Homeಕರ್ನಾಟಕಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

ಕೋಮು ಪ್ರಚೋದನೆ: ತೇಜಸ್ವಿ ಸೂರ್ಯ ಹೇಳಿಕೆಗೆ ಬಿಜೆಪಿ ನಾಯಕರಲ್ಲಿ ಅಸಮಾಧಾನ

- Advertisement -
- Advertisement -

ಬಿಜೆಪಿಯ ಯುವ ಘಟಕದ ಅಧ್ಯಕ್ಷ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ರಾಜಕೀಯ ಜೀವನವನ್ನು ವೃದ್ಧಿಸಿಕೊಳ್ಳಲು ಕೋಮು ಕೇಂದ್ರಿತ ಭಾಷಣಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ ಈಗ ಅವರ ಕೆಲವು ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಪಕ್ಷದ ನಾಯಕರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅವರು ಉಡುಪಿಯ ಕೃಷ್ಣ ಮಠದಲ್ಲಿ ನಡೆದ ‘ವಿಶ್ವಾರ್ಪಣಮ್’ ಸಮಾರಂಭದಲ್ಲಿ ಮಾತನಾಡುತ್ತಾ, “ಎಲ್ಲ ಮಠ ಮಂದಿರಗಳು ವರ್ಷಕ್ಕೆ ಗುರಿಯನ್ನು ನಿಗದಿ ಪಡಿಸಿ ಬೇರೆ ಧರ್ಮದವರನ್ನು ವಾಪಾಸ್ಸು ಹಿಂದೂ ಧರ್ಮಕ್ಕೆ ಕರೆತರಬೇಕು. ಕೇವಲ ಭಾರತದಲ್ಲಿರುವ ಮುಸ್ಲಿಮರನ್ನು ಮಾತ್ರವಲ್ಲ ಪಾಕಿಸ್ತಾನದಲ್ಲಿರುವ ಮುಸ್ಲಿಮರನ್ನು ಕೂಡ ಹಿಂದುಗಳಾಗಿ ಪರಿವರ್ತನೆ ಮಾಡಬೇಕಾಗಿರುವುದು ನಮ್ಮ ಆದ್ಯ ಕರ್ತವ್ಯವಾಗಿದೆ” ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿ ಭಾರಿ ವಿವಾದ ಸೃಷ್ಟಿಯಾಗಿತ್ತು. ತಮ್ಮ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ ತೇಜಸ್ವಿ ಸೂರ್ಯ, “ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ತಪ್ಪಿಸಬಹುದಾಗಿದ್ದ ವಿವಾದವನ್ನು ಉಂಟುಮಾಡಿದ ನನ್ನ ಭಾಷಣದ ಕೆಲವು ಹೇಳಿಕೆಗಳಿಗಾಗಿ ವಿಷಾದಿಸುತ್ತೇನೆ. ಹಾಗಾಗಿ ಈ ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆಯುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.

ಮುಂಬರುವ ಗೋವಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಹಿಂದೂ-ಕ್ರಿಶ್ಚಿಯನ್ ಮತಗಳ ಬಲವರ್ಧನೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ತೇಜಸ್ವಿ ಸೂರ್ಯ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಬರುತ್ತಿರುವ ಪ್ರತಿಕ್ರಿಯೆಗಳನ್ನು ಗಮನಿಸಿರುವ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಸೂರ್ಯ ಅವರು ತಮ್ಮ ಹಲವು ಕೋಮುವಾದಿ ಹೇಳಿಕೆಗಳಿಂದ ಬಿಜೆಪಿ ನಾಯಕರು ಮೌನವಹಿಸಿದ್ದರೂ ಇತ್ತೀಚೆಗೆ ಉಡುಪಿ ಮಠದಲ್ಲಿ ಅವರು ನೀಡಿದ್ದ ಹೇಳಿಕೆಗೆ ಸಮ್ಮತಿ ಸೂಚಿಸಿಲ್ಲ.

“ನಮ್ಮ ಪಕ್ಷವು ಸಬ್ಕಾ ಸಾಥ್, ಸಬ್ಕಾ ವಿಕಾಸ್ ಪ್ರತಿಪಾದಿಸುತ್ತದೆ. ಪೇಜಾವರ ಮಠದಲ್ಲಿ ಅವರು ಹೇಳಿಕೆ ನೀಡಿದ್ದರು. ಸ್ವಾಮೀಜಿ ಹಿಂದೂ ಧರ್ಮದ ಪರವಾಗಿ ನಿಂತಿದ್ದರೂ, ಈ ಮಠವು ಎಲ್ಲರನ್ನೂ ಒಳಗೊಳ್ಳುವ ಸ್ವಭಾವ ಹೊಂದಿದೆ. ಮಠದ ವೇದಿಕೆಯನ್ನು ಬಳಸಿಕೊಂಡು ಹೇಳಿಕೆ ನೀಡಿದ್ದಕ್ಕೆ ಮಠದಲ್ಲಿಯೂ ಅಸಮಾಧಾನ ವ್ಯಕ್ತವಾಗಿದೆ ಎಂಬ ಭಾವನೆ ರಾಜ್ಯ ಬಿಜೆಪಿ ನಾಯಕರಲ್ಲಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಸೂರ್ಯ ಅವರ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಲ್ಲಿ ಕೇಳಿದಾಗ, “ಇದಕ್ಕೆ ನನ್ನ ಯಾವುದೇ ಪ್ರತಿಕ್ರಿಯೆಗಳಿಲ್ಲ. ಸೂರ್ಯ ನಮ್ಮ ಪಕ್ಷದ ನಾಯಕ ಮತ್ತು ಅಂತಹ ಯಾವುದೇ ಸಮಸ್ಯೆ ಇದ್ದಾಗ, ನಾನು ನೇರವಾಗಿ ಅವರೊಂದಿಗೆ ಮಾತನಾಡುತ್ತೇನೆ, ಮಾಧ್ಯಮಗಳೊಂದಿಗೆ ಅಲ್ಲ” ಎಂದು ತಿಳಿಸಿರುವುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ನಿಕಟವರ್ತಿ ಎಂದೇ ಗುರುತಿಸಲಾಗಿರುವ ಸೂರ್ಯ ಅವರು ತಮ್ಮ ಕಾರ್ಯವೈಖರಿಯಿಂದ ಹಲವಾರು ರಾಜ್ಯ ನಾಯಕರನ್ನು ತಪ್ಪು ದಾರಿಗೆ ಎಳೆದಿದ್ದಾರೆ. ರಾಜ್ಯ ನಾಯಕರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ ಎಂಬಂತೆ ವರ್ತಿಸುತ್ತಾರೆ ಎಂದು ಕರ್ನಾಟಕ ಬಿಜೆಪಿ ನಾಯಕರೊಬ್ಬರು ಟೀಕಿಸಿದ್ದಾರೆ.


ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...