವಿಷ ಬೀಜಗಳನ್ನು ಯಾರೂ ಅಲ್ಲಗಳೆಯಲಾರರು. ಕಳೆದ ಕೆಲವು ತಿಂಗಳುಗಳಿಂದ ರಾಜ್ಯದಲ್ಲಿ ಘಟಿಸುತ್ತಿರುವ ಕೋಮು ಕೇಂದ್ರಿತ ಪ್ರಕರಣಗಳಲ್ಲಿ ಕಾಳಿ ಸ್ವಾಮೀಜಿಯ ಉಪಸ್ಥಿತಿ ಇದ್ದೇ ಇರುತ್ತದೆ. ಸಂವಿಧಾನ ಬಾಹಿರವಾಗಿ, ಒಂದು ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ, ಸಮಾಜದಲ್ಲಿ ದ್ವೇಷ ಬೆಳೆಸುತ್ತಾ ಕಾಳಿ ಸ್ವಾಮೀಜಿ ವೈಯಕ್ತಿಯ ಪ್ರಚಾರವನ್ನು ಪಡೆಯುತ್ತಿದ್ದಾರೆ. “ಎಲ್ಲ ಜನವರ್ಗವನ್ನು ಪ್ರೀತಿ, ಗೌರವದಿಂದ ಕಾಣುವವರು ನಿಜವಾದ ಸ್ವಾಮೀಜಿ” ಎನ್ನುತ್ತಾರೆ ಗದುಗಿನ ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ. ಆದರೆ ಋಷಿಕುಮಾರ ಸ್ವಾಮೀಜಿಯಂಥವರು ಈ ಎಲ್ಲೆಗಳನ್ನು ಮೀರಿದಂತೆ ಕಾಣುತ್ತಾರೆ. ಹೀಗಾಗಿ ವಿಪರೀತ ಟ್ರೋಲ್‌ಗೂ ಒಳಗಾಗಿದ್ದಾರೆ. ಆದರೆ ಈ ಟ್ರೋಲ್‌ಗಳನ್ನೇ ಭೂಷಣವೆಂಬಂತೆ ಕಾಳಿ ಸ್ವಾಮೀಜಿ ಭಾವಿಸಿದ್ದಾರೇನೋ! ಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ ಎಂಬ ಮಾತಿನಂತೆ ಕಾಳಿ ಸ್ವಾಮೀಜಿಯವರ ಕೋಮುದ್ವೇಷವಿಲ್ಲದೆ ಟ್ರೋಲ್‌ಗಳಾಗುತ್ತಿಲ್ಲ.

ಇದನ್ನೂ ಓದಿರಿ: ಉಡುಪಿ: ಪಿಕ್ನಿಕ್‌ಗೆ ಬಂದಿದ್ದ ಮುಸ್ಲಿಂ ಕುಟುಂಬದ ಮೇಲೆ ಶ್ರೀರಾಮಸೇನೆ ವಾಗ್ದಾಳಿ

ಮಸೀದಿ ಒಡೆಯಲು ಪ್ರಚೋದನೆ

ಶ್ರೀರಂಗಪಟ್ಟಣದಲ್ಲಿನ ಮಸೀದಿಯು ದೇವಸ್ಥಾನದ ಮೇಲೆ ನಿರ್ಮಾಣವಾಗಿದೆ. ಬಾಬ್ರಿ ಮಸೀದಿಯನ್ನು ಕೆಡವಿ ರಾಮ ಮಂದಿರ ನಿರ್ಮಾಣ ಮಾಡಿದಂತೆ ಶ್ರೀರಂಗಪಟ್ಟಣ ಮಸೀದಿಯನ್ನು ಕೆಡವಿ ಹನುಮ ಮಂದಿರವನ್ನು ಕಟ್ಟಬೇಕು ಎಂದಿದ್ದರು ಕಾಳಿ ಸ್ವಾಮೀಜಿ. ಬಳಿಕ ಅವರನ್ನು ಬಂಧಿಸಿ ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಆದರೆ ಮಸೀದಿಯನ್ನು ಕೆಡವಬೇಕೆಂಬ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮತ್ತೆ ಸಮರ್ಥಿಸಿಕೊಂಡಿದ್ದರು.

