Homeಮುಖಪುಟಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಸಿ.ಎಂ ಜಿಲ್ಲೆ ಶಿವಮೊಗ್ಗದಲ್ಲಿ ಕೋಮು ರಾಜಕಾರಣ ಭುಗಿಲೆದ್ದಿತಾ?

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜಕೀಯ ಕರ್ಮಕ್ಷೇತ್ರ ಶಿವಮೊಗ್ಗದಲ್ಲಿ ಶಾಂತಿ-ಸೌಹಾರ್ದತೆ ಕದಡುವ ಕೋಮು ರಾಜಕಾರಣ ಗರಿಬಿಚ್ಚಿದೆ. ಗುರುವಾರ ಬೆಳಗ್ಗೆ (ಡಿ.3) ಬಜರಂಗದಳದ ಕಾರ್ಯಕರ್ತ ನಾಗೇಶ್ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಪ್ರಕರಣ ಈಗ ನಗರದಲ್ಲಿ ಕೋಮುಗಲಭೆಯ ಆತಂಕವನ್ನು ಸೃಷ್ಟಿಸಿದೆ. ಈ ಹಲ್ಲೆಯನ್ನು ಪ್ರತಿಭಟಿಸುವ ನೆಪದಲ್ಲಿ ಬಜರಂಗದಳ ಕಾರ್ಯಕರ್ತರು ಸಿನಿಮಾ ರಸ್ತೆಯಲ್ಲಿನ ಬಟ್ಟೆ ಮಾರ್ಕೆಟ್ ಗೆ ನುಗ್ಗಿ ಒಂದು ಕೋಮಿನ ಜನರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಪ್ರತಿಕಾರವೆಂಬಂತೆ ಬೈಕ್ ನಲ್ಲಿ ಬಂದ ಮೂರ‍್ನಾಲ್ಕು ಜನ ಮುಸ್ಲಿಂ ಹುಡುಗರ ಗುಂಪೊಂದು ಮಾರಾಕಾಸ್ತ್ರಗಳಿಂದ ರವಿವರ್ಮ ಬೀದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋಗಳ ಗ್ಲಾಸ್ ಜಖಂ ಮಾಡಿ ಪರಾರಿಯಾಗಿದೆ. ಈ ಎಲ್ಲಾ ಬೆಳವಣಿಗೆಗಳು ನಗರದಲ್ಲಿ ಕೋಮುಗಲಭೆ ವದಂತಿಗಳಿಗೆ ಕಾರಣವಾಗಿದ್ದು, ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿ ಬಂದಿದೆ. ಇಂತಹದ್ದೊಂದು ಸಂದರ್ಭಕ್ಕೆ ಕಾದು ಕುಳಿತಂತಿದ್ದ ಮತಿಗೇಡಿಗಳು ನಾಲಿಗೆ ಮಸೆದುಕೊಂಡು ಕೋಮುರಾಜಕಾರಣಕ್ಕೆ ಇಳಿದಿದ್ದಾರೆ.

ವಾಸ್ತವವಾಗಿ ನಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದವರು ಯಾವ ಕೋಮಿನವರು ಮತ್ತು ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಇದುವರೆಗೂ ಪೊಲೀಸರ ತನಿಖೆಯಲ್ಲಿ ಕಂಡು ಬಂದಿಲ್ಲ. ಇದನ್ನು ಪೂರ್ವವಲಯ ಐಜಿಪಿ ರವಿ.ಎಸ್ ಅವರು ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಇದರ ಸತ್ಯ ಬಯಲಾಗುವ ಮುಂಚೆಯೇ ಸಂಸದ ಬಿ.ವೈ ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಇದು ಹಿಂದೂ ವಿರೋಧಿಗಳ ಕೃತ್ಯ ಎಂದು ಸಾರಿಬಿಟ್ಟಿದ್ದಾರೆ. ನಾಗೇಶನ ಮೇಲೆ ನಡೆದ ಹಲ್ಲೆಗೆ ಪ್ರತಿಯಾಗಿ ಬಟ್ಟೆ ಮಾರ್ಕೆಟ್ ನಲ್ಲಿ ಬಜರಂಗದಳ ಕಾರ್ಯಕರ್ತರು ನಡೆಸಿದ ದಾಳಿಯೂ ಹಿಂದೂಗಳ ಪ್ರತಿಕಾರದ ಗೂಂಡಾಗಿರಿಯೇ ಆಗಿದೆ ಎಂದು ಈ ರಾಜ್ಯದ ಸಚಿವ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ. ಅಲ್ಲಿಗೆ ಶಿವಮೊಗ್ಗದಲ್ಲೊಂದು ರಣರಂಗದ ದಳ್ಳುರಿಗೆ ಎಲ್ಲಾ ವೇದಿಕೆಯನ್ನು ಸಜ್ಜುಗೊಳಿಸುತ್ತಿರುವ ಆತಂಕ ಜನಸಾಮಾನ್ಯರ ನಿದ್ದೆಗೆಡಿಸಿದೆ.

