Homeಮುಖಪುಟ‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ ಸುಮಾರು ಮೂರು ತಿಂಗಳ ನಂತರ, ಗೋವಾದ ಮಾಜಿ ಶಾಸಕ ಲಾವೂ ಮಮಲ್ದರ್‌ ಸೇರಿದಂತೆ ಅದರ ಐದು ಪ್ರಾಥಮಿಕ ಸದಸ್ಯರು ಶುಕ್ರವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷವು ಕೋಮುವಾದಿಯಾಗಿದ್ದು, ಓಟಿಗಾಗಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರ ನಡುವೆ ವಿಭಜನೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಗೋವಾದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಲಿದೆ.

“ನಾವು ಗೋವಾ ಮತ್ತು ಗೋವನ್ನರಿಗೆ ಉಜ್ವಲ ದಿನಗಳನ್ನು ತರುತ್ತೇವೆ ಎಂಬ ಭರವಸೆಯೊಂದಿಗೆ ಟಿಎಂಸಿಗೆ ಸೇರಿದ್ದೇವೆ. ಆದರೆ ಟಿಎಂಸಿ ಗೋವಾ ಮತ್ತು ಗೋವನ್ನರನ್ನು ಅರ್ಥಮಾಡಿಕೊಂಡಿಲ್ಲ ಎಂಬುವುದು ದುರದೃಷ್ಟಕರ” ಎಂದು ರಾಜೀನಾಮೆ ನೀಡಿದ ನಾಯಕರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಕೊಲ್ಕತ್ತಾ ಮುನ್ಸಿಪಲ್‌‌ನಲ್ಲಿ ಟಿಎಂಸಿ ಅಭೂತಪೂರ್ವ ಜಯ; BJP ಹೀನಾಯ ಸೋಲು

“ಹಿಂದೂ ಮತಗಳನ್ನು ಮಹಾರಾಷ್ಟ್ರವಾದಿ ಗೋಮಾಂತಕ್‌ ಪಾರ್ಟಿ ಕಡೆಗೆ ಮತ್ತು ಕ್ಯಾಥೋಲಿಕ್ ಮತಗಳನ್ನು ಟಿಎಂಸಿ ಕಡೆಗೆ ಧ್ರುವೀಕರಿಸುತ್ತಿದ್ದು, ಈ ಕ್ರಮವು ಸಂಪೂರ್ಣವಾಗಿ ಕೋಮುವಾದಿತನದ್ದಾಗಿದೆ.

ಗೋವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಪಕ್ಷದೊಂದಿಗೆ ನಾವು ಮುಂದುವರಿಯಲು ಬಯಸುವುದಿಲ್ಲ. ಗೋವಾವನ್ನು ವಿಭಜಿಸಲು ನಾವು ನಾವು ಬಿಡುವುದಿಲ್ಲ, ರಾಜ್ಯದ ಜಾತ್ಯತೀತತೆಯನ್ನು ನಾವು ರಕ್ಷಿಸುತ್ತೇವೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಲಾವೂ ಮಮಲ್ದರ್‌ ಅವರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಸೇರಿದ್ದರು. ಫೆಬ್ರವರಿ 2022 ರಲ್ಲಿ ನಡೆಯಲಿರುವ ಗೋವಾ ಅಸೆಂಬ್ಲಿ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್‌ಗೆ ಸೇರಿದ್ದ ರಾಜ್ಯದ ಮೊದಲ ಕೆಲವು ಸ್ಥಳೀಯ ನಾಯಕರಲ್ಲಿ ಅವರು ಒಬ್ಬರಾಗಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ಈ ಹಿಂದೆ, ಗೋವಾ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ತೃಣಮೂಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ಪೋಂಡಾ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಲಾವೂ ಮಮಲ್ದರ್‌‌ ಆರೋಪಿಸಿದ್ದಾರೆ.

“ಟಿಎಂಸಿ ಕೋಮುವಾದಿ ಪಕ್ಷವಲ್ಲ ಎಂದು ನಾನು ಭಾವಿಸಿದ್ದೆ. ಆದರೆ ಡಿಸೆಂಬರ್ 5 ರಂದು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ (ಎಂಜಿಪಿ) ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಮೈತ್ರಿ ಘೋಷಿಸಲಾಯಿತು. ಹೀಗಾಗಿ ಟಿಎಂಸಿ ಕೂಡ ಕೋಮುವಾದಿ ಎಂದು ನಾನು ಕಂಡುಕೊಂಡೆ” ಎಂದು ಎಂಜಿಪಿಯನ್ನು ತೊರೆದು ತೃಣಮೂಲ ಪಕ್ಷ ಸೇರಿದ್ದ ಅವರು ಹೇಳಿದ್ದಾರೆ.

ಮುಂಬರುವ ಚುನಾವಣೆಗಳಿಗಾಗಿ ತೃಣಮೂಲ ಕಾಂಗ್ರೆಸ್ ತೀವ್ರವಾಗಿ ಪ್ರಚಾರ ನಡೆಸುತ್ತಿದೆ. ಪಕ್ಷವು ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಅವರನ್ನು ಟಿಎಂಸಿ ಸೇರ್ಪಡೆಗೊಳಿಸಿದೆ. ಈ ತಿಂಗಳ ಆರಂಭದಲ್ಲಿ, ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗೋವಾಕ್ಕೆ ಭೇಟಿ ನೀಡಿ ತಮ್ಮ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದರು. 2022 ರ ಆರಂಭದಲ್ಲಿ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಗೋವಾದಲ್ಲಿ ಟಿಎಂಸಿಯೊಂದಿಗೆ ಮೈತ್ರಿ ಇಲ್ಲ: ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...