Homeಕರ್ನಾಟಕಕೋಮು ದ್ವೇಷದ ಭಾಷಣ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲು

ಕೋಮು ದ್ವೇಷದ ಭಾಷಣ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಕೋಮು ದ್ವೇಷದ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಮಂಗಳೂರು ಬಳಿಯ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ’ ಆದಿ ಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ಸಮಾರೋಪ ಸಭೆಯಲ್ಲಿ ಕೋಮುದ್ವೇಷದ ಭಾಷಣ ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ಭಾನುವಾರ ದೂರು ನೀಡಿದ್ದರು. ಈ ದೂರು ಆಧರಿಸಿ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೂಲಿಬೆಲೆ ಹೇಳಿದ್ದೇನು?

“ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್‌ ವಾಪ್ಸಿ ಮಾಡೋ ಬಗ್ಗೆ ಮಾತನಾಡಿ. ಎಲ್ಲಿಯವರೆಗೆ ಲವ್ ಜಿಹಾದ್‌, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ” ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

“ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ. ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್‌ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನು ಮೊದಲು ವಾಪಸ್ ತರೋಣ” ಎಂದು ದ್ವೇಷ ಭಾಷಣ ಮಾಡಿದ್ದರು.

ಕೇಂದ್ರ ಸರ್ಕಾರ ನಮಗೆ ಕೊಟ್ಟಿರುವುದು ಅನುದಾನವಲ್ಲ, ಸಾಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...