ಕೊರೋನಾ ಸಂದರ್ಭದಲ್ಲೆ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಪ್ರಯತ್ನಗಳು ವಿಫಲವಾಗಿದ್ದವು. ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಷಡ್ಯಂತ್ರಗಳು ಅವರದ್ದೇ ಪಕ್ಷ ಪರಿವಾರದಿಂದ ನಡೆದಿತ್ತು ಎಂಬ ಗುಪ್ತಚರ ವರದಿಯೂ ಬಹಿರಂಗವಾಗಿತ್ತು. ಲಾಕ್ ಡೌನ್ ನಿಂದ ಗುಜರಾತ್‌ನಲ್ಲಿ ಸಿಲುಕಿಕೊಂಡಿದ್ದ ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಏಳು ಜನ ತಬ್ಲಿಘಿಗಳನ್ನು ಖುದ್ದು ಮುಖ್ಯಮಂತ್ರಿಗಳೇ ವಿಶೇಷ ಬಸ್ಸಿನಲ್ಲಿ ಕರೆತರಿಸಿ ಶಿವಮೊಗ್ಗದಲ್ಲಿ ಕ್ವಾರಂಟೈನ್ ಗೊಳಪಡಿಸಿ ನಂತರ ಶಿಕಾರಿಪುರ ತಲುಪಿಸಿದ್ದರು. ರಾಜ್ಯದಲ್ಲಿ ತಬ್ಲಿಘಿಗಳ ವಿರುದ್ದ ಬಿಜೆಪಿ ಮತ್ತು ಪರಿವಾರದ ಸಂಘಟನೆಗಳು ದ್ವೇಷ ಹರಡುವಲ್ಲಿ ನಿರತರಾಗಿದ್ದಾಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂತಹ ಪ್ರಚೋದನೆಗಳನ್ನು ಸಹಿಸುವುದಿಲ್ಲ. ಅಲ್ಪಸಂಖ್ಯಾತರ ಮೇಲೆ ದಾಳಿನಡೆದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿ ತಮ್ಮದೇ ಪಕ್ಷದವರ ಕೋಮುರಾಜಕಾರಣಕ್ಕೆ ಕಡಿವಾಣ ಹಾಕಿದ್ದರು. ಈ ಕಾರಣದಿಂದಾಗಿ ಹಿಂದೂ ಮತೀಯ ಸಂಘಟನೆಗಳಿಗೆ ಯಡಿಯೂರಪ್ಪ ಅಪಥ್ಯವಾಗಿ ಕಂಡಿದ್ದಾರೆ. ಬಹುಶಃ ಗುಪ್ತಚರ ವರದಿಯಂತೆ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಯ ಹುನ್ನಾರವನ್ನು ಯಡಿಯೂರಪ್ಪ ಅವರು ಬಗ್ಗುಬಡಿದಿದ್ದರು.

2010 ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗಲೇ ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಬುರ್ಖಾ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ನೆಪದಲ್ಲಿ ಶಿವಮೊಗ್ಗದಲ್ಲಿ ಭುಗಿಲೆದ್ದ ಗಲಭೆಯಲ್ಲಿ ಇಬ್ಬರೂ ಪೊಲೀಸರ ಗುಂಡಿಗೆ ಬಲಿಯಾಗಿ, ಹತ್ತಾರು ಜನ ಗಾಯಗೊಂಡು, ಲಕ್ಷಾಂತರ ರೂಪಾಯಿಗಳ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗುವುದರೊಂದಿಗೆ ಕೊನೆಗೊಂಡಿತ್ತು.

2015 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಆಡಳಿತವಿರುವಾಗ ನಗರದಲ್ಲಿ ವಿಶ್ವನಾಥ್ ಶೆಟ್ಟಿ ಎಂಬಾತನ ಕೊಲೆಯ ಹಿನ್ನಲೆಯಲ್ಲಿ ನಗರದಲ್ಲಿ ಕೋಮುಗಲಭೆ ನಡೆದಿದ್ದು, ಅಂದಿನ ಇನ್ಸ್‌ಪೆಕ್ಟರ್ ಮಂಜುನಾಥ್, ಡಿವೈಎಸ್ಪಿ ಪಿ.ಓ ಶಿವಕುಮಾರ್ ಅವರುಗಳು ವರ್ಗಾವಣೆಯ ತಲೆದಂಡಕ್ಕೆ ಗುರಿಯಾದರು. ತೀರ್ಥಹಳ್ಳಿಯಲ್ಲಿ ಬಾಲಕಿ ನಂದಿತ ಸಾವಿನ ಪ್ರಕರಣದಲ್ಲೂ ಕೋಮು ರಾಜಕಾರಣದ ದಳ್ಳುರಿಗೆ ತೀರ್ಥಹಳ್ಳಿ ಮತ್ತು ಅವತ್ತಿನ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಹೈರಾಣಾಗಿ ಹೋಗಿದ್ದರು.