“ಶ್ರೀರಂಗಪಟ್ಟಣ ಎಂದರೆ ಗತ ವೈಭವವನ್ನು ಸಾರುವ ನೆಲವೀಡು. ಗಂಗರು, ಹೊಯ್ಸಳರು, ಮೈಸೂರು ಅರಸರು, ಹೈದರಾಲಿ, ಟಿಪ್ಪು ಸುಲ್ತಾನ್ ಆಳಿದ ನೆಲ. ಎಲ್ಲಕ್ಕಿಂತ ಹೆಚ್ಚಾಗಿ ಶ್ರೀರಂಗಪಟ್ಟಣ ಎಂದರೆ ಹಿಂದೂ ಮುಸ್ಲಿಮರ ಭಾವೈಕ್ಯ ತಾಣ. ಸಾಮರಸ್ಯವೇ ಇಲ್ಲಿನ ಶಕ್ತಿ. ಇತ್ತೀಚೆಗೆ ಕೆಲವು ಮತಾಂಧ ಶಕ್ತಿಗಳು ಈ ಸಾಮರಸ್ಯವನ್ನು ಕದಡುವ ಕೆಲಸವನ್ನು ಮಾಡುತ್ತಿವೆ” ಎಂದು ತಮ್ಮ ವರದಿಯಲ್ಲಿ ಅಭಿಪ್ರಾಯತಾಳುತ್ತಾರೆ ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯುರೊ ಮುಖ್ಯಸ್ಥರಾದ ಕೆ.ನರಸಿಂಹಮೂರ್ತಿ. “ಸ್ಥಳೀಯವಾಗಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಹೊರಗಿನಿಂದ ಬಂದವರೇ ವಿವಾದವನ್ನು ಸೃಷ್ಟಿಸುತ್ತಿದ್ದಾರೆ” ಎಂಬ ಸಂಗತಿಯನ್ನು ತಮ್ಮ ವರದಿಯಲ್ಲಿ ಪ್ರಸ್ತಾಪಿಸುತ್ತಾರೆ.

ಆಜಾನ್‌ ವಿರುದ್ಧ ವಿವಾದ ಸೃಷ್ಟಿ 

ದಿನಕ್ಕೆ ಐದು ಬಾರಿ ಪ್ರಾರ್ಥನೆಯನ್ನು ಸಲ್ಲಿಸುವುದು ಇಸ್ಲಾಂನಲ್ಲಿ ನಡೆದು ಬಂದಿರುವ ಸಂಪ್ರದಾಯ. ಆಜಾನ್‌ ಅಥವಾ ಅದಾನ್‌ ಎಂಬುದು ಪ್ರಾರ್ಥನೆಗೆ ನೀಡುವ ಕರೆಯೇ ಹೊರತು, ಪ್ರಾರ್ಥನೆಯಲ್ಲ. ಆದರೆ ಆಜಾನ್‌ಗೆ ವಿರುದ್ಧವಾಗಿ ಹನುಮಾನ್ ಚಾಲೀಸ್ ಹಾಡುತ್ತೇವೆ ಎಂಬ ಚರ್ಚೆಯನ್ನು ಮುನ್ನೆಲೆಗೆ ತರಲಾಯಿತು. ಕ್ಯಾಮೆರಾ ಮುಂದೆ ಧಾರ್ಮಿಕತೆಯನ್ನು ಪ್ರದರ್ಶಿಸುವ ಕೆಲಸವೂ ಆಗುತ್ತಿದೆ.

ಆಜಾನ್‌ನ ಹಿನ್ನೆಲೆ ಉದ್ದೇಶ ತಿಳಿಯದ ಧರ್ಮಗುರು ಕಾಳಿ ಸ್ವಾಮೀಜಿ, ಮೈಕ್‌ ಹಿಡಿದು ರಾಮಜಪ ಮಾಡಿ ವಿಡಿಯೊ ಹರಿಬಿಟ್ಟಿದ್ದರು. ಬೆಂಗಳೂರಿನ ಚುಂಚನ ಘಟ್ಟದಲ್ಲಿರುವ ರಾಮಾಂಜನೇಯ ದೇವಾಲಯಲ್ಲಿ ಧ್ವನಿ ವರ್ಧಕ ಅಳವಡಿಸಿ ಬೆಳಗ್ಗೆ 5.33ಕ್ಕೆ 3 ಬಾರಿ ರಾಮ ಜಪ ಮಾಡಿದ್ದರು. ಇದು ಕೂಡ ಭಾರೀ ಟ್ರೋಲ್‌ಗೆ ಒಳಗಾಗಿತ್ತು.

ಹಲಾಲ್‌ ಕಟ್‌ v/s ಜಟ್ಕಾ ಕಟ್‌

ಯುಗಾದಿ ವರ್‍ಸತೊಡಕಿನ ಆಚೀಚೆ ಹಲಾಲ್‌ ಕಟ್‌ಗೆ ವಿರುದ್ಧವಾಗಿ ಜಟ್ಕಾ ಕಟ್‌ ಎಂಬ ವಿವಾದ ಸೃಷ್ಟಿಯಾಯಿತು. ಮುಸ್ಲಿಮರ ಬಳಿ ಮಾಂಸ ಖರೀದಿಸಬೇಡಿ ಎಂದು ಹಬ್ಬಿಸಲಾಯಿತು. ಹಿಂದೂ ಸಮಾಜದ ಜನರೇ ಸರಿಯಾಗಿ ಝಾಡಿಸಿದ ಮೇಲೆ ವಿವಾದ ಬದಿಗೆ ಸರಿಯಿತು.

ಹಲಾಲ್‌ ಕಟ್‌ ಎಂದರೇನು? ಜಟ್ಕಾ ಕಟ್ ಎಂದರೇನು? ಎಂದು ಪ್ರಜ್ಞಾವಂತರು ವಿವರಿಸಿದರು. ತಿನ್ನುವ ಅನ್ನದಲ್ಲೆಲ್ಲ ಮತಾಂಧತೆಯನ್ನು ಹುಡುಕುವನ್ನು ಜನರು ಟೀಕಿಸಿದರು.

ಇದನ್ನೂ ಓದಿರಿ: ಉಗಾದಿ ವರ್‍ಸತೊಡಕು: ದಲಿತರಿಗೆ ತಮ್ಮಿಷ್ಟದ ‘ಜಟ್ಕಾ ಕಟ್‌ ಮಾಂಸ’ ಸಿಗುವುದೇ?

ವಿವಾದ ಮುಂಚೂಣಿಯಲ್ಲಿದ್ದ ಸಂದರ್ಭದಲ್ಲಿ ಗಾಯಕ್ಕೆ ಉಪ್ಪು ಸವರುವ ಕೆಲಸ ಮಾಡಿದ ಕಾಳಿ ಸ್ವಾಮೀಜಿ, “ಹಿಂದೂ ಧರ್ಮದ ಯುವಕರು ಜಟ್ಕಾ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು ಬಲಿಷ್ಠಗೊಳಿಸಬೇಕು” ಎಂದರು.

ಹಿಂದೂವೀ ಜಟ್ಕಾ ಮಾರ್ಟ್‌ ಎಂಬ ಮಳಿಗೆಯಲ್ಲಿ ದೇವರ ಫೋಟೋಕ್ಕೆ ಪೂಜೆ ಸಲ್ಲಿಸಿ ನಂತರ ಕರಿ ಕೋಳಿಯೊಂದನ್ನು ಜಟ್ಕಾ ಕಟ್ ಮಾಡಲು ಕಾಳಿ ಸ್ವಾಮೀಜಿ ಮುಂದಾದರು. ಈ ವಿಡಿಯೊ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಸ್ವಾಮೀಜಿಯರವ ವರ್ತನೆಯನ್ನು ಕೆಲವು ಸ್ವಾಮೀಜಿಗಳು ಟೀಕಿಸಿದ್ದರು. ಜನರು ವ್ಯಂಗ್ಯವಾಡಿದರು.

ವಿರೋಧ ಪಕ್ಷದ ನಾಯಕರ ಕುರಿತು ಅನವಶ್ಯಕವಾಗಿ ಹೇಳಿಕೆ ನೀಡುವಲ್ಲಿಯೂ ಕಾಳಿ ಸ್ವಾಮೀಜಿ ಮುಂದಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದಾರೆ. ಜನರ ನಡುವೆ ದ್ವೇಷ ಹರಡಿಸುತ್ತಿರುವ ಇಂಥವರ ವಿರುದ್ಧ, ರಾಷ್ಟ್ರಕವಿ ಕುವೆಂಪು ಅವರು ಸಾರಿದಂತೆ ‘ಸರ್ವಜನಾಂಗದ ಶಾಂತಿಯ ತೋಟ’ವಾದ ಕರ್ನಾಟಕದ ಸ್ವಾಸ್ಥ್ಯವನ್ನು ಹಾಳು ಮಾಡುವವರ ವಿರುದ್ಧ ಕ್ರಮ ಜರುಗಿಸದೆ ಮೌನವಾಗಿರುವ ಸರ್ಕಾರ ಕುರಿತೂ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...