ಇದೀಗ ಯಡಿಯೂರಪ್ಪನವರೆ ಮುಖ್ಯಮಂತ್ರಿಗಳಾಗಿರುವಾಗ ಶಿವಮೊಗ್ಗ ನಗರದಲ್ಲಿ ಮತ್ತೊಂದು ಸುತ್ತಿನ ಕೋಮುಗಲಭೆಯ ಆತಂಕ ಮನೆ ಮಾಡಿದೆ. ಘಟನೆ ನಡೆದ ಬೆನ್ನೆಲ್ಲೆ ತರಾತುರಿ ಎಂಬಂತೆ ಸಂಸದ ಬಿ.ವೈ ರಾಘವೇಂದ್ರ ಇದೊಂದು ಮುಸ್ಲಿಂ ಗುಂಪು ನಡೆಸಿದ ದಾಳಿ ಎಂದು ಹೇಳುವ ಮೂಲಕ ದುಡುಕಿದರೆ, ಇಂದು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಎಂದಿನಂತೆ ದ್ವೇಷದ ಮಾತುಗಳನ್ನಾಡಿದ್ದಾರೆ. ಮುಸ್ಲಿಂ ಗೂಂಡಾಗಳು ನಾಗೇಶನ ಮೇಲೆ ನಡೆಸಿದ ಹಲ್ಲೆಗೆ ಪ್ರತಿಯಾಗಿ ಹಿಂದೂಗಳು ಗೂಂಡಾಗಿರಿ ಮಾಡಿದ್ದಾರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಅಲ್ಲಿಗೆ ಎಲ್ಲವೂ ಸ್ಪಷ್ಟವಾಗಿದೆ. ನಗರದ ಜನತೆ ಆತಂಕದಿಂದ ದಿನದೂಡುವಂತಾಗಿದೆ.

ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವೆ ರಾಜಕೀಯ ಸಂಬಂಧ ದಿನದಿಂದ ದಿನ ಹಳಸುತ್ತಲೆ ಇದೆ. ಜಿಲ್ಲೆಗೆ ಈಶ್ವರಪ್ಪ ಉಸ್ತುವಾರಿ ಸಚಿವರಾಗಿದ್ದರೂ ಸಿ.ಎಂ ಪುತ್ರ ಸಂಸದ ಬಿ.ವೈ ರಾಘವೇಂದ್ರ ಜಿಲ್ಲೆಯ ಸಮಗ್ರ ವಹಿವಾಟನ್ನು ತಮ್ಮ ವಶಕ್ಕಿಟ್ಟುಕೊಂಡಿದ್ದಾರೆ. ಪೊಲೀಸ್ ವರಿಷ್ಟಾಧಿಕಾರಿಗಳಿಂದ ಠಾಣಾವ್ಯಾಪ್ತಿಯ ಕಾನ್ಸ್ಟೇಬಲ್ ವರೆಗೂ ಎಲ್ಲಾ ವರ್ಗಾವಣೆಗಳು ಬಿ.ವೈ ರಾಘವೇಂದ್ರ ನ ಮರ್ಜಿಯಲ್ಲೆ ನಡೆದಿವೆ. ಇದು ಈಶ್ವರಪ್ಪ ಅವರ ಅಸಹನೆಗೆ ಕಾರಣವಾಗಿದೆ. ಪ್ರತಿಕಾರಕ್ಕೆ ಈಶ್ವರಪ್ಪ ಕಾಲದ ನಿರೀಕ್ಷೆಯಲ್ಲಿದ್ದಾರೆ. ಹಾಗಂತ ನಗರದಲ್ಲಿ ಕೋಮುಗಲಭೆಯೆಂದೆ ಕರೆಯುತ್ತಿರುವ ಘಟನೆಗಳ ಹಿಂದೆ ಯಡಿಯೂರಪ್ಪ ಅವರಿಗೆ ಇಕ್ಕಟ್ಟು ತಂದಿಡುವ ಮತೀಯ ರಾಜಕಾರಣವಿದೆ ಎಂಬುದನ್ನು ಈಗಲೆ ನಿಖರವಾಗಿ ಹೇಳಲು ಬರುವುದಿಲ್ಲ. ಆದರೆ ಈಶ್ವರಪ್ಪ ಅವರ ಮಾತುಗಳು ಮಾತ್ರ ಕೋಮುಗಲಭೆಯ ಕಿಡಿಯನ್ನು ಹಚ್ಚುವ , ರಾಜಕೀಯ ಏಟುಗಳನ್ನು ಕೊಡುವ ಸೂಚನೆ ನೀಡುತ್ತಿಲ್ಲ ಎಂಬುದನ್ನು‌ ನಿರಾಕರಿಸಲಾಗದು.

  • ಎನ್‌. ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ; ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಮುನ್ನಡೆ